< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 19 >

1 ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.
וַיָּשָׁב יְהוֹשָׁפָט מֶֽלֶךְ־יְהוּדָה אֶל־בֵּיתוֹ בְּשָׁלוֹם לִֽירוּשָׁלָֽ͏ִם׃
2 ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.
וַיֵּצֵא אֶל־פָּנָיו יֵהוּא בֶן־חֲנָנִי הַחֹזֶה וַיֹּאמֶר אֶל־הַמֶּלֶךְ יְהוֹשָׁפָט הֲלָרָשָׁע לַעְזֹר וּלְשֹׂנְאֵי יְהוָה תֶּאֱהָב וּבָזֹאת עָלֶיךָ קֶּצֶף מִלִּפְנֵי יְהוָֽה׃
3 ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.
אֲבָל דְּבָרִים טוֹבִים נִמְצְאוּ עִמָּךְ כִּֽי־בִעַרְתָּ הָאֲשֵׁרוֹת מִן־הָאָרֶץ וַהֲכִינוֹתָ לְבָבְךָ לִדְרֹשׁ הָֽאֱלֹהִֽים׃
4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.
וַיֵּשֶׁב יְהוֹשָׁפָט בִּירוּשָׁלָ͏ִם וַיָּשָׁב וַיֵּצֵא בָעָם מִבְּאֵר שֶׁבַע עַד־הַר אֶפְרַיִם וַיְשִׁיבֵם אֶל־יְהוָה אֱלֹהֵי אֲבוֹתֵיהֶֽם׃
5 ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ,
וַיַּעֲמֵד שֹֽׁפְטִים בָּאָרֶץ בְּכָל־עָרֵי יְהוּדָה הַבְּצֻרוֹת לְעִיר וָעִֽיר׃
6 “ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.
וַיֹּאמֶר אֶל־הַשֹּֽׁפְטִים רְאוּ מָֽה־אַתֶּם עֹשִׂים כִּי לֹא לְאָדָם תִּשְׁפְּטוּ כִּי לַיהוָה וְעִמָּכֶם בִּדְבַר מִשְׁפָּֽט׃
7 ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.
וְעַתָּה יְהִי פַֽחַד־יְהוָה עֲלֵיכֶם שִׁמְרוּ וַעֲשׂוּ כִּֽי־אֵין עִם־יְהוָה אֱלֹהֵינוּ עַוְלָה וּמַשֹּׂא פָנִים וּמִקַּח־שֹֽׁחַד׃
8 ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,
וְגַם בִּירוּשָׁלִַם הֶעֱמִיד יְהוֹשָׁפָט מִן־הַלְוִיִּם וְהַכֹּהֲנִים וּמֵרָאשֵׁי הָאָבוֹת לְיִשְׂרָאֵל לְמִשְׁפַּט יְהוָה וְלָרִיב וַיָּשֻׁבוּ יְרוּשָׁלָֽ͏ִם׃
9 “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.
וַיְצַו עֲלֵיהֶם לֵאמֹר כֹּה תַעֲשׂוּן בְּיִרְאַת יְהוָה בֶּאֱמוּנָה וּבְלֵבָב שָׁלֵֽם׃
10 ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.
וְכָל־רִיב אֲשֶׁר־יָבוֹא עֲלֵיכֶם מֵאֲחֵיכֶם ׀ הַיֹּשְׁבִים בְּעָרֵיהֶם בֵּֽין־דָּם ׀ לְדָם בֵּין־תּוֹרָה לְמִצְוָה לְחֻקִּים וּלְמִשְׁפָּטִים וְהִזְהַרְתֶּם אֹתָם וְלֹא יֶאְשְׁמוּ לַיהוָה וְהָֽיָה־קֶצֶף עֲלֵיכֶם וְעַל־אֲחֵיכֶם כֹּה תַעֲשׂוּן וְלֹא תֶאְשָֽׁמוּ׃
11 “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.
וְהִנֵּה אֲמַרְיָהוּ כֹהֵן הָרֹאשׁ עֲלֵיכֶם לְכֹל דְּבַר־יְהוָה וּזְבַדְיָהוּ בֶן־יִשְׁמָעֵאל הַנָּגִיד לְבֵית־יְהוּדָה לְכֹל דְּבַר־הַמֶּלֶךְ וְשֹׁטְרִים הַלְוִיִּם לִפְנֵיכֶם חִזְקוּ וַעֲשׂוּ וִיהִי יְהוָה עִם־הַטּֽוֹב׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 19 >