< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >
1 ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
[Йәһуда] зиминидики хәлиқ Йосияниң оғли Йәһоаһазни таллап, Йерусалимда атисиниң орниға падиша қилип тиклиди.
2 ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
Йәһоаһаз тәхткә чиққан чеғида жигирмә үч яшта еди; у Йерусалимда үч ай сәлтәнәт қилди.
3 ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
Мисир падишаси уни Йерусалимда падишалиқтин бекар қилди вә Йәһуда зиминиға бир йүз талант күмүч, бир талант алтун җәриманә қойди.
4 ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.
Андин Мисир падишаси Йәһоаһазниң орниға униң иниси Елиакимни Йәһуда билән Йерусалим үстигә падиша қилип, униң исмини Йәһоакимға өзгәртти; андин Нәқо иниси Йәһоаһазни Мисирға елип кәтти.
5 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Йәһоаким тәхткә чиққан чеғида жигирмә бәш яшта болуп, у Йерусалимда он бир жил сәлтәнәт қилди; у Пәрвәрдигар Худасиниң нәзиридә рәзил болғанни қилди.
6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.
Бабил падишаси Небоқаднәсар униңға һуҗум қилғили чиқип, уни мис зәнҗир билән бағлап Бабилға елип кәтти.
7 ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
Небуқаднәсар йәнә Пәрвәрдигар өйидики бир қисим әсвап-буюмларни Бабилға апирип, өзиниң Бабилдики бутханисиға қойди.
8 ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.
Йәһоакимниң қалған ишлири, униң жиркиничлик ишлири, униңдики әйипләр болса мана, «Исраил вә Йәһуда падишалириниң тарих-тәзкирилири» дегән китапта пүтүлгәндур. Униң оғли Йәһоакин униң орниға падиша болди.
9 ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Йәһоакин тәхткә чиққан чеғида он сәккиз яшта болуп, у Йерусалимда үч ай он күн сәлтәнәт қилди; у Пәрвәрдигарниң нәзиридә рәзил болғанни қилди.
10 ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.
Йеңи жил өткәндә, Небоқаднәсар адәм әвәтип Йәһоакинни Пәрвәрдигар өйидики есил буюмлар билән бирликтә Бабилға әкәлдүрүп, Йәһоакинниң тағиси Зәдәкияни Йәһуда вә Йерусалим үстигә падиша қилип тиклиди.
11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.
Зәдәкия тәхткә чиққан чеғида жигирмә бир яшта болуп, Йерусалимда он бир жил сәлтәнәт қилди;
12 ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
у Пәрвәрдигарниң нәзиридә рәзил болғанни қилди; Йәрәмия пәйғәмбәр униңға Пәрвәрдигарниң сөзлирини йәткүзгән болсиму, у Йәрәмияниң алдида өзини төвән қилмиди;
13 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
у өзини Худаниң намида [беқиниш] қәсимини ичкүзгән Небоқаднәсардин йүз өриди; бойнини қаттиқ қилип, Исраилниң Худаси Пәрвәрдигарға товва қилип йенишқа көңлини җаһил қилди.
14 ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
Униң үстигә, каһинларниң барлиқ башлири билән хәлиқниң һәммиси ят әлликләрниң һәммә жиркинчлик ишлирини дорап, асийлиқлирини ашурди; улар Пәрвәрдигар Йерусалимда Өзигә атап муқәддәс қилған өйни булғивәтти.
15 ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.
Уларниң ата-бовилириниң Худаси болған Пәрвәрдигар Өз хәлқигә вә туралғусиға ичини ағритқачқа, таң сәһәрдә орнидин туруп әлчилирини әвәтип уларни изчил агаһландуруп турди.
16 ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.
Бирақ улар Худаниң әлчилирини мазақ қилип, сөз-каламлирини мәнситмәйтти, пәйғәмбәрлирини заңлиқ қилатти; ахир берип Пәрвәрдигарниң қәһри өрләп, қутқузғили болмайдиған дәриҗидә хәлқиниң үстигә чүшти.
17 ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.
Пәрвәрдигар шуниң билән калдийләрниң падишасини уларға һуҗумға селивиди, падиша уларниң муқәддәс өйидә яшлирини қиличлиди; қиз-жигитләр, қерилар, беши ақарғанларға һеч ич ағритип олтармай, һәммини өлтүрүвәтти; [Худа] буларниң һәммисини [Калдийә] падишасиниң қолиға тапшурди.
18 ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.
Калдийә падишаси Худаниң өйидики чоң-кичик демәй, барлиқ қача-буюмларни, шундақла Пәрвәрдигар өйидики ғәзниләрни, шуниңдәк падишаниң вә әмәлдарлириниң ғәзнилирини қоймай, Бабилға елип кәтти.
19 ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.
Калдийләр Худаниң өйини көйдүрүвәтти, Йерусалимниң сепилини чеқивәтти, шәһәрдики һәммә орда-қорғанларға от қоюп көйдүрүп, Йерусалимдики барлиқ қиммәтлик қача-буюмларни чеқип кукум-талқан қилди.
20 ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Қиличтин аман қалғанларниң һәммисини [Калдийә падишаси] Бабилға тутқун қилип әкәтти; улар таки Парс падишалиғиниң сәлтәнитикичә Бабил падишаси вә әвлатлириниң қуллуғида болуп турди.
21 ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.
Буларниң һәммиси Пәрвәрдигарниң Йәрәмияниң вастиси билән [алдин] ейтқан [агаһ] сөзи ишқа ашурулуш үчүн болди. Шуниң билән зимин өзигә тегишлик шабат күнлиригә муйәссәр болди; чүнки зимин йәтмиш жил тошқичә харабиликтә туруп «шабат тутуп» дәм елип раһәтләнди.
22 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,
23 “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’” ಎಂದನು.