< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 9 >
1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
Sheba ram ka uk e siangpahrangnu ni Solomon e kamthang a thai navah, lawk paceinae ka ru poung e naw hoi tanouk hanelah Solomon koe Jerusalem vah a tho. Tami moikapap a kâbang awh teh, hmuituinaw, talung aphu kaawmpoungnaw hoi sui moikapap ka phawt e kalauknaw hoi a tho. Solomon koe a pha awh navah, a lungthung ka'awm e pueng koung a rasa teh, lawk a pacei.
2 ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.
Lawk a pacei e naw pueng Solomon ni koung a dei pouh. Solomon ni siangpahrangnu koe a dei pouh thai hoeh e banghai awm hoeh.
3 ಶೆಬದ ರಾಣಿಯು ಸೊಲೊಮೋನನ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,
Sheba siangpahrangnu ni Solomon e lungangnae, im a sak e,
4 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.
caboi dawk e rawca, a kut rahim e bawinaw ni tahungnae, ka tho ka cet e sannaw hoi a khohnanaw, manang kapatuemnaw hoi a khohnanaw, BAWIPA e im dawk hmaisawi thuengnae hoi a thuengnae a hmu navah, kângai a ru teh kâha yo a phout.
5 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.
Siangpahrang koevah, na lungangnae hoi na tawksak e kama ram hoi kamthang ka thai e heh a tang katang doeh.
6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.
Hatei, ka mit hoi khei ka hmu hoehnahlan teh, ka yuem hoeh. Khenhaw! na lungangnae teh ka thai e apasuek ka thai e ni tangawn boehai phat hoeh. Ka thainae kamthang hlak hoe a bawilen.
7 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.
Na taminaw a yawhawi poung awh. Na sannaw hai nang koe pou kaawm niteh, nange lungangnae lawk ka thai e naw teh, a yawhawi poung awh.
8 ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.
Nang dawk a lung kahawi e BAWIPA na Cathut, bawitungkhung dawk na ka tahung sak e BAWIPA na Cathut teh bawilennae awm seh. Bangkongtetpawiteh, na Cathut ni Isarelnaw teh yungyoe a caksak hanelah a pahren. Hatdawkvah, kalan lah lawkceng hanelah ahnimae siangpahrang hanelah na sak awh e doeh, telah ati.
9 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಗಂಧದ್ರವ್ಯಗಳಿಗೆ ಬೇರೆ ಯಾವುದು ಸಮನವಾದದ್ದು ಇರಲಿಲ್ಲ.
Hottelah sui talen 120, hmuitui moikapap hoi, aphu kaawm e naw hah siangpahrang a poe. Sheba siangpahrangnu ni Solomon a poe hmuitui patetlah e alouklah khoeroe awm hoeh.
10 ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು.
Hahoi Solomon e a sannaw hoi Huram e a sannaw, Ophir kho hoi sui kaphawtnaw ni hai Algum thing hoi talung aphu kaawm e a phu awh.
11 ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.
Siangpahrang ni Algum thing hah BAWIPA im, siangpahrang im kalupnae hoi la kasaknaw hanelah ratoung hoi tamawi lah a sak. Hot patet lae thing teh Judah ram dawk ayan hoi hmawt boihoeh.
12 ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.
Solomon siangpahrang Sheba siangpahrangnu ni a poe e hno touk laipalah, a lungkuep nahanelah a hei e puenghai koung a poe. Hathnukkhu, a sannaw hoi ama ram lah a ban awh.
13 ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.
Solomon koe kum touh dawk sui kâen e talen 666 touh a pha.
14 ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.
Hetnaw teh hno kayawtnaw hoi kasaknaw ni a thokhai e touk laipalah, kâen e doeh. Arabia siangpahrangnaw pueng hoi ram kaukkungnaw ni Solomon koe sui hoi ngun ouk a thokhai awh.
15 ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.
Solomon ni suibahling kalen e 200 touh a sak. Bahling kalen e buet touh dawk sui talen 600 touh abaw.
16 ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
Hlun e suibahling kathounge 600 touh a sak. Bahling kathounge buet touh dawk sui shekel 300 touh abaw. Hotnaw teh Lebanon ratu thung e thing hoi sak e im dawk a hruek.
17 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.
Hahoi siangpahrang ni kasaino bawitungkhung kalenpounge a sak teh, suikathoung hoi a hluk.
18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
Bawitungkhung dawk luennae lakhout taruk touh hoi sui hoi sak e khokpadoun hai a tawn teh, tungkhung hoi pou a kamtawp. Tungkhung avoivang lah, kut toungnae atengvah, sendek meikaphawk kahni touh a kangdue sak.
19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.
Luennae dawk avoivang lah sendek 12 touh a kangdue. Hot patetlah, nâ e uknaeram dawk hai awm boihoeh.
20 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.
Siangpahrang Solomon e manangnaw pueng teh, suituici seng doeh. Lebanon kahrawngum e thing hoi sak e im dawk e hnopai pueng hai suituici seng doeh. Solomon e se nah ngun teh banglahai noutna hoeh.
21 ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.
Siangpahrang e lawng teh Huram e a sannaw hoi Tarshish kho lah ouk a cei, kum thum touh dawk vai touh a tho teh, sui, ngun, kasaino, kalainaw hoi awtawnaw ouk a thokhai awh.
22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.
Hottelah Solomon siangpahrang ni talai van e siangpahrang pueng, tawntanae hoi lungangnae koelah koung a tapuet.
23 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.
Cathut ni a lungthin thung a hruek pouh e lungangnae lawk thai hanelah talai van e siangpahrang pueng ni Solomon a pâtam awh.
24 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.
Ka tho e tami pueng ni suimanang, ngunmanang, khohna, tarantuknae senehmaica, hmuituinaw, marangnaw hoi lanaw kum tangkuem ouk a poe awh.
25 ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
Solomon ni rangleng hoi marangnaw tanae hmuen 4,000 touh a tawn. Marangransanaw 12000 touh a tawn teh, ahnimanaw teh marang hrueknae hmuen hoi Jerusalem siangpahrang koevah ao sak.
26 ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.
Euphrates tuipui koehoi, Filistin ram hoi, Izip ram totouh siangpahrangnaw koung a uk.
27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.
Siangpahrang ni Jerusalem kho dawk ngunnaw hah talung patetlah Sidar thing hah ayawn dawk e thailahei kungnaw patetlah a pap sak.
28 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.
Izip ram hoi alouke ramnaw koehoi Solomon hanelah marangnaw hah ouk a thokhai awh.
29 ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.
Solomon e konglam kaawm rae naw, kamtawng hoi apout totouh e pueng teh, profet Nathan ni a thut e cauk, Shiloh tami Ahijah e sutdeilawk dawk hoi Nebat capa Jeroboam e kong dawk profet Iddo kamnuenae cauknaw dawk thut lah ao nahoehmaw.
30 ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.
Solomon ni Jerusalem kho dawk Isarelnaw abuemlah kum 40 touh a uk.
31 ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
Solomon teh mintoenaw koe a kâhat teh, a na pa Devit khopui dawk a pakawp awh. Hahoi a yueng lah a capa Rehoboam ni siangpahrang a tawk.