< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 27 >
1 ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.
Двадцати пяти лет был Иоафам, когда воцарился, и шестнадцать лет царствовал в Иерусалиме; имя матери его Иеруша, дочь Садока.
2 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
И делал он угодное в очах Господних точно так, как делал Озия, отец его, только он не входил в храм Господень, и народ продолжал еще грешить.
3 ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.
Он построил верхние ворота дома Господня, и многое построил на стене Офела;
4 ಇದಲ್ಲದೆ ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳ ಪ್ರದೇಶದಲ್ಲಿ ಕೋಟೆಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.
и города построил на горе Иудейской, и в лесах построил дворцы и башни.
5 ಯೋತಾಮನು ಅಮ್ಮೋನ್ಯರ ಅರಸನ ಸಂಗಡ ಯುದ್ಧಮಾಡಿ ಅವನನ್ನು ಜಯಿಸಿದನು. ಆದ್ದರಿಂದ ಅಮ್ಮೋನಿಯರು ಅದೇ ವರ್ಷದಲ್ಲಿ 3,400 ಕಿಲೋಗ್ರಾಂ ಬೆಳ್ಳಿ, 1,600 ಮೆಟ್ರಿಕ್ ಟನ್ ಗೋಧಿ, 1,350 ಮೆಟ್ರಿಕ್ ಟನ್ ಜವೆಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನಿಯರು ಎರಡನೆಯ ವರ್ಷದಲ್ಲಿಯೂ, ಮೂರನೆಯ ವರ್ಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
Он воевал с царем Аммонитян и одолел их, и дали ему Аммонитяне в тот год сто талантов серебра и десять тысяч коров пшеницы и ячменя десять тысяч. Это давали ему Аммонитяне и на другой год, и на третий.
6 ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು.
Так силен был Иоафам потому, что устроял пути свои пред лицем Господа Бога своего.
7 ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
Прочие деяния Иоафама и все войны его и поведение его описаны в книге царей Израильских и Иудейских:
8 ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.
двадцати пяти лет был он, когда воцарился, и шестнадцать лет царствовал в Иерусалиме.
9 ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.
И почил Иоафам с отцами своими, и похоронили его в городе Давидовом. И воцарился Ахаз, сын его, вместо него.