< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 1 >

1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.
ダビデの子ソロモンはその国に自分の地位を確立した。その神、主が共にいまして彼を非常に大いなる者にされた。
2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.
ソロモンはすべてのイスラエルびと、すなわち千人の長、百人の長、さばきびとおよびイスラエルの全地のすべてのつかさ、氏族のかしらたちに告げた。
3 ಹೀಗೆ ಅವನೂ, ಅವನ ಸಂಗಡ ಸಮಸ್ತ ಸಮೂಹವೂ ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಯೆಹೋವ ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಮಾಡಿದ ದೇವದರ್ಶನ ಗುಡಾರವು ಅಲ್ಲಿತ್ತು.
そしてソロモンとイスラエルの全会衆はともにギベオンにある高き所へ行った。主のしもべモーセが荒野で造った神の会見の幕屋がそこにあったからである。
4 ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.
(しかし神の箱はダビデがすでにキリアテ・ヤリムから、これのために備えた所に運び上らせてあった。ダビデはさきに、エルサレムでこれのために天幕を張って置いたからである。)
5 ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.
またホルの子であるウリの子ベザレルが造った青銅の祭壇がその所の主の幕屋の前にあり、ソロモンおよび会衆は主に求めた。
6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
ソロモンはそこに上って行って、会見の幕屋のうちにある主の前の青銅の祭壇に燔祭一千をささげた。
7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.
その夜、神はソロモンに現れて言われた、「あなたに何を与えようか、求めなさい」。
8 ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ.
ソロモンは神に言った、「あなたはわたしの父ダビデに大いなるいつくしみを示し、またわたしを彼に代って王とされました。
9 ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.
主なる神よ、どうぞわが父ダビデに約束された事を果してください。あなたは地のちりのような多くの民の上にわたしを立てて王とされたからです。
10 ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.
この民の前に出入りすることのできるように今わたしに知恵と知識とを与えてください。だれがこのような大いなるあなたの民をさばくことができましょうか」。
11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;
神はソロモンに言われた、「この事があなたの心にあって、富をも、宝をも、誉をも、またあなたを憎む者の命をも求めず、また長命をも求めず、ただわたしがあなたを立てて王としたわたしの民をさばくために知恵と知識とを自分のために求めたので、
12 ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.
知恵と知識とはあなたに与えられている。わたしはまたあなたの前の王たちの、まだ得たことのないほどの富と宝と誉とをあなたに与えよう。あなたの後の者も、このようなものを得ないでしょう」。
13 ತರುವಾಯ ಸೊಲೊಮೋನನು ಗಿಬ್ಯೋನಿನ ಉನ್ನತ ಸ್ಥಳದಲ್ಲಿದ್ದ ದೇವದರ್ಶನ ಗುಡಾರವನ್ನು ಬಿಟ್ಟು, ಯೆರೂಸಲೇಮಿಗೆ ಬಂದು, ಇಸ್ರಾಯೇಲನ್ನು ಆಳಿದನು.
それからソロモンはギベオンの高き所を去り、会見の幕屋の前を去って、エルサレムに帰り、イスラエルを治めた。
14 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.
ソロモンは戦車と騎兵とを集めたが、戦車一千四百両、騎兵一万二千人あった。ソロモンはこれを戦車の町々と、エルサレムの王のもととに置いた。
15 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.
王は銀と金を石のようにエルサレムに多くし、香柏を平野のいちじく桑のように多くした。
16 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು
ソロモンが馬を輸入したのはエジプトとクエからであった。すなわち王の貿易商人がクエから代価を払って受け取って来た。
17 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.
彼らはエジプトから戦車一両を銀六百シケルで輸入し、馬一頭を銀百五十で輸入した。同じようにこれらのものが彼らによってヘテびとのすべての王たち、およびスリヤの王たちにも輸出された。

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 1 >