< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 35 >
1 ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.
Josiah held a Passover for the Lord in Jerusalem, and the Passover lamb was killed on the fourteenth day of the first month.
2 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು.
He assigned the priests to their respective duties and encouraged them in their ministry at the Lord's Temple.
3 “ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.
Josiah told the Levites who taught all Israel and were holy to the Lord, “Place the holy Ark in the Temple built by Solomon, son of David, king of Israel. It's not necessary for you to carry it around on your shoulders any more. Your responsibility now is to serve the Lord your God and his people Israel.
4 ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.
Get yourselves ready for service in your divisions, by families, according to the instructions given by David, king of Israel, and his son Solomon.
5 “ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು.
Then you are to stand in the sanctuary to assist the lay people according to family divisions, following the assignments according to your Levite family divisions.
6 ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.
Sacrifice the Passover lambs, purify yourselves, and be ready to help the people who come to fulfill the requirements given by the Lord through Moses.”
7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.
Josiah contributed as Passover offerings for all the people who were present 30,000 lambs and goats, and 3,000 bulls, all from his own flocks and herds.
8 ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
His officials contributed freely to the people, to the priests, and to the Levites. Hilkiah, Zechariah, and Jehiel, who were in charge of God's Temple, gave the priests as Passover offerings 2,600 Passover lambs and 300 bulls.
9 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
The leaders of the Levites, Conaniah, and Shemaiah and Nethanel his brothers, and Hashabiah and Jeiel and Jozabad, gave the Levites as Passover offerings 5,000 lambs and young goats and 500 bulls.
10 ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
Once the preparations had been completed, the priests stood where they had been assigned and the Levites took their places in their divisions as the king had ordered.
11 ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,
They killed the Passover lambs, the priests sprinkled the blood they were given on the altar, while the Levites skinned the sacrifices.
12 ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.
They put to one side the burnt offerings to be given to the families of the lay people, by division, to offer to the Lord, as required in the Book of Moses. They did the same thing with the bulls.
13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.
They roasted the Passover sacrifices on the fire as requires, and they boiled the holy offerings in pots, caldrons, and pans, and took them quickly to the lay people.
14 ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.
After that they prepared food from the offerings for themselves and for the priests, because the priests, the descendants of Aaron, were busy presenting burnt offerings and fat until night came. So the Levites did this work for themselves and for the priests, the descendants of Aaron.
15 ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.
The singers, the descendants of Asaph, were in their places following the instructions given by David, Asaph, Heman, and Jeduthun, the king's seer. The gatekeepers in charge at each gate did not need to leave, because their fellow Levites provided for them.
16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.
So on that day the whole Passover service of the Lord was took place, including the presenting of burnt offerings on the altar of the Lord, as King Josiah had ordered.
17 ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.
The Israelites who were there also celebrated Passover at that time, and also the Feast of Unleavened Bread for the following seven days.
18 ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
No Passover like this had been held in Israel since the time of Samuel the prophet. None of the kings of Israel had ever held a Passover like the one that Josiah observed with the priests, the Levites, all of Judah, the Israelites who were there, and the people of Jerusalem.
19 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.
This Passover was observed in the eighteenth year of the reign of Josiah.
20 ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.
After all this work that Josiah had carried out in restoring the Temple, King Neco of Egypt was leading his army to fight at Carchemish near the Euphrates, and Josiah went to confront him.
21 ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”
Neco sent messengers to him, saying, “What argument is there between you and me, king of Judah? I have not come to attack you today, because I'm fighting with another kingdom. God told me I should hurry, so stop obstructing God, who is with me, or he'll destroy you!”
22 ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.
But Josiah did not turn away and leave. Instead, he disguised himself so he could fight Neco in battle. He ignored Neco's message that came from God, and went to fight him on the Plain of Megiddo.
23 ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.
There archers shot King Josiah. He called out those beside him, “Get me out of the battle, because I'm badly wounded!”
24 ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.
So they carried him out of his chariot, and took him back in his second chariot to Jerusalem, where he died. Josiah was buried in the tomb of his forefathers. All Judah and Jerusalem wept for him.
25 ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.
Then Jeremiah wrote a lament over Josiah, and to this day male and female choirs sing sad songs about Josiah. They have become a part of what is regularly sung in Israel, and they are recorded in the Book of Laments.
26 ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,
The rest of what Josiah did, along with his acts of loyalty following what is written in the Law of the Lord,
27 ಅವನ ಕ್ರಿಯೆಗಳೂ, ಮೊದಲನೆಯವುಗಳೂ, ಕಡೆಯವುಗಳೂ ಇಸ್ರಾಯೇಲ್ ಯೆಹೂದದ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.
all his actions, from beginning to end, are recorded in the Book of the Kings of Israel and Judah.