< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >

1 ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.
יְחִזְקִיָּ֣הוּ מָלַ֗ךְ בֶּן־עֶשְׂרִ֤ים וְחָמֵשׁ֙ שָׁנָ֔ה וְעֶשְׂרִ֤ים וָתֵ֙שַׁע֙ שָׁנָ֔ה מָלַ֖ךְ בִּירוּשָׁלִָ֑ם וְשֵׁ֣ם אִמּ֔וֹ אֲבִיָּ֖ה בַּת־זְכַרְיָֽהוּ׃
2 ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
וַיַּ֥עַשׂ הַיָּשָׁ֖ר בְּעֵינֵ֣י יְהוָ֑ה כְּכֹ֥ל אֲשֶׁר־עָשָׂ֖ה דָּוִ֥יד אָבִֽיו׃
3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.
ה֣וּא בַשָּׁנָה֩ הָרִאשׁוֹנָ֨ה לְמָלְכ֜וֹ בַּחֹ֣דֶשׁ הָרִאשׁ֗וֹן פָּתַ֛ח אֶת־דַּלְת֥וֹת בֵּית־יְהוָ֖ה וַֽיְחַזְּקֵֽם׃
4 ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,
וַיָּבֵ֥א אֶת־הַכֹּהֲנִ֖ים וְאֶת־הַלְוִיִּ֑ם וַיַּֽאַסְפֵ֖ם לִרְח֥וֹב הַמִּזְרָֽח׃
5 “ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
וַיֹּ֥אמֶר לָהֶ֖ם שְׁמָע֣וּנִי הַלְוִיִּ֑ם עַתָּ֣ה הִֽתְקַדְּשׁ֗וּ וְקַדְּשׁוּ֙ אֶת־בֵּ֤ית יְהוָה֙ אֱלֹהֵ֣י אֲבֹתֵיכֶ֔ם וְהוֹצִ֥יאוּ אֶת־הַנִּדָּ֖ה מִן־הַקֹּֽדֶשׁ׃
6 ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
כִּֽי־מָעֲל֣וּ אֲבֹתֵ֗ינוּ וְעָשׂ֥וּ הָרַ֛ע בְּעֵינֵ֥י יְהוָֽה־אֱלֹהֵ֖ינוּ וַיַּֽעַזְבֻ֑הוּ וַיַּסֵּ֧בּוּ פְנֵיהֶ֛ם מִמִּשְׁכַּ֥ן יְהוָ֖ה וַיִּתְּנוּ־עֹֽרֶף׃
7 ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.
גַּ֣ם סָֽגְר֞וּ דַּלְת֣וֹת הָאוּלָ֗ם וַיְכַבּוּ֙ אֶת־הַנֵּר֔וֹת וּקְטֹ֖רֶת לֹ֣א הִקְטִ֑ירוּ וְעֹלָה֙ לֹא־הֶעֱל֣וּ בַקֹּ֔דֶשׁ לֵאלֹהֵ֖י יִשְׂרָאֵֽל׃
8 ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.
וַיְהִי֙ קֶ֣צֶף יְהוָ֔ה עַל־יְהוּדָ֖ה וִירוּשָׁלִָ֑ם וַיִּתְּנֵ֤ם לְזַֽעֲוָה֙ לְשַׁמָּ֣ה וְלִשְׁרֵקָ֔ה כַּאֲשֶׁ֛ר אַתֶּ֥ם רֹאִ֖ים בְּעֵינֵיכֶֽם׃
9 ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.
וְהִנֵּ֛ה נָפְל֥וּ אֲבוֹתֵ֖ינוּ בֶּחָ֑רֶב וּבָנֵ֨ינוּ וּבְנוֹתֵ֧ינוּ וְנָשֵׁ֛ינוּ בַּשְּׁבִ֖י עַל־זֹֽאת׃
10 ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
עַתָּה֙ עִם־לְבָבִ֔י לִכְר֣וֹת בְּרִ֔ית לַיהוָ֖ה אֱלֹהֵ֣י יִשְׂרָאֵ֑ל וְיָשֹׁ֥ב מִמֶּ֖נּוּ חֲר֥וֹן אַפּֽוֹ׃
11 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.
בָּנַ֕י עַתָּ֖ה אַל־תִּשָּׁל֑וּ כִּֽי־בָכֶ֞ם בָּחַ֣ר יְהוָ֗ה לַעֲמֹ֤ד לְפָנָיו֙ לְשָׁ֣רְת֔וֹ וְלִהְי֥וֹת ל֖וֹ מְשָׁרְתִ֥ים וּמַקְטִרִֽים׃ ס
12 ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,
וַיָּקֻ֣מוּ הַ֠לְוִיִּם מַ֣חַת בֶּן־עֲמָשַׂ֞י וְיוֹאֵ֣ל בֶּן־עֲזַרְיָהוּ֮ מִן־בְּנֵ֣י הַקְּהָתִי֒ וּמִן־בְּנֵ֣י מְרָרִ֔י קִ֚ישׁ בֶּן־עַבְדִּ֔י וַעֲזַרְיָ֖הוּ בֶּן־יְהַלֶּלְאֵ֑ל וּמִן־הַגֵּ֣רְשֻׁנִּ֔י יוֹאָח֙ בֶּן־זִמָּ֔ה וְעֵ֖דֶן בֶּן־יוֹאָֽח׃
13 ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಹೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,
וּמִן־בְּנֵי֙ אֱלִ֣יצָפָ֔ן שִׁמְרִ֖י וִיעִיאֵ֑ל וּמִן־בְּנֵ֣י אָסָ֔ף זְכַרְיָ֖הוּ וּמַתַּנְיָֽהוּ׃ ס
14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮಿ; ಯೆದುತೂನ್ಯರಲ್ಲಿ ಶೆಮಾಯ ಹಾಗೂ ಉಜ್ಜೀಯೇಲ್.
וּמִן־בְּנֵ֥י הֵימָ֖ן יְחִיאֵ֣ל וְשִׁמְעִ֑י ס וּמִן־בְּנֵ֣י יְדוּת֔וּן שְׁמַֽעְיָ֖ה וְעֻזִּיאֵֽל׃
15 ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.
וַיַּֽאַסְפ֤וּ אֶת־אֲחֵיהֶם֙ וַיִּֽתְקַדְּשׁ֔וּ וַיָּבֹ֥אוּ כְמִצְוַת־הַמֶּ֖לֶךְ בְּדִבְרֵ֣י יְהוָ֑ה לְטַהֵ֖ר בֵּ֥ית יְהוָֽה׃
16 ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
וַיָּבֹ֣אוּ הַ֠כֹּהֲנִים לִפְנִ֣ימָה בֵית־יְהוָה֮ לְטַהֵר֒ וַיּוֹצִ֗יאוּ אֵ֤ת כָּל־הַטֻּמְאָה֙ אֲשֶׁ֤ר מָֽצְאוּ֙ בְּהֵיכַ֣ל יְהוָ֔ה לַחֲצַ֖ר בֵּ֣ית יְהוָ֑ה וַֽיְקַבְּלוּ֙ הַלְוִיִּ֔ם לְהוֹצִ֥יא לְנַֽחַל־קִדְר֖וֹן חֽוּצָה׃
17 ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.
וַ֠יָּחֵלּוּ בְּאֶחָ֞ד לַחֹ֣דֶשׁ הָרִאשׁוֹן֮ לְקַדֵּשׁ֒ וּבְי֧וֹם שְׁמוֹנָ֣ה לַחֹ֗דֶשׁ בָּ֚אוּ לְאוּלָ֣ם יְהוָ֔ה וַיְקַדְּשׁ֥וּ אֶת־בֵּית־יְהוָ֖ה לְיָמִ֣ים שְׁמוֹנָ֑ה וּבְי֨וֹם שִׁשָּׁ֥ה עָשָׂ֛ר לַחֹ֥דֶשׁ הָרִאשׁ֖וֹן כִּלּֽוּ׃ ס
18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.
וַיָּב֤וֹאוּ פְנִ֙ימָה֙ אֶל־חִזְקִיָּ֣הוּ הַמֶּ֔לֶךְ וַיֹּ֣אמְר֔וּ טִהַ֖רְנוּ אֶת־כָּל־בֵּ֣ית יְהוָ֑ה אֶת־מִזְבַּ֤ח הָעוֹלָה֙ וְאֶת־כָּל־כֵּלָ֔יו וְאֶת־שֻׁלְחַ֥ן הַֽמַּעֲרֶ֖כֶת וְאֶת־כָּל־כֵּלָֽיו׃
19 ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು.
וְאֵ֣ת כָּל־הַכֵּלִ֗ים אֲשֶׁ֣ר הִזְנִיחַ֩ הַמֶּ֨לֶךְ אָחָ֧ז בְּמַלְכוּת֛וֹ בְּמַעֲל֖וֹ הֵכַ֣נּוּ וְהִקְדָּ֑שְׁנוּ וְהִנָּ֕ם לִפְנֵ֖י מִזְבַּ֥ח יְהוָֽה׃ ס
20 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.
וַיַּשְׁכֵּם֙ יְחִזְקִיָּ֣הוּ הַמֶּ֔לֶךְ וַיֶּאֱסֹ֕ף אֵ֖ת שָׂרֵ֣י הָעִ֑יר וַיַּ֖עַל בֵּ֥ית יְהוָֽה׃
21 ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.
וַיָּבִ֣יאוּ פָרִים־שִׁבְעָה֩ וְאֵילִ֨ים שִׁבְעָ֜ה וּכְבָשִׂ֣ים שִׁבְעָ֗ה וּצְפִירֵ֨י עִזִּ֤ים שִׁבְעָה֙ לְחַטָּ֔את עַל־הַמַּמְלָכָ֥ה וְעַל־הַמִּקְדָּ֖שׁ וְעַל־יְהוּדָ֑ה וַיֹּ֗אמֶר לִבְנֵ֤י אַהֲרֹן֙ הַכֹּ֣הֲנִ֔ים לְהַעֲל֖וֹת עַל־מִזְבַּ֥ח יְהוָֽה׃
22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.
וַֽיִּשְׁחֲטוּ֙ הַבָּקָ֔ר וַיְקַבְּל֤וּ הַכֹּֽהֲנִים֙ אֶת־הַדָּ֔ם וַֽיִּזְרְק֖וּ הַמִּזְבֵּ֑חָה וַיִּשְׁחֲט֣וּ הָאֵלִ֗ים וַיִּזְרְק֤וּ הַדָּם֙ הַמִּזְבֵּ֔חָה וַֽיִּשְׁחֲטוּ֙ הַכְּבָשִׂ֔ים וַיִּזְרְק֥וּ הַדָּ֖ם הַמִּזְבֵּֽחָה׃
23 ಅರಸನ ಮುಂದೆಯೂ, ಸಭೆಯ ಮುಂದೆಯೂ ದೋಷಪರಿಹಾರದ ಬಲಿಗಾಗಿ ತಂದ ಹೋತಗಳನ್ನು ಹತ್ತಿರ ತೆಗೆದುಕೊಂಡು ಬಂದು, ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
וַיַּגִּ֙ישׁוּ֙ אֶת־שְׂעִירֵ֣י הַֽחַטָּ֔את לִפְנֵ֥י הַמֶּ֖לֶךְ וְהַקָּהָ֑ל וַיִּסְמְכ֥וּ יְדֵיהֶ֖ם עֲלֵיהֶֽם׃
24 ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.
וַיִּשְׁחָטוּם֙ הַכֹּ֣הֲנִ֔ים וַֽיְחַטְּא֤וּ אֶת־דָּמָם֙ הַמִּזְבֵּ֔חָה לְכַפֵּ֖ר עַל־כָּל־יִשְׂרָאֵ֑ל כִּ֤י לְכָל־יִשְׂרָאֵל֙ אָמַ֣ר הַמֶּ֔לֶךְ הָעוֹלָ֖ה וְהַחַטָּֽאת׃
25 ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.
וַיַּֽעֲמֵ֨ד אֶת־הַלְוִיִּ֜ם בֵּ֣ית יְהוָ֗ה בִּמְצִלְתַּ֙יִם֙ בִּנְבָלִ֣ים וּבְכִנֹּר֔וֹת בְּמִצְוַ֥ת דָּוִ֛יד וְגָ֥ד חֹזֵֽה־הַמֶּ֖לֶךְ וְנָתָ֣ן הַנָּבִ֑יא כִּ֧י בְיַד־יְהוָ֛ה הַמִּצְוָ֖ה בְּיַד־נְבִיאָֽיו׃ ס
26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.
וַיַּֽעַמְד֤וּ הַלְוִיִּם֙ בִּכְלֵ֣י דָוִ֔יד וְהַכֹּהֲנִ֖ים בַּחֲצֹצְרֽוֹת׃ ס
27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.
וַיֹּ֙אמֶר֙ חִזְקִיָּ֔הוּ לְהַעֲל֥וֹת הָעֹלָ֖ה לְהַמִּזְבֵּ֑חַ וּבְעֵ֞ת הֵחֵ֣ל הָֽעוֹלָ֗ה הֵחֵ֤ל שִׁיר־יְהוָה֙ וְהַחֲצֹ֣צְר֔וֹת וְעַ֨ל־יְדֵ֔י כְּלֵ֖י דָּוִ֥יד מֶֽלֶךְ־יִשְׂרָאֵֽל׃
28 ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.
וְכָל־הַקָּהָל֙ מִֽשְׁתַּחֲוִ֔ים וְהַשִּׁ֣יר מְשׁוֹרֵ֔ר וְהַחֲצֹצְר֖וֹת מַחְצְרִ֑ים הַכֹּ֕ל עַ֖ד לִכְל֥וֹת הָעֹלָֽה׃
29 ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.
וּכְכַלּ֖וֹת לְהַעֲל֑וֹת כָּרְע֗וּ הַמֶּ֛לֶךְ וְכָֽל־הַנִּמְצְאִ֥ים אִתּ֖וֹ וַיִּֽשְׁתַּחֲוֽוּ׃
30 ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.
וַ֠יֹּאמֶר יְחִזְקִיָּ֨הוּ הַמֶּ֤לֶךְ וְהַשָּׂרִים֙ לַלְוִיִּ֔ם לְהַלֵּל֙ לַֽיהוָ֔ה בְּדִבְרֵ֥י דָוִ֖יד וְאָסָ֣ף הַחֹזֶ֑ה וַֽיְהַלְלוּ֙ עַד־לְשִׂמְחָ֔ה וַֽיִּקְּד֖וּ וַיִּֽשְׁתַּחֲוֽוּ׃ פ
31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
וַיַּ֨עַן יְחִזְקִיָּ֜הוּ וַיֹּ֗אמֶר עַתָּ֨ה מִלֵּאתֶ֤ם יֶדְכֶם֙ לַיהוָ֔ה גֹּ֧שׁוּ וְהָבִ֛יאוּ זְבָחִ֥ים וְתוֹד֖וֹת לְבֵ֣ית יְהוָ֑ה וַיָּבִ֤יאוּ הַקָּהָל֙ זְבָחִ֣ים וְתוֹד֔וֹת וְכָל־נְדִ֥יב לֵ֖ב עֹלֽוֹת׃
32 ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
וַיְהִ֞י מִסְפַּ֣ר הָעֹלָה֮ אֲשֶׁ֣ר הֵבִ֣יאוּ הַקָּהָל֒ בָּקָ֣ר שִׁבְעִ֔ים אֵילִ֥ים מֵאָ֖ה כְּבָשִׂ֣ים מָאתָ֑יִם לְעֹלָ֥ה לַיהוָ֖ה כָּל־אֵֽלֶּה׃
33 ಪ್ರತಿಷ್ಠೆ ಮಾಡಲಾದವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಮೇಕೆಗಳೂ ಇದ್ದವು.
וְֽהַקֳּדָשִׁ֑ים בָּקָר֙ שֵׁ֣שׁ מֵא֔וֹת וְצֹ֖אן שְׁלֹ֥שֶׁת אֲלָפִֽים׃
34 ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
רַ֤ק הַכֹּֽהֲנִים֙ הָי֣וּ לִמְעָ֔ט וְלֹ֣א יָֽכְל֔וּ לְהַפְשִׁ֖יט אֶת־כָּל־הָעֹל֑וֹת וַֽיְּחַזְּק֞וּם אֲחֵיהֶ֣ם הַלְוִיִּ֗ם עַד־כְּל֤וֹת הַמְּלָאכָה֙ וְעַ֣ד יִתְקַדְּשׁ֣וּ הַכֹּֽהֲנִ֔ים כִּ֤י הַלְוִיִּם֙ יִשְׁרֵ֣י לֵבָ֔ב לְהִתְקַדֵּ֖שׁ מֵֽהַכֹּהֲנִֽים׃
35 ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.
וְגַם־עֹלָ֨ה לָרֹ֜ב בְּחֶלְבֵ֧י הַשְּׁלָמִ֛ים וּבַנְּסָכִ֖ים לָעֹלָ֑ה וַתִּכּ֖וֹן עֲבוֹדַ֥ת בֵּית־יְהוָֽה׃
36 ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.
וַיִּשְׂמַ֤ח יְחִזְקִיָּ֙הוּ֙ וְכָל־הָעָ֔ם עַ֛ל הַהֵכִ֥ין הָאֱלֹהִ֖ים לָעָ֑ם כִּ֥י בְּפִתְאֹ֖ם הָיָ֥ה הַדָּבָֽר׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >