< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
Yosiya yana da shekara goma sha takwas sa’ad da ya zama sarki, ya kuma yi mulki a Urushalima shekara talatin da ɗaya.
2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
Ya yi abin da yake daidai a gaban Ubangiji ya kuma yi tafiya a hanyoyin kakansa Dawuda, ba tare da juye dama ko hagu ba.
3 ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
A shekara ta takwas ta mulkinsa, yayinda yake matashi, sai ya fara neman Allah na kakansa Dawuda. A shekara ta goma sha biyunsa ya fara tsabtacce Yahuda da Urushalima daga masujadan kan tudu, ginshiƙan Ashera, sassaƙaƙƙun gumaka da kuma siffofin da aka yi zubi.
4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,
A ƙarƙashin umarninsa aka rurrushe bagadan Ba’al, ya kuma tumɓuke bagadan ƙona turare waɗanda suke a bisansu, ya farfashe ginshiƙan Ashera da kuma sassaƙaƙƙun siffofi. Ya ragargaza waɗannan kucu-kucu, ya barbaɗa su a kan kaburburan waɗanda suka miƙa musu hadayu.
5 ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.
Ya ƙone ƙasusuwan firistocin gumaka a kan bagaden da a dā suke miƙa hadayunsu, ta haka ya tsabtacce Yahuda da Urushalima.
6 ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.
Ya yi haka cikin garuruwan Manasse, Efraim da Simeyon, har zuwa Naftali, da kuma cikin kangwayen kewayensu,
7 ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.
ya farfashe bagadai da ginshiƙan Ashera; ya niƙa gumaka suka zama gari, ya kuma yayyanka dukan bagadan turare kucu-kucu ko’ina a Isra’ila. Sa’an nan ya koma Urushalima.
8 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
A shekara ta goma sha takwas ta mulkin Yosiya, ya tsarkake ƙasar da haikalin, ya aiki Shafan ɗan Azaliya da Ma’asehiya mai mulkin birni, tare da Yowa ɗan Yowahaz, marubuci, su gyara haikalin Ubangiji Allah.
9 ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.
Suka tafi wurin Hilkiya babban firist suka ba shi kuɗin da aka kawo cikin haikalin Allah, wanda Lawiyawa masu tsaron ƙofofi sun tattara daga mutanen Manasse, Efraim da dukan raguwar Isra’ila da kuma daga dukan mutanen Yahuda da Benyamin da kuma mazaunan Urushalima.
10 ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.
Sa’an nan suka danƙa su ga mutanen da aka naɗa su lura da aiki a kan haikalin Ubangiji. Waɗannan mutane ne suke biyan ma’aikatan da suka gyara suka kuma mai da haikalin.
11 ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.
Suka kuma ba da kuɗi ga kafintoci da magina don su sayi sassaƙaƙƙun duwatsu, da katakai don yin tsaiko da tankar ginin da sarakunan Yahuda suka bari yă fāɗi ya zama kango.
12 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.
Mutanen fa suka yi aiki da aminci. Shugabanninsu, su ne Yahat da Obadiya, Lawiyawa zuriyar Merari da Zakariya da Meshullam, zuriyar Kohat. Dukan Lawiyawa waɗanda suke gwanaye a kayan kiɗi,
13 ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.
sun lura da ma’aikata, suka kuma lura da dukan masu aiki daga aiki zuwa aiki. Waɗansu Lawiyawan su ne marubuta, magatakarda da kuma masu tsaron ƙofofi.
14 ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.
Yayinda suke fitar da kuɗin da aka kai cikin haikalin Ubangiji, sai Hilkiya firist ya sami Littafin Dokar Ubangiji da aka bayar ta wurin Musa.
15 ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.
Hilkiya ya ce wa Shafan magatakarda, “Na sami Littafin Doka a cikin haikalin Ubangiji.” Sai ya ba wa Shafan.
16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.
Sa’an nan Shafan ya ɗauki littafin zuwa wurin sarki, ya faɗa masa, “Manyan ma’aikatanka suna yin kome da aka sa su.
17 ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ.
Mun ɗauke kuɗin da an ajiye a haikalin Ubangiji muka ba wa masu aiki da waɗanda suke lura da su.”
18 ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
Sa’an nan Shafan magatakarda ya sanar da sarki ya ce, “Hilkiya firist ya ba ni wani littafi.” Sai Shafan ya karanta daga cikinsa a gaban sarki.
19 ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
Da sarki ya ji kalmomin Doka, sai ya yage rigunansa.
20 ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
Ya ba da waɗannan umarnai ga Hilkiya, Ahikam ɗan Shafan, Abdon ɗan Mika, Shafan magatakarda da kuma Asahiya mai hidimar sarki.
21 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
Ya ce, “Ku tafi ku nemi nufin Ubangiji saboda ni da kuma saboda raguwa a Isra’ila da Yahuda game da abin da aka rubuta a wannan littafin da aka samu. Fushin Ubangiji mai girma ne da aka zuba a kanmu domin kakanninmu ba su kiyaye maganar Ubangiji ba; ba su aikata bisa ga dukan abin da yake a rubuce a wannan littafi ba.”
22 ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
Hilkiya tare da waɗanda sarki ya aika, suka tafi suka yi magana da annabiya Hulda, wadda take matar Shallum ɗan Tokhat ɗan Hasra, mai tsaron wurin ajiyar riguna. Tana zama a Urushalima, a Yanki na Biyu.
23 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
Sai ta ce musu, “Ga abin da Ubangiji, Allah na Isra’ila ya ce faɗa wa mutumin da ya aike ku gare ni,
24 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.
‘Ga abin da Ubangiji ya ce zai kawo masifa a wannan wuri da mutanensa, dukan la’anar da aka rubuta a cikin littafin da aka karanta a gaban sarkin Yahuda.
25 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
Domin sun yashe ni suka kuma ƙone turare wa waɗansu alloli, suka tsokane ni in yi fushi ta wurin dukan abin da hannuwansu suka yi, fushina zai zuba a kan wannan wuri, ba kuma za a kwantar da shi ba.’
26 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
Ku faɗa wa sarkin Yahuda, wanda ya aike ku ku nemi nufin Ubangiji, ‘Ga abin da Ubangiji, Allah na Isra’ila yake cewa game da kalmomin da ka ji.
27 ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,
Domin zuciyarka mai tuba ce, ka kuma ƙasƙantar da kanka a gaban Allah sa’ad da ka ji abin da ya yi magana a kan wannan wuri da mutanensa, domin kuma ka ƙasƙantar da kanka a gabana, ka yage rigunanka ka kuma yi kuka a gabana, na ji ka, in ji Ubangiji.
28 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
Yanzu zan tara ka da kakanninka, za a kuma binne ka cikin salama. Idanunka ba za su ga dukan masifar da zan kawo a kan wannan wuri da kuma a kan waɗanda suke zama a nan ba.’” Sai suka kai amsar wa sarki.
29 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
Sai sarki ya kira dukan dattawan Yahuda da Urushalima.
30 ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
Ya haura zuwa haikalin Ubangiji tare da mutanen Yahuda, mutanen Urushalima, firistoci da Lawiyawa, dukan mutane daga ƙarami zuwa babba. Ya karanta dukan kalmomin Littafin Alkawari wanda aka samu a cikin haikalin Ubangiji a kunnuwansu.
31 ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.
Sai sarkin ya miƙe tsaye a inda yake, ya sabunta alkawari a gaban Ubangiji, don yă bi Ubangiji yă kiyaye umarnansa, ƙa’idodinsa da kuma farillansa da dukan zuciyarsa da kuma dukan ransa, ya kuma yi biyayya da kalmomin alkawarin da aka rubuta a cikin wannan littafi.
32 ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.
Sa’an nan ya sa kowa a Urushalima da Benyamin ya yi alkawari ga wannan; mutanen Urushalima suka aikata wannan bisa ga alkawarin Allah, Allah na kakanninsu.
33 ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.
Yosiya ya fitar da dukan gumakan banƙyama daga dukan yankunan Isra’ilawa, ya kuma sa dukan waɗanda suke a Isra’ila su bauta wa Ubangiji Allahnsu. Muddin ransa, ba su fasa bin Ubangiji Allah na kakanninsu ba.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >