< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 5 >

1 ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.
וַתִּשְׁלַם כָּל־הַמְּלָאכָה אֲשֶׁר־עָשָׂה שְׁלֹמֹה לְבֵית יְהוָה וַיָּבֵא שְׁלֹמֹה אֶת־קָדְשֵׁי ׀ דָּוִיד אָבִיו וְאֶת־הַכֶּסֶף וְאֶת־הַזָּהָב וְאֶת־כָּל־הַכֵּלִים נָתַן בְּאֹצְרוֹת בֵּית הָאֱלֹהִֽים׃
2 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
אָז יַקְהֵיל שְׁלֹמֹה אֶת־זִקְנֵי יִשְׂרָאֵל וְאֶת־כָּל־רָאשֵׁי הַמַּטּוֹת נְשִׂיאֵי הָאָבוֹת לִבְנֵי יִשְׂרָאֵל אֶל־יְרוּשָׁלָ͏ִם לְֽהַעֲלוֹת אֶת־אֲרוֹן בְּרִית־יְהוָה מֵעִיר דָּוִיד הִיא צִיּֽוֹן׃
3 ಆದ್ದರಿಂದ ಏಳನೆಯ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಸಮಸ್ತ ಜನರು ಅರಸನ ಬಳಿಗೆ ಕೂಡಿಬಂದರು.
וַיִּקָּהֲלוּ אֶל־הַמֶּלֶךְ כָּל־אִישׁ יִשְׂרָאֵל בֶּחָג הוּא הַחֹדֶשׁ הַשְּׁבִעִֽי׃
4 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ, ಲೇವಿಯರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡರು.
וַיָּבֹאוּ כֹּל זִקְנֵי יִשְׂרָאֵל וַיִּשְׂאוּ הַלְוִיִּם אֶת־הָאָרֽוֹן׃
5 ಒಡಂಬಡಿಕೆಯ ಮಂಜೂಷವನ್ನೂ, ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರಾದ ಲೇವಿಯರು ಹೊತ್ತುಕೊಂಡು ತಂದರು.
וַיַּעֲלוּ אֶת־הָאָרוֹן וְאֶת־אֹהֶל מוֹעֵד וְאֶת־כָּל־כְּלֵי הַקֹּדֶשׁ אֲשֶׁר בָּאֹהֶל הֶעֱלוּ אֹתָם הַכֹּהֲנִים הַלְוִיִּֽם׃
6 ಆಗ ಅರಸನಾದ ಸೊಲೊಮೋನನೂ ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ, ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.
וְהַמֶּלֶךְ שְׁלֹמֹה וְכָל־עֲדַת יִשְׂרָאֵל הַנּוֹעָדִים עָלָיו לִפְנֵי הָאָרוֹן מְזַבְּחִים צֹאן וּבָקָר אֲשֶׁר לֹֽא־יִסָּפְרוּ וְלֹא יִמָּנוּ מֵרֹֽב׃
7 ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.
וַיָּבִיאוּ הַכֹּהֲנִים אֶת־אֲרוֹן בְּרִית־יְהוָה אֶל־מְקוֹמוֹ אֶל־דְּבִיר הַבַּיִת אֶל־קֹדֶשׁ הַקְּדָשִׁים אֶל־תַּחַת כַּנְפֵי הַכְּרוּבִֽים׃
8 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.
וַיִּהְיוּ הַכְּרוּבִים פֹּרְשִׂים כְּנָפַיִם עַל־מְקוֹם הָאָרוֹן וַיְכַסּוּ הַכְּרוּבִים עַל־הָאָרוֹן וְעַל־בַּדָּיו מִלְמָֽעְלָה׃
9 ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.
וַֽיַּאֲרִיכוּ הַבַּדִּים וַיֵּרָאוּ רָאשֵׁי הַבַּדִּים מִן־הָאָרוֹן עַל־פְּנֵי הַדְּבִיר וְלֹא יֵרָאוּ הַחוּצָה וַֽיְהִי־שָׁם עַד הַיּוֹם הַזֶּֽה׃
10 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
אֵין בָּֽאָרוֹן רַק שְׁנֵי הַלֻּחוֹת אֲשֶׁר־נָתַן מֹשֶׁה בְּחֹרֵב אֲשֶׁר כָּרַת יְהוָה עִם־בְּנֵי יִשְׂרָאֵל בְּצֵאתָם מִמִּצְרָֽיִם׃
11 ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.
וַיְהִי בְּצֵאת הַכֹּהֲנִים מִן־הַקֹּדֶשׁ כִּי כָּל־הַכֹּהֲנִים הַֽנִּמְצְאִים הִתְקַדָּשׁוּ אֵין לִשְׁמוֹר לְמַחְלְקֽוֹת׃
12 ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.
וְהַלְוִיִּם הַמְשֹׁרֲרִים לְכֻלָּם לְאָסָף לְהֵימָן לִֽידֻתוּן וְלִבְנֵיהֶם וְלַאֲחֵיהֶם מְלֻבָּשִׁים בּוּץ בִּמְצִלְתַּיִם וּבִנְבָלִים וְכִנֹּרוֹת עֹמְדִים מִזְרָח לַמִּזְבֵּחַ וְעִמָּהֶם כֹּֽהֲנִים לְמֵאָה וְעֶשְׂרִים מחצררים מַחְצְרִים בַּחֲצֹֽצְרֽוֹת׃
13 ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.
וַיְהִי כְאֶחָד למחצצרים לַמְחַצְּרִים וְלַמְשֹֽׁרֲרִים לְהַשְׁמִיעַ קוֹל־אֶחָד לְהַלֵּל וּלְהֹדוֹת לַיהוָה וּכְהָרִים קוֹל בַּחֲצֹצְרוֹת וּבִמְצִלְתַּיִם וּבִכְלֵי הַשִּׁיר וּבְהַלֵּל לַיהוָה כִּי טוֹב כִּי לְעוֹלָם חַסְדּוֹ וְהַבַּיִת מָלֵא עָנָן בֵּית יְהוָֽה׃
14 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.
וְלֹא־יֽ͏ָכְלוּ הַכֹּהֲנִים לַעֲמוֹד לְשָׁרֵת מִפְּנֵי הֶעָנָן כִּֽי־מָלֵא כְבוֹד־יְהוָה אֶת־בֵּית הָאֱלֹהִֽים׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 5 >