< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 23 >

1 ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.
La septième année, Jehojada se fortifia et prit les chefs de centaines - Azaria, fils de Jerocham, Ismaël, fils de Jochanan, Azaria, fils d'Obed, Maaséja, fils d'Adaja, et Élischaphat, fils de Zicri - pour faire alliance avec lui.
2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.
Ils firent le tour de Juda et rassemblèrent les Lévites de toutes les villes de Juda, ainsi que les chefs de famille d'Israël, et ils vinrent à Jérusalem.
3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.
Toute l'assemblée fit alliance avec le roi dans la maison de Dieu. Jehojada leur dit: « Voici, le fils du roi doit régner, comme Yahvé l'a dit au sujet des fils de David.
4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.
Voici ce que vous devez faire: un tiers d'entre vous, qui entre le jour du sabbat, parmi les prêtres et les lévites, sera chargé de garder les seuils.
5 ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.
Un tiers sera à la maison du roi, et un tiers à la porte de la fondation. Tout le peuple sera dans les parvis de la maison de Yahvé.
6 ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.
Mais que personne n'entre dans la maison de l'Éternel, sauf les prêtres et ceux qui font le service des Lévites. Ils entreront, car ils sont saints, mais tout le peuple devra suivre les instructions de l'Éternel.
7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.
Les lévites entoureront le roi, chacun ayant ses armes à la main. Quiconque entrera dans la maison, qu'il soit tué. Soyez avec le roi quand il entrera et quand il sortira. »
8 ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.
Les Lévites et tout Juda firent donc tout ce que le prêtre Jehoïada avait ordonné. Ils prirent chacun leurs hommes, ceux qui devaient entrer le jour du sabbat, avec ceux qui devaient sortir le jour du sabbat, car le prêtre Jehoïada ne renvoyait pas le service.
9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,
Le prêtre Jehojada remit aux chefs de centaines les lances, les boucles et les boucliers qui avaient appartenu au roi David et qui se trouvaient dans la maison de Dieu.
10 ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.
Il plaça tout le peuple, chacun son arme à la main, depuis le côté droit de la maison jusqu'au côté gauche de la maison, près de l'autel et de la maison, autour du roi.
11 ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
Puis on fit sortir le fils du roi, on lui mit la couronne, on lui donna l'alliance et on le fit roi. Jehoïada et ses fils l'oignirent, et ils dirent: « Vive le roi! »
12 ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
Lorsqu'Athalie entendit le bruit du peuple qui courait et louait le roi, elle entra avec le peuple dans la maison de l'Éternel.
13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.
Elle regarda, et voici que le roi se tenait à l'entrée, près de sa colonne, avec les chefs et les trompettes près du roi. Tout le peuple du pays se réjouissait et sonnait des trompettes. Les chanteurs jouaient aussi des instruments de musique et dirigeaient les chants de louange. Alors Athalie déchira ses vêtements et dit: « Trahison! Trahison! »
14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
Le prêtre Jehoïada fit sortir les chefs de centaines qui étaient à la tête de l'armée, et leur dit: « Faites-la sortir entre les rangs, et que celui qui la suivra soit tué par l'épée. » Car le prêtre avait dit: « Ne la tuez pas dans la maison de l'Éternel. »
15 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.
Ils lui firent donc place. Elle alla jusqu'à l'entrée de la porte des chevaux de la maison du roi, et c'est là qu'ils la tuèrent.
16 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.
Jehojada fit une alliance entre lui, tout le peuple et le roi, pour qu'ils soient le peuple de l'Éternel.
17 ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.
Tout le peuple alla à la maison de Baal, la démolit, brisa ses autels et ses images, et tua Mattan, prêtre de Baal, devant les autels.
18 ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.
Jehojada plaça les officiers de la maison de l'Éternel sous la direction des prêtres lévitiques, que David avait répartis dans la maison de l'Éternel, pour qu'ils offrent les holocaustes de l'Éternel, comme il est écrit dans la loi de Moïse, avec allégresse et en chantant, selon l'ordre de David.
19 ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.
Il plaça les gardiens aux portes de la maison de l'Éternel, afin que n'entre pas celui qui était impur en quoi que ce soit.
20 ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.
Il prit les chefs de centaines, les nobles, les gouverneurs du peuple et tout le peuple du pays, et fit descendre le roi de la maison de l'Éternel. Ils entrèrent par la porte supérieure dans la maison du roi, et ils placèrent le roi sur le trône du royaume.
21 ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Et tout le peuple du pays se réjouit, et la ville fut tranquille. Ils avaient tué Athalie par l'épée.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 23 >