< ಅರಸುಗಳು - ದ್ವಿತೀಯ ಭಾಗ 17 >

1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಅರಸನಾಗಿ, ಒಂಬತ್ತು ವರ್ಷ ಆಳಿದನು.
בִּשְׁנַת֙ שְׁתֵּ֣ים עֶשְׂרֵ֔ה לְאָחָ֖ז מֶ֣לֶךְ יְהוּדָ֑ה מָ֠לַךְ הוֹשֵׁ֨עַ בֶּן־אֵלָ֧ה בְשֹׁמְר֛וֹן עַל־יִשְׂרָאֵ֖ל תֵּ֥שַׁע שָׁנִֽים׃
2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸರ ಹಾಗಿರಲಿಲ್ಲ.
וַיַּ֥עַשׂ הָרַ֖ע בְּעֵינֵ֣י יְהוָ֑ה רַ֗ק לֹ֚א כְּמַלְכֵ֣י יִשְׂרָאֵ֔ל אֲשֶׁ֥ר הָי֖וּ לְפָנָֽיו׃
3 ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.
עָלָ֣יו עָלָ֔ה שַׁלְמַנְאֶ֖סֶר מֶ֣לֶךְ אַשּׁ֑וּר וַֽיְהִי־ל֤וֹ הוֹשֵׁ֙עַ֙ עֶ֔בֶד וַיָּ֥שֶׁב ל֖וֹ מִנְחָֽה׃
4 ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.
וַיִּמְצָא֩ מֶֽלֶךְ־אַשּׁ֨וּר בְּהוֹשֵׁ֜עַ קֶ֗שֶׁר אֲשֶׁ֨ר שָׁלַ֤ח מַלְאָכִים֙ אֶל־ס֣וֹא מֶֽלֶךְ־מִצְרַ֔יִם וְלֹא־הֶעֱלָ֥ה מִנְחָ֛ה לְמֶ֥לֶךְ אַשּׁ֖וּר כְּשָׁנָ֣ה בְשָׁנָ֑ה וַֽיַּעַצְרֵ֙הוּ֙ מֶ֣לֶךְ אַשּׁ֔וּר וַיַּאַסְרֵ֖הוּ בֵּ֥ית כֶּֽלֶא׃
5 ಆಗ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು, ಸಮಾರ್ಯಕ್ಕೆ ವಿರೋಧವಾಗಿ ಬಂದು ಅದನ್ನು ಮೂರು ವರ್ಷಗಳವರೆಗೂ ಮುತ್ತಿಗೆಹಾಕಿದನು.
וַיַּ֥עַל מֶֽלֶךְ־אַשּׁ֖וּר בְּכָל־הָאָ֑רֶץ וַיַּ֙עַל֙ שֹׁמְר֔וֹן וַיָּ֥צַר עָלֶ֖יהָ שָׁלֹ֥שׁ שָׁנִֽים׃
6 ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
בִּשְׁנַ֨ת הַתְּשִׁיעִ֜ית לְהוֹשֵׁ֗עַ לָכַ֤ד מֶֽלֶךְ־אַשּׁוּר֙ אֶת־שֹׁ֣מְר֔וֹן וַיֶּ֥גֶל אֶת־יִשְׂרָאֵ֖ל אַשּׁ֑וּרָה וַיֹּ֨שֶׁב אֹתָ֜ם בַּחְלַ֧ח וּבְחָב֛וֹר נְהַ֥ר גּוֹזָ֖ן וְעָרֵ֥י מָדָֽי׃ פ
7 ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.
וַיְהִ֗י כִּֽי־חָטְא֤וּ בְנֵֽי־יִשְׂרָאֵל֙ לַיהוָ֣ה אֱלֹהֵיהֶ֔ם הַמַּעֲלֶ֤ה אֹתָם֙ מֵאֶ֣רֶץ מִצְרַ֔יִם מִתַּ֕חַת יַ֖ד פַּרְעֹ֣ה מֶֽלֶךְ־מִצְרָ֑יִם וַיִּֽירְא֖וּ אֱלֹהִ֥ים אֲחֵרִֽים׃
8 ಅವರ ಮುಂದೆ ಯೆಹೋವ ದೇವರು ಓಡಿಸಿಬಿಟ್ಟಿದ್ದ ಜನರ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.
וַיֵּֽלְכוּ֙ בְּחֻקּ֣וֹת הַגּוֹיִ֔ם אֲשֶׁר֙ הוֹרִ֣ישׁ יְהוָ֔ה מִפְּנֵ֖י בְּנֵ֣י יִשְׂרָאֵ֑ל וּמַלְכֵ֥י יִשְׂרָאֵ֖ל אֲשֶׁ֥ר עָשֽׂוּ׃
9 ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.
וַיְחַפְּא֣וּ בְנֵֽי־יִשְׂרָאֵ֗ל דְּבָרִים֙ אֲשֶׁ֣ר לֹא־כֵ֔ן עַל־יְהוָ֖ה אֱלֹהֵיהֶ֑ם וַיִּבְנ֨וּ לָהֶ֤ם בָּמוֹת֙ בְּכָל־עָ֣רֵיהֶ֔ם מִמִּגְדַּ֥ל נוֹצְרִ֖ים עַד־עִ֥יר מִבְצָֽר׃
10 ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.
וַיַּצִּ֧בוּ לָהֶ֛ם מַצֵּב֖וֹת וַאֲשֵׁרִ֑ים עַ֚ל כָּל־גִּבְעָ֣ה גְבֹהָ֔ה וְתַ֖חַת כָּל־עֵ֥ץ רַעֲנָֽן׃
11 ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.
וַיְקַטְּרוּ־שָׁם֙ בְּכָל־בָּמ֔וֹת כַּגּוֹיִ֕ם אֲשֶׁר־הֶגְלָ֥ה יְהוָ֖ה מִפְּנֵיהֶ֑ם וַֽיַּעֲשׂוּ֙ דְּבָרִ֣ים רָעִ֔ים לְהַכְעִ֖יס אֶת־יְהוָֽה׃
12 “ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು.
וַיַּֽעַבְד֖וּ הַגִּלֻּלִ֑ים אֲשֶׁ֨ר אָמַ֤ר יְהוָה֙ לָהֶ֔ם לֹ֥א תַעֲשׂ֖וּ אֶת־הַדָּבָ֥ר הַזֶּֽה׃
13 “ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.
וַיָּ֣עַד יְהוָ֡ה בְּיִשְׂרָאֵ֣ל וּבִיהוּדָ֡ה בְּיַד֩ כָּל־נביאו כָל־חֹזֶ֜ה לֵאמֹ֗ר שֻׁ֝֠בוּ מִדַּרְכֵיכֶ֤ם הָֽרָעִים֙ וְשִׁמְרוּ֙ מִצְוֺתַ֣י חֻקּוֹתַ֔י כְּכָ֨ל־הַתּוֹרָ֔ה אֲשֶׁ֥ר צִוִּ֖יתִי אֶת־אֲבֹֽתֵיכֶ֑ם וַֽאֲשֶׁר֙ שָׁלַ֣חְתִּי אֲלֵיכֶ֔ם בְּיַ֖ד עֲבָדַ֥י הַנְּבִיאִֽים׃
14 ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,
וְלֹ֖א שָׁמֵ֑עוּ וַיַּקְשׁ֤וּ אֶת־עָרְפָּם֙ כְּעֹ֣רֶף אֲבוֹתָ֔ם אֲשֶׁר֙ לֹ֣א הֶאֱמִ֔ינוּ בַּֽיהוָ֖ה אֱלֹהֵיהֶֽם׃
15 ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.
וַיִּמְאֲס֣וּ אֶת־חֻקָּ֗יו וְאֶת־בְּרִיתוֹ֙ אֲשֶׁ֣ר כָּרַ֣ת אֶת־אֲבוֹתָ֔ם וְאֵת֙ עֵֽדְוֺתָ֔יו אֲשֶׁ֥ר הֵעִ֖יד בָּ֑ם וַיֵּ֨לְכ֜וּ אַחֲרֵ֤י הַהֶ֙בֶל֙ וַיֶּהְבָּ֔לוּ וְאַחֲרֵ֤י הַגּוֹיִם֙ אֲשֶׁ֣ר סְבִֽיבֹתָ֔ם אֲשֶׁ֨ר צִוָּ֤ה יְהוָה֙ אֹתָ֔ם לְבִלְתִּ֖י עֲשׂ֥וֹת כָּהֶֽם׃
16 ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.
וַיַּעַזְב֗וּ אֶת־כָּל־ מִצְוֺת֙ יְהוָ֣ה אֱלֹהֵיהֶ֔ם וַיַּעֲשׂ֥וּ לָהֶ֛ם מַסֵּכָ֖ה שנים עֲגָלִ֑ים וַיַּעֲשׂ֣וּ אֲשֵׁירָ֗ה וַיִּֽשְׁתַּחֲווּ֙ לְכָל־צְבָ֣א הַשָּׁמַ֔יִם וַיַּעַבְד֖וּ אֶת־הַבָּֽעַל׃
17 ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
וַֽ֠יַּעֲבִירוּ אֶת־בְּנֵיהֶ֤ם וְאֶת־בְּנֽוֹתֵיהֶם֙ בָּאֵ֔שׁ וַיִּקְסְמ֥וּ קְסָמִ֖ים וַיְנַחֵ֑שׁוּ וַיִּֽתְמַכְּר֗וּ לַעֲשׂ֥וֹת הָרַ֛ע בְּעֵינֵ֥י יְהוָ֖ה לְהַכְעִיסֽוֹ׃
18 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.
וַיִּתְאַנַּ֨ף יְהוָ֤ה מְאֹד֙ בְּיִשְׂרָאֵ֔ל וַיְסִרֵ֖ם מֵעַ֣ל פָּנָ֑יו לֹ֣א נִשְׁאַ֔ר רַ֛ק שֵׁ֥בֶט יְהוּדָ֖ה לְבַדּֽוֹ׃
19 ಯೆಹೂದದವರು ಸಹ ತಮ್ಮ ಯೆಹೋವ ದೇವರ ಆಜ್ಞೆಗಳನ್ನು ಕೈಕೊಳ್ಳದೆ, ಇಸ್ರಾಯೇಲರ ಪದ್ಧತಿಗಳಲ್ಲಿಯೇ ನಡೆದರು.
גַּם־יְהוּדָ֕ה לֹ֣א שָׁמַ֔ר אֶת־מִצְוֺ֖ת יְהוָ֣ה אֱלֹהֵיהֶ֑ם וַיֵּ֣לְכ֔וּ בְּחֻקּ֥וֹת יִשְׂרָאֵ֖ל אֲשֶׁ֥ר עָשֽׂוּ׃
20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.
וַיִּמְאַ֨ס יְהוָ֜ה בְּכָל־זֶ֤רַע יִשְׂרָאֵל֙ וַיְעַנֵּ֔ם וַֽיִּתְּנֵ֖ם בְּיַד־שֹׁסִ֑ים עַ֛ד אֲשֶׁ֥ר הִשְׁלִיכָ֖ם מִפָּנָֽיו׃
21 ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.
כִּֽי־קָרַ֣ע יִשְׂרָאֵ֗ל מֵעַל֙ בֵּ֣ית דָּוִ֔ד וַיַּמְלִ֖יכוּ אֶת־יָרָבְעָ֣ם בֶּן־נְבָ֑ט וידא יָרָבְעָ֤ם אֶת־יִשְׂרָאֵל֙ מֵאַחֲרֵ֣י יְהוָ֔ה וְהֶחֱטֵיאָ֖ם חֲטָאָ֥ה גְדוֹלָֽה׃
22 ಇಸ್ರಾಯೇಲರು ಯಾರೊಬ್ಬಾಮನು ಮಾಡಿದ ಸಮಸ್ತ ಪಾಪಗಳಲ್ಲಿ ನಡೆದರು. ಅವುಗಳನ್ನು ತೊರೆದುಬಿಡಲಿಲ್ಲ.
וַיֵּֽלְכוּ֙ בְּנֵ֣י יִשְׂרָאֵ֔ל בְּכָל־חַטֹּ֥אות יָרָבְעָ֖ם אֲשֶׁ֣ר עָשָׂ֑ה לֹא־סָ֖רוּ מִמֶּֽנָּה׃
23 ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
עַ֠ד אֲשֶׁר־הֵסִ֨יר יְהוָ֤ה אֶת־יִשְׂרָאֵל֙ מֵעַ֣ל פָּנָ֔יו כַּאֲשֶׁ֣ר דִּבֶּ֔ר בְּיַ֖ד כָּל־עֲבָדָ֣יו הַנְּבִיאִ֑ים וַיִּ֨גֶל יִשְׂרָאֵ֜ל מֵעַ֤ל אַדְמָתוֹ֙ אַשּׁ֔וּרָה עַ֖ד הַיּ֥וֹם הַזֶּֽה׃ פ
24 ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.
וַיָּבֵ֣א מֶֽלֶךְ־אַשּׁ֡וּר מִבָּבֶ֡ל וּ֠מִכּוּ֠תָה וּמֵעַוָּ֤א וּמֵֽחֲמָת֙ וּסְפַרְוַ֔יִם וַיֹּ֙שֶׁב֙ בְּעָרֵ֣י שֹֽׁמְר֔וֹן תַּ֖חַת בְּנֵ֣י יִשְׂרָאֵ֑ל וַיִּֽרְשׁוּ֙ אֶת־שֹׁ֣מְר֔וֹן וַיֵּֽשְׁב֖וּ בְּעָרֶֽיהָ׃
25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
וַיְהִ֗י בִּתְחִלַּת֙ שִׁבְתָּ֣ם שָׁ֔ם לֹ֥א יָרְא֖וּ אֶת־יְהוָ֑ה וַיְשַׁלַּ֨ח יְהוָ֤ה בָּהֶם֙ אֶת־הָ֣אֲרָי֔וֹת וַיִּֽהְי֥וּ הֹרְגִ֖ים בָּהֶֽם׃
26 ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು.
וַיֹּאמְר֗וּ לְמֶ֣לֶךְ אַשּׁוּר֮ לֵאמֹר֒ הַגּוֹיִ֗ם אֲשֶׁ֤ר הִגְלִ֙יתָ֙ וַתּ֙וֹשֶׁב֙ בְּעָרֵ֣י שֹׁמְר֔וֹן לֹ֣א יָֽדְע֔וּ אֶת־מִשְׁפַּ֖ט אֱלֹהֵ֣י הָאָ֑רֶץ וַיְשַׁלַּח־בָּ֣ם אֶת־הָאֲרָי֗וֹת וְהִנָּם֙ מְמִיתִ֣ים אוֹתָ֔ם כַּאֲשֶׁר֙ אֵינָ֣ם יֹדְעִ֔ים אֶת־מִשְׁפַּ֖ט אֱלֹהֵ֥י הָאָֽרֶץ׃
27 ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು.
וַיְצַ֨ו מֶֽלֶךְ־אַשּׁ֜וּר לֵאמֹ֗ר הֹלִ֤יכוּ שָׁ֙מָּה֙ אֶחָ֤ד מֵהַכֹּֽהֲנִים֙ אֲשֶׁ֣ר הִגְלִיתֶ֣ם מִשָּׁ֔ם וְיֵלְכ֖וּ וְיֵ֣שְׁבוּ שָׁ֑ם וְיֹרֵ֕ם אֶת־מִשְׁפַּ֖ט אֱלֹהֵ֥י הָאָֽרֶץ׃
28 ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
וַיָּבֹ֞א אֶחָ֣ד מֵהַכֹּהֲנִ֗ים אֲשֶׁ֤ר הִגְלוּ֙ מִשֹּׁ֣מְר֔וֹן וַיֵּ֖שֶׁב בְּבֵֽית־אֵ֑ל וַֽיְהִי֙ מוֹרֶ֣ה אֹתָ֔ם אֵ֖יךְ יִֽירְא֥וּ אֶת־יְהוָֽה׃
29 ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.
וַיִּהְי֣וּ עֹשִׂ֔ים גּ֥וֹי גּ֖וֹי אֱלֹהָ֑יו וַיַּנִּ֣יחוּ ׀ בְּבֵ֣ית הַבָּמ֗וֹת אֲשֶׁ֤ר עָשׂוּ֙ הַשֹּׁ֣מְרֹנִ֔ים גּ֥וֹי גּוֹי֙ בְּעָ֣רֵיהֶ֔ם אֲשֶׁ֛ר הֵ֥ם יֹשְׁבִ֖ים שָֽׁם׃
30 ಬಾಬಿಲೋನಿನ ಜನರು ಸುಕ್ಕೋತ್ ಬೆನೋತ್ ವಿಗ್ರಹವನ್ನು ಮಾಡಿದರು; ಕೂತವಿನ ಜನರು ನೇರ್ಗಲ್ ವಿಗ್ರಹವನ್ನು ಮಾಡಿಕೊಂಡರು; ಹಮಾತಿನ ಜನರು ಅಷೀಮಾವನ್ನು ಮಾಡಿಕೊಂಡರು;
וְאַנְשֵׁ֣י בָבֶ֗ל עָשׂוּ֙ אֶת־סֻכּ֣וֹת בְּנ֔וֹת וְאַנְשֵׁי־כ֔וּת עָשׂ֖וּ אֶת־נֵֽרְגַ֑ל וְאַנְשֵׁ֥י חֲמָ֖ת עָשׂ֥וּ אֶת־אֲשִׁימָֽא׃
31 ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು.
וְהָעַוִּ֛ים עָשׂ֥וּ נִבְחַ֖ז וְאֶת־תַּרְתָּ֑ק וְהַסְפַרְוִ֗ים שֹׂרְפִ֤ים אֶת־בְּנֵיהֶם֙ בָּאֵ֔שׁ לְאַדְרַמֶּ֥לֶךְ וַֽעֲנַמֶּ֖לֶךְ אלה ספרים׃
32 ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
וַיִּהְי֥וּ יְרֵאִ֖ים אֶת־יְהוָ֑ה וַיַּעֲשׂ֨וּ לָהֶ֤ם מִקְצוֹתָם֙ כֹּהֲנֵ֣י בָמ֔וֹת וַיִּהְי֛וּ עֹשִׂ֥ים לָהֶ֖ם בְּבֵ֥ית הַבָּמֽוֹת׃
33 ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.
אֶת־יְהוָ֖ה הָי֣וּ יְרֵאִ֑ים וְאֶת־אֱלֹֽהֵיהֶם֙ הָי֣וּ עֹֽבְדִ֔ים כְּמִשְׁפַּט֙ הַגּוֹיִ֔ם אֲשֶׁר־הִגְל֥וּ אֹתָ֖ם מִשָּֽׁם׃
34 ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
עַ֣ד הַיּ֤וֹם הַזֶּה֙ הֵ֣ם עֹשִׂ֔ים כַּמִּשְׁפָּטִ֖ים הָרִֽאשֹׁנִ֑ים אֵינָ֤ם יְרֵאִים֙ אֶת־יְהוָ֔ה וְאֵינָ֣ם עֹשִׂ֗ים כְּחֻקֹּתָם֙ וּכְמִשְׁפָּטָ֔ם וְכַתּוֹרָ֣ה וְכַמִּצְוָ֗ה אֲשֶׁ֨ר צִוָּ֤ה יְהוָה֙ אֶת־בְּנֵ֣י יַעֲקֹ֔ב אֲשֶׁר־שָׂ֥ם שְׁמ֖וֹ יִשְׂרָאֵֽל׃
35 ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು.
וַיִּכְרֹ֨ת יְהוָ֤ה אִתָּם֙ בְּרִ֔ית וַיְצַוֵּ֣ם לֵאמֹ֔ר לֹ֥א תִֽירְא֖וּ אֱלֹהִ֣ים אֲחֵרִ֑ים וְלֹא־תִשְׁתַּחֲו֣וּ לָהֶ֔ם וְלֹ֣א תַעַבְד֔וּם וְלֹ֥א תִזְבְּח֖וּ לָהֶֽם׃
36 ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ.
כִּ֣י אִֽם־אֶת־יְהוָ֗ה אֲשֶׁר֩ הֶעֱלָ֨ה אֶתְכֶ֜ם מֵאֶ֧רֶץ מִצְרַ֛יִם בְּכֹ֧חַ גָּד֛וֹל וּבִזְר֥וֹעַ נְטוּיָ֖ה אֹת֣וֹ תִירָ֑אוּ וְל֥וֹ תִֽשְׁתַּחֲו֖וּ וְל֥וֹ תִזְבָּֽחוּ׃
37 ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.
וְאֶת־הַחֻקִּ֨ים וְאֶת־הַמִּשְׁפָּטִ֜ים וְהַתּוֹרָ֤ה וְהַמִּצְוָה֙ אֲשֶׁ֣ר כָּתַ֣ב לָכֶ֔ם תִּשְׁמְר֥וּן לַעֲשׂ֖וֹת כָּל־הַיָּמִ֑ים וְלֹ֥א תִֽירְא֖וּ אֱלֹהִ֥ים אֲחֵרִֽים׃
38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ,
וְהַבְּרִ֛ית אֲשֶׁר־כָּרַ֥תִּי אִתְּכֶ֖ם לֹ֣א תִשְׁכָּ֑חוּ וְלֹ֥א תִֽירְא֖וּ אֱלֹהִ֥ים אֲחֵרִֽים׃
39 ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.
כִּ֛י אִֽם־אֶת־יְהוָ֥ה אֱלֹהֵיכֶ֖ם תִּירָ֑אוּ וְהוּא֙ יַצִּ֣יל אֶתְכֶ֔ם מִיַּ֖ד כָּל־אֹיְבֵיכֶֽם׃
40 ಆದರೆ ಜನರು ಕೇಳದೆ ತಮ್ಮ ಪೂರ್ವದ ಪದ್ಧತಿಯ ಹಾಗೆ ಮಾಡಿದರು.
וְלֹ֖א שָׁמֵ֑עוּ כִּ֛י אִֽם־כְּמִשְׁפָּטָ֥ם הָֽרִאשׁ֖וֹן הֵ֥ם עֹשִֽׂים׃
41 ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.
וַיִּהְי֣וּ ׀ הַגּוֹיִ֣ם הָאֵ֗לֶּה יְרֵאִים֙ אֶת־יְהוָ֔ה וְאֶת־פְּסִֽילֵיהֶ֖ם הָי֣וּ עֹֽבְדִ֑ים גַּם־בְּנֵיהֶ֣ם ׀ וּבְנֵ֣י בְנֵיהֶ֗ם כַּאֲשֶׁ֨ר עָשׂ֤וּ אֲבֹתָם֙ הֵ֣ם עֹשִׂ֔ים עַ֖ד הַיּ֥וֹם הַזֶּֽה׃ פ

< ಅರಸುಗಳು - ದ್ವಿತೀಯ ಭಾಗ 17 >