< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 26 >
1 ಆಗ ಯೆಹೂದ ಜನರೆಲ್ಲರು ಹದಿನಾರು ವರ್ಷದವನಾದ ಉಜ್ಜೀಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
猶大眾民立亞瑪謝的兒子烏西雅接續他父作王,那時他年十六歲。(
2 ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.
亞瑪謝與他列祖同睡之後,烏西雅收回以祿仍歸猶大,又重新修理。)
3 ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.
烏西雅登基的時候年十六歲,在耶路撒冷作王五十二年。他母親名叫耶可利雅,是耶路撒冷人。
4 ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
烏西雅行耶和華眼中看為正的事,效法他父亞瑪謝一切所行的;
5 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.
通曉上帝默示,撒迦利亞在世的時候,烏西雅定意尋求上帝;他尋求耶和華,上帝就使他亨通。
6 ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
他出去攻擊非利士人,拆毀了迦特城、雅比尼城,和亞實突城;在非利士人中,在亞實突境內,又建築了些城。
7 ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.
上帝幫助他攻擊非利士人和住在姑珥‧巴力的阿拉伯人,並米烏尼人。
8 ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.
亞捫人給烏西雅進貢。他的名聲傳到埃及,因他甚是強盛。
9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.
烏西雅在耶路撒冷的角門和谷門,並城牆轉彎之處,建築城樓,且甚堅固;
10 ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
又在曠野與高原和平原,建築望樓,挖了許多井,因他的牲畜甚多;又在山地和佳美之地,有農夫和修理葡萄園的人,因為他喜悅農事。
11 ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
烏西雅又有軍兵,照書記耶利和官長瑪西雅所數點的,在王的一個將軍哈拿尼雅手下,分隊出戰。
12 ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.
族長、大能勇士的總數共有二千六百人,
13 ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.
他們手下的軍兵共有三十萬七千五百人,都有大能,善於爭戰,幫助王攻擊仇敵。
14 ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು.
烏西雅為全軍預備盾牌、槍、盔、甲、弓,和甩石的機弦,
15 ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.
又在耶路撒冷使巧匠做機器,安在城樓和角樓上,用以射箭發石。烏西雅的名聲傳到遠方;因為他得了非常的幫助,甚是強盛。
16 ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.
他既強盛,就心高氣傲,以致行事邪僻,干犯耶和華-他的上帝,進耶和華的殿,要在香壇上燒香。
17 ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,
祭司亞撒利雅率領耶和華勇敢的祭司八十人,跟隨他進去。
18 ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.
他們就阻擋烏西雅王,對他說:「烏西雅啊,給耶和華燒香不是你的事,乃是亞倫子孫承接聖職祭司的事。你出聖殿吧!因為你犯了罪。你行這事,耶和華上帝必不使你得榮耀。」
19 ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು.
烏西雅就發怒,手拿香爐要燒香。他向祭司發怒的時候,在耶和華殿中香壇旁眾祭司面前,額上忽然發出大痲瘋。
20 ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.
大祭司亞撒利雅和眾祭司觀看,見他額上發出大痲瘋,就催他出殿;他自己也急速出去,因為耶和華降災與他。
21 ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.
烏西雅王長大痲瘋直到死日,因此住在別的宮裏,與耶和華的殿隔絕。他兒子約坦管理家事,治理國民。
22 ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.
烏西雅其餘的事,自始至終都是亞摩斯的兒子先知以賽亞所記的。
23 ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
烏西雅與他列祖同睡,葬在王陵的田間他列祖的墳地裏;因為人說,他是長大痲瘋的。他兒子約坦接續他作王。