< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >

1 ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.
וַיִּשְׁלַח יְחִזְקִיָּהוּ עַל־כָּל־יִשְׂרָאֵל וִֽיהוּדָה וְגַֽם־אִגְּרוֹת כָּתַב עַל־אֶפְרַיִם וּמְנַשֶּׁה לָבוֹא לְבֵית־יְהוָה בִּֽירוּשָׁלָ͏ִם לַעֲשׂוֹת פֶּסַח לַיהוָה אֱלֹהֵי יִשְׂרָאֵֽל׃
2 ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.
וַיִּוָּעַץ הַמֶּלֶךְ וְשָׂרָיו וְכָל־הַקָּהָל בִּירוּשָׁלָ͏ִם לַעֲשׂוֹת הַפֶּסַח בַּחֹדֶשׁ הַשֵּׁנִֽי׃
3 ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.
כִּי לֹא יָכְלוּ לַעֲשֹׂתוֹ בָּעֵת הַהִיא כִּי הַכֹּהֲנִים לֹֽא־הִתְקַדְּשׁוּ לְמַדַּי וְהָעָם לֹא־נֶאֶסְפוּ לִֽירוּשָׁלָֽ͏ִם׃
4 ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.
וַיִּישַׁר הַדָּבָר בְּעֵינֵי הַמֶּלֶךְ וּבְעֵינֵי כָּל־הַקָּהָֽל׃
5 ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
וַיַּֽעֲמִידוּ דָבָר לְהַעֲבִיר קוֹל בְּכָל־יִשְׂרָאֵל מִבְּאֵֽר־שֶׁבַע וְעַד־דָּן לָבוֹא לַעֲשׂוֹת פֶּסַח לַיהוָה אֱלֹהֵֽי־יִשְׂרָאֵל בִּירוּשָׁלָ͏ִם כִּי לֹא לָרֹב עָשׂוּ כַּכָּתֽוּב׃
6 ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.
וַיֵּלְכוּ הָרָצִים בָּֽאִגְּרוֹת מִיַּד הַמֶּלֶךְ וְשָׂרָיו בְּכָל־יִשְׂרָאֵל וִֽיהוּדָה וּכְמִצְוַת הַמֶּלֶךְ לֵאמֹר בְּנֵי יִשְׂרָאֵל שׁוּבוּ אֶל־יְהוָה אֱלֹהֵי אַבְרָהָם יִצְחָק וְיִשְׂרָאֵל וְיָשֹׁב אֶל־הַפְּלֵיטָה הַנִּשְׁאֶרֶת לָכֶם מִכַּף מַלְכֵי אַשּֽׁוּר׃
7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
וְאַל־תִּֽהְיוּ כַּאֲבֽוֹתֵיכֶם וְכַאֲחֵיכֶם אֲשֶׁר מָעֲלוּ בַּיהוָה אֱלֹהֵי אֲבוֹתֵיהֶם וַיִּתְּנֵם לְשַׁמָּה כַּאֲשֶׁר אַתֶּם רֹאִֽים׃
8 ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.
עַתָּה אַל־תַּקְשׁוּ עָרְפְּכֶם כַּאֲבוֹתֵיכֶם תְּנוּ־יָד לַיהוָה וּבֹאוּ לְמִקְדָּשׁוֹ אֲשֶׁר הִקְדִּישׁ לְעוֹלָם וְעִבְדוּ אֶת־יְהוָה אֱלֹהֵיכֶם וְיָשֹׁב מִכֶּם חֲרוֹן אַפּֽוֹ׃
9 ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.
כִּי בְשׁוּבְכֶם עַל־יְהוָה אֲחֵיכֶם וּבְנֵיכֶם לְרַחֲמִים לִפְנֵי שֽׁוֹבֵיהֶם וְלָשׁוּב לָאָרֶץ הַזֹּאת כִּֽי־חַנּוּן וְרַחוּם יְהוָה אֱלֹהֵיכֶם וְלֹא־יָסִיר פָּנִים מִכֶּם אִם־תָּשׁוּבוּ אֵלָֽיו׃
10 ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
וַיִּֽהְיוּ הָרָצִים עֹבְרִים מֵעִיר ׀ לָעִיר בְּאֶֽרֶץ־אֶפְרַיִם וּמְנַשֶּׁה וְעַד־זְבֻלוּן וַיִּֽהְיוּ מַשְׂחִיקִים עֲלֵיהֶם וּמַלְעִגִים בָּֽם׃
11 ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
אַךְ־אֲנָשִׁים מֵאָשֵׁר וּמְנַשֶּׁה וּמִזְּבֻלוּן נִֽכְנְעוּ וַיָּבֹאוּ לִירוּשָׁלָֽ͏ִם׃
12 ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
גַּם בִּיהוּדָה הָֽיְתָה יַד הָאֱלֹהִים לָתֵת לָהֶם לֵב אֶחָד לַעֲשׂוֹת מִצְוַת הַמֶּלֶךְ וְהַשָּׂרִים בִּדְבַר יְהוָֽה׃
13 ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.
וַיֵּֽאָסְפוּ יְרוּשָׁלִַם עַם־רָב לַעֲשׂוֹת אֶת־חַג הַמַּצּוֹת בַּחֹדֶשׁ הַשֵּׁנִי קָהָל לָרֹב מְאֹֽד׃
14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
וַיָּקֻמוּ וַיָּסִירוּ אֶת־הַֽמִּזְבְּחוֹת אֲשֶׁר בִּירוּשָׁלָ͏ִם וְאֵת כָּל־הַֽמְקַטְּרוֹת הֵסִירוּ וַיַּשְׁלִיכוּ לְנַחַל קִדְרֽוֹן׃
15 ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.
וַיִּשְׁחֲטוּ הַפֶּסַח בְּאַרְבָּעָה עָשָׂר לַחֹדֶשׁ הַשֵּׁנִי וְהַכֹּהֲנִים וְהַלְוִיִּם נִכְלְמוּ וַיִּֽתְקַדְּשׁוּ וַיָּבִיאוּ עֹלוֹת בֵּית יְהוָֽה׃
16 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
וַיַּֽעַמְדוּ עַל־עָמְדָם כְּמִשְׁפָּטָם כְּתוֹרַת מֹשֶׁה אִישׁ־הָאֱלֹהִים הַכֹּֽהֲנִים זֹרְקִים אֶת־הַדָּם מִיַּד הַלְוִיִּֽם׃
17 ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.
כִּי־רַבַּת בַּקָּהָל אֲשֶׁר לֹא־הִתְקַדָּשׁוּ וְהַלְוִיִּם עַל־שְׁחִיטַת הַפְּסָחִים לְכֹל לֹא טָהוֹר לְהַקְדִּישׁ לַיהוָֽה׃
18 ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,
כִּי מַרְבִּית הָעָם רַבַּת מֵֽאֶפְרַיִם וּמְנַשֶּׁה יִשָּׂשכָר וּזְבֻלוּן לֹא הִטֶּהָרוּ כִּֽי־אָכְלוּ אֶת־הַפֶּסַח בְּלֹא כַכָּתוּב כִּי הִתְפַּלֵּל יְחִזְקִיָּהוּ עֲלֵיהֶם לֵאמֹר יְהוָה הַטּוֹב יְכַפֵּר בְּעַֽד׃
19 ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.
כָּל־לְבָבוֹ הֵכִין לִדְרוֹשׁ הָאֱלֹהִים ׀ יְהוָה אֱלֹהֵי אֲבוֹתָיו וְלֹא כְּטָהֳרַת הַקֹּֽדֶשׁ׃
20 ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
וַיִּשְׁמַע יְהוָה אֶל־יְחִזְקִיָּהוּ וַיִּרְפָּא אֶת־הָעָֽם׃
21 ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
וַיַּעֲשׂוּ בְנֵֽי־יִשְׂרָאֵל הַנִּמְצְאִים בִּירוּשָׁלִַם אֶת־חַג הַמַּצּוֹת שִׁבְעַת יָמִים בְּשִׂמְחָה גְדוֹלָה וּֽמְהַלְלִים לַיהוָה יוֹם ׀ בְּיוֹם הַלְוִיִּם וְהַכֹּהֲנִים בִּכְלֵי־עֹז לַיהוָֽה׃
22 ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
וַיְדַבֵּר יְחִזְקִיָּהוּ עַל־לֵב כָּל־הַלְוִיִּם הַמַּשְׂכִּילִים שֵֽׂכֶל־טוֹב לַיהוָה וַיֹּאכְלוּ אֶת־הַמּוֹעֵד שִׁבְעַת הַיָּמִים מְזַבְּחִים זִבְחֵי שְׁלָמִים וּמִתְוַדִּים לַיהוָה אֱלֹהֵי אֲבוֹתֵיהֶֽם׃
23 ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.
וַיִּוָּֽעֲצוּ כָּל־הַקָּהָל לַעֲשׂוֹת שִׁבְעַת יָמִים אֲחֵרִים וַיַּֽעֲשׂוּ שִׁבְעַת־יָמִים שִׂמְחָֽה׃
24 ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.
כִּי חִזְקִיָּהוּ מֶֽלֶךְ־יְהוּדָה הֵרִים לַקָּהָל אֶלֶף פָּרִים וְשִׁבְעַת אֲלָפִים צֹאן וְהַשָּׂרִים הֵרִימוּ לַקָּהָל פָּרִים אֶלֶף וְצֹאן עֲשֶׂרֶת אֲלָפִים וַיִּֽתְקַדְּשׁוּ כֹהֲנִים לָרֹֽב׃
25 ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
וַֽיִּשְׂמְחוּ ׀ כָּל־קְהַל יְהוּדָה וְהַכֹּהֲנִים וְהַלְוִיִּם וְכָל־הַקָּהָל הַבָּאִים מִיִּשְׂרָאֵל וְהַגֵּרִים הַבָּאִים מֵאֶרֶץ יִשְׂרָאֵל וְהַיּוֹשְׁבִים בִּיהוּדָֽה׃
26 ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.
וַתְּהִי שִׂמְחָֽה־גְדוֹלָה בִּֽירוּשָׁלָ͏ִם כִּי מִימֵי שְׁלֹמֹה בֶן־דָּוִיד מֶלֶךְ יִשְׂרָאֵל לֹא כָזֹאת בִּירוּשָׁלָֽ͏ִם׃
27 ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.
וַיָּקֻמוּ הַכֹּהֲנִים הַלְוִיִּם וַיְבָרֲכוּ אֶת־הָעָם וַיִּשָּׁמַע בְּקוֹלָם וַתָּבוֹא תְפִלָּתָם לִמְעוֹן קָדְשׁוֹ לַשָּׁמָֽיִם׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >