< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >

1 ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.
וּכְכַלּ֣וֹת כָּל־זֹ֗את יָצְא֨וּ כָּל־יִשְׂרָאֵ֥ל הַֽנִּמְצְאִים֮ לְעָרֵ֣י יְהוּדָה֒ וַיְשַׁבְּר֣וּ הַמַּצֵּב֣וֹת וַיְגַדְּע֣וּ הָאֲשֵׁרִ֡ים וַיְנַתְּצ֣וּ אֶת־הַ֠בָּמוֹת וְאֶת־הַֽמִּזְבְּחֹ֞ת מִכָּל־יְהוּדָ֧ה וּבִנְיָמִ֛ן וּבְאֶפְרַ֥יִם וּמְנַשֶּׁ֖ה עַד־לְכַלֵּ֑ה וַיָּשׁ֜וּבוּ כָּל־בְּנֵ֧י יִשְׂרָאֵ֛ל אִ֥ישׁ לַאֲחֻזָּת֖וֹ לְעָרֵיהֶֽם׃ ס
2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.
וַיַּעֲמֵ֣ד יְחִזְקִיָּ֡הוּ אֶת־מַחְלְק֣וֹת הַכֹּהֲנִ֣ים וְ֠הַלְוִיִּם עַֽל־מַחְלְקוֹתָ֞ם אִ֣ישׁ ׀ כְּפִ֣י עֲבֹדָת֗וֹ לַכֹּהֲנִים֙ וְלַלְוִיִּ֔ם לְעֹלָ֖ה וְלִשְׁלָמִ֑ים לְשָׁרֵת֙ וּלְהֹד֣וֹת וּלְהַלֵּ֔ל בְּשַׁעֲרֵ֖י מַחֲנ֥וֹת יְהוָֽה׃ ס
3 ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.
וּמְנָת֩ הַמֶּ֨לֶךְ מִן־רְכוּשׁ֜וֹ לָעֹל֗וֹת לְעֹלוֹת֙ הַבֹּ֣קֶר וְהָעֶ֔רֶב וְהָ֣עֹל֔וֹת לַשַּׁבָּת֖וֹת וְלֶחֳדָשִׁ֣ים וְלַמֹּעֲדִ֑ים כַּכָּת֖וּב בְּתוֹרַ֥ת יְהוָֽה׃
4 ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.
וַיֹּ֤אמֶר לָעָם֙ לְיוֹשְׁבֵ֣י יְרוּשָׁלִַ֔ם לָתֵ֕ת מְנָ֥ת הַכֹּהֲנִ֖ים וְהַלְוִיִּ֑ם לְמַ֥עַן יֶחֶזְק֖וּ בְּתוֹרַ֥ת יְהוָֽה׃
5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.
וְכִפְרֹ֣ץ הַדָּבָ֗ר הִרְבּ֤וּ בְנֵֽי־יִשְׂרָאֵל֙ רֵאשִׁ֣ית דָּגָ֗ן תִּיר֤וֹשׁ וְיִצְהָר֙ וּדְבַ֔שׁ וְכֹ֖ל תְּבוּאַ֣ת שָׂדֶ֑ה וּמַעְשַׂ֥ר הַכֹּ֛ל לָרֹ֖ב הֵבִֽיאוּ׃
6 ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲರು ಯೆಹೂದ್ಯರು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶಮಾಂಶದ ಪಾಲು ತಂದು, ರಾಶಿರಾಶಿಯಾಗಿ ಇಟ್ಟರು.
וּבְנֵ֧י יִשְׂרָאֵ֣ל וִֽיהוּדָ֗ה הַיּֽוֹשְׁבִים֮ בְּעָרֵ֣י יְהוּדָה֒ גַּם־הֵ֗ם מַעְשַׂ֤ר בָּקָר֙ וָצֹ֔אן וּמַעְשַׂ֣ר קָֽדָשִׁ֔ים הַמְקֻדָּשִׁ֖ים לַיהוָ֣ה אֱלֹהֵיהֶ֑ם הֵבִ֕יאוּ וַֽיִּתְּנ֖וּ עֲרֵמ֥וֹת עֲרֵמֽוֹת׃ ס
7 ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು.
בַּחֹ֙דֶשׁ֙ הַשְּׁלִשִׁ֔י הֵחֵ֥לּוּ הָעֲרֵמ֖וֹת לְיִסּ֑וֹד וּבַחֹ֥דֶשׁ הַשְּׁבִיעִ֖י כִּלּֽוּ׃ ס
8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.
וַיָּבֹ֙אוּ֙ יְחִזְקִיָּ֣הוּ וְהַשָּׂרִ֔ים וַיִּרְא֖וּ אֶת־הָעֲרֵמ֑וֹת וַֽיְבָרֲכוּ֙ אֶת־יְהוָ֔ה וְאֵ֖ת עַמּ֥וֹ יִשְׂרָאֵֽל׃ פ
9 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ, ಲೇವಿಯರನ್ನೂ ವಿಚಾರಿಸಿದನು.
וַיִּדְרֹ֣שׁ יְחִזְקִיָּ֗הוּ עַל־הַכֹּֽהֲנִ֛ים וְהַלְוִיִּ֖ם עַל־הָעֲרֵמֽוֹת׃
10 ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.
וַיֹּ֣אמֶר אֵלָ֗יו עֲזַרְיָ֧הוּ הַכֹּהֵ֛ן הָרֹ֖אשׁ לְבֵ֣ית צָד֑וֹק וַ֠יֹּאמֶר מֵהָחֵ֨ל הַתְּרוּמָ֜ה לָבִ֣יא בֵית־יְהוָ֗ה אָכ֨וֹל וְשָׂב֤וֹעַ וְהוֹתֵר֙ עַד־לָר֔וֹב כִּ֤י יְהוָה֙ בֵּרַ֣ךְ אֶת־עַמּ֔וֹ וְהַנּוֹתָ֖ר אֶת־הֶהָמ֥וֹן הַזֶּֽה׃ ס
11 ಬಳಿಕ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
וַיֹּ֣אמֶר יְחִזְקִיָּ֗הוּ לְהָכִ֧ין לְשָׁכ֛וֹת בְּבֵ֥ית יְהוָ֖ה וַיָּכִֽינוּ׃
12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
וַיָּבִ֨יאוּ אֶת־הַתְּרוּמָ֧ה וְהַֽמַּעֲשֵׂ֛ר וְהַקֳּדָשִׁ֖ים בֶּאֱמוּנָ֑ה וַעֲלֵיהֶ֤ם נָגִיד֙ כָּֽנַנְיָ֣הוּ הַלֵּוִ֔י וְשִׁמְעִ֥י אָחִ֖יהוּ מִשְׁנֶֽה׃
13 ಅರಸನಾದ ಹಿಜ್ಕೀಯನು ನೇಮಿಸಿದ ಪ್ರಕಾರ, ಯೆಹೀಯೇಲ್, ಅಜಜ್ಯ, ನಹತ್, ಅಸಾಯೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ, ಇವರು ಕೋನನ್ಯನ ಸಹೋದರನಾದ ಶಿಮ್ಮಿಯ ಕೈಕೆಳಗೆ ಆಡಳಿತಗಾರರಾಗಿದ್ದರು. ಅಜರ್ಯನು ದೇವರ ಆಲಯದ ಅಧಿಪತಿಯಾಗಿದ್ದನು.
וִֽיחִיאֵ֡ל וַ֠עֲזַזְיָהוּ וְנַ֨חַת וַעֲשָׂהאֵ֜ל וִֽירִימ֤וֹת וְיוֹזָבָד֙ וֶאֱלִיאֵ֣ל וְיִסְמַכְיָ֔הוּ וּמַ֖חַת וּבְנָיָ֑הוּ פְּקִידִ֗ים מִיַּ֤ד כָּֽנַנְיָ֙הוּ֙ וְשִׁמְעִ֣י אָחִ֔יו בְּמִפְקַד֙ יְחִזְקִיָּ֣הוּ הַמֶּ֔לֶךְ וַעֲזַרְיָ֖הוּ נְגִ֥יד בֵּית־הָאֱלֹהִֽים׃
14 ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.
וְקוֹרֵ֨א בֶן־יִמְנָ֤ה הַלֵּוִי֙ הַשּׁוֹעֵ֣ר לַמִּזְרָ֔חָה עַ֖ל נִדְב֣וֹת הָאֱלֹהִ֑ים לָתֵת֙ תְּרוּמַ֣ת יְהוָ֔ה וְקָדְשֵׁ֖י הַקֳּדָשִֽׁים׃
15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.
וְעַל־יָד֡וֹ עֵ֣דֶן וּ֠מִנְיָמִן וְיֵשׁ֨וּעַ וּֽשְׁמַֽעְיָ֜הוּ אֲמַרְיָ֧הוּ וּשְׁכַנְיָ֛הוּ בְּעָרֵ֥י הַכֹּהֲנִ֖ים בֶּאֱמוּנָ֑ה לָתֵ֤ת לַאֲחֵיהֶם֙ בְּמַחְלְק֔וֹת כַּגָּד֖וֹל כַּקָּטָֽן׃
16 ವಂಶಾವಳಿಯ ದಾಖಲೆಯ ಪ್ರಕಾರ ಮೂರು ವರ್ಷ ಪ್ರಾಯ ಮೊದಲ್ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವುದಕ್ಕೂ,
מִלְּבַ֞ד הִתְיַחְשָׂ֣ם לִזְכָרִ֗ים מִבֶּ֨ן שָׁל֤וֹשׁ שָׁנִים֙ וּלְמַ֔עְלָה לְכָל־הַבָּ֥א לְבֵית־יְהוָ֖ה לִדְבַר־י֣וֹם בְּיוֹמ֑וֹ לַעֲב֣וֹדָתָ֔ם בְּמִשְׁמְרוֹתָ֖ם כְּמַחְלְקוֹתֵיהֶֽם׃
17 ಹಾಗೆಯೇ ಇಪ್ಪತ್ತು ವರ್ಷ ಪ್ರಾಯ ಮೊದಲ್ಗೊಂಡು ವಂಶಾವಳಿಯ ದಾಖಲೆಯ ಪ್ರಕಾರ ಅವರವರ ಕೆಲಸಗಳಲ್ಲಿಯೂ, ಅವರವರ ಸರತಿಗಳಲ್ಲಿಯೂ ಇರುವ ಯಾಜಕರಿಗೂ, ಲೇವಿಯರಿಗೂ ಅವರ ಸಮಸ್ತ ಕೂಟದಲ್ಲಿ ವಂಶಾವಳಿಯ ದಾಖಲೆಯ ಪ್ರಕಾರ
וְאֵ֨ת הִתְיַחֵ֤שׂ הַכֹּהֲנִים֙ לְבֵ֣ית אֲבוֹתֵיהֶ֔ם וְהַ֨לְוִיִּ֔ם מִבֶּ֛ן עֶשְׂרִ֥ים שָׁנָ֖ה וּלְמָ֑עְלָה בְּמִשְׁמְרוֹתֵיהֶ֖ם בְּמַחְלְקוֹתֵיהֶֽם׃
18 ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.
וּלְהִתְיַחֵ֗שׂ בְּכָל־טַפָּ֧ם נְשֵׁיהֶ֛ם וּבְנֵיהֶ֥ם וּבְנוֹתֵיהֶ֖ם לְכָל־קָהָ֑ל כִּ֥י בֶאֱמוּנָתָ֖ם יִתְקַדְּשׁוּ־קֹֽדֶשׁ׃
19 ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
וְלִבְנֵי֩ אַהֲרֹ֨ן הַכֹּהֲנִ֜ים בִּשְׂדֵ֨י מִגְרַ֤שׁ עָרֵיהֶם֙ בְּכָל־עִ֣יר וָעִ֔יר אֲנָשִׁ֕ים אֲשֶׁ֥ר נִקְּב֖וּ בְּשֵׁמ֑וֹת לָתֵ֣ת מָנ֗וֹת לְכָל־זָכָר֙ בַּכֹּ֣הֲנִ֔ים וּלְכָל־הִתְיַחֵ֖שׂ בַּלְוִיִּֽם׃
20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.
וַיַּ֧עַשׂ כָּזֹ֛את יְחִזְקִיָּ֖הוּ בְּכָל־יְהוּדָ֑ה וַיַּ֨עַשׂ הַטּ֤וֹב וְהַיָּשָׁר֙ וְהָ֣אֱמֶ֔ת לִפְנֵ֖י יְהוָ֥ה אֱלֹהָֽיו׃
21 ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.
וּבְכָֽל־מַעֲשֶׂ֞ה אֲשֶׁר־הֵחֵ֣ל ׀ בַּעֲבוֹדַ֣ת בֵּית־הָאֱלֹהִ֗ים וּבַתּוֹרָה֙ וּבַמִּצְוָ֔ה לִדְרֹ֖שׁ לֵֽאלֹהָ֑יו בְּכָל־לְבָב֥וֹ עָשָׂ֖ה וְהִצְלִֽיחַ׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >