< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 4 >
1 ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.
Konsa, akoz ke nou gen ministè sa a, jan nou te resevwa mizerikòd la, nou pa dekouraje.
2 ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.
Men nou renonse a bagay ki fèt an kachèt ki fè wont yo. Nou pa mache nan riz, ni nan kase fòs pawòl Bondye a ak desepsyon, men ak demonstrasyon verite a, nou rekòmande tèt nou a konsyans tout moun devan zye Bondye.
3 ನಾವು ಪ್ರಚಾರ ಮಾಡುವ ಸುವಾರ್ತೆಯು ಮುಸುಕು ಹಾಕಿರುವುದಾದರೆ, ಅದು ನಾಶದ ಮಾರ್ಗದಲ್ಲಿರುವವರಿಗೆ ಮಾತ್ರ.
Men si levanjil nou an vwale, li vwale pou sila k ap peri yo.
4 ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು. (aiōn )
Nan ka sila a, dye a mond sa a vwale lespri a enkwayan yo pou yo pa wè limyè levanjil la, glwa a Kris la, ki se imaj a Bondye. (aiōn )
5 ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.
Paske nou pa preche tèt nou, men Kris Jésus a kòm Senyè, epi nou menm kòm sèvitè a nou tout, pou kòz a Jésus.
6 “ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.
Paske se Bondye, ki te di: “Limyè va klere nan tenèb la”. Se Li menm nan ki te briye nan kè nou pou bay limyè de konesans a glwa Bondye a, ki se nan figi Kris Jésus a.
7 ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.
Men nou gen trezò sa a nan po ki fèt avèk tè ajil, pou grandè a pouvwa ki depase tout bagay la, kapab sòti nan Bondye e pa nan nou menm.
8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.
Nou aflije nan tout fason, men nou pa kraze; nou nan konfizyon, men nou pa nan dezespwa,
9 ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.
pèsekite, men nou pa abandone. Nou pran so, men nou pa detwi.
10 ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ.
Nou toujou ap pote nan kò la, lanmò Jésus, pou lavi Jésus kapab vin parèt nan kò nou.
11 ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.
Paske nou menm ki vivan yo toujou ap livre a lanmò pou kòz a Jésus, pou lavi Jésus kapab osi manifeste nan chè mòtèl nou an.
12 ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.
Konsa, lanmò travay nan nou, men lavi nan ou.
13 “ನಾನು ನಂಬಿದೆನು, ಆದ್ದರಿಂದ ಮಾತನಾಡುವೆನು,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. ಅದೇ ನಂಬಿಕೆಯ ಆತ್ಮವನ್ನು ಹೊಂದಿದವರಾದ ನಾವು ಕೂಡಾ ನಂಬಿದ್ದೇವೆ, ಆದ್ದರಿಂದ ನಾವು ಮಾತನಾಡುತ್ತೇವೆ.
Men avèk menm lespri lafwa a, selon sa ki ekri a: “Mwen te kwè, e akoz sa mwen te pale”, nou osi kwè, e akoz sa, nou pale;
14 ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
avèk konesans ke Sila ki te leve Senyè a Jésus va leve nou osi avèk Jésus e va prezante nou avèk nou menm.
15 ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.
Paske tout bagay se pou koz a nou menm, pouke lagras k ap gaye a de plizanplis moun nan kapab koz anpil remèsiman pou laglwa Bondye.
16 ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.
Donk, nou p ap dekouraje, men malgre ke lòm eksteryè nou ap dekonpoze deja lòm enteryè nou ap renouvle de jou an jou.
17 ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು. (aiōnios )
Paske ti afliksyon pou yon ti tan an ap pwodwi pou nou yon pwa laglwa etènèl ki depase tout konparezon, (aiōnios )
18 ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು. (aiōnios )
pandan nou p ap gade bagay ki vizib, men bagay ki pa vizib. Paske bagay vizib yo se pou yon ti moman, men bagay ki pa vizib yo se pou tout letènite. (aiōnios )