< ಅರಸುಗಳು - ದ್ವಿತೀಯ ಭಾಗ 19 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
وَعِنْدَمَا سَمِعَ الْمَلِكُ حَزَقِيَّا ذَلِكَ مَزَّقَ ثِيَابَهُ وَارْتَدَى مُسُوحاً وَلَجَأَ إِلَى بَيْتِ الرَّبِّ.١
2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
ثُمَّ أَرْسَلَ أَلْيَاقِيمَ مُدِيرَ شُؤُونِ الْقَصْرِ وَشِبْنَةَ الْكَاتِبَ وَرُؤَسَاءَ الْكَهَنَةِ وَهُمْ مُرْتَدُونَ الْمُسُوحَ إِلَى النَّبِيِّ إِشَعْيَاءَ بْنِ آمُوصَ،٢
3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
فَقَالُوا لَهُ: «هَذَا مَا يَقُولُهُ حَزَقِيَّا: هَذَا الْيَوْمُ هُوَ يَوْمُ ضِيقٍ وَإِهَانَةٍ وَكَرْبٍ، فَإِنَّنَا كَالأَجِنَّةِ الْمُشْرِفَةِ عَلَى الْوِلادَةِ مِنْ غَيْرِ أَنْ تَتَوَافَرَ لَهَا الْقُوَّةُ عَلَى ذَلِكَ.٣
4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’” ಎಂದರು.
فَلَعَلَّ الرَّبَّ إِلَهَكَ يَسْمَعُ وَعِيدَ الْقَائِدِ الأَشُّورِيِّ الَّذِي أَوْفَدَهُ سَيِّدُهُ مَلِكُ أَشُّورَ، لِيُهِينَ الإِلَهَ الْحَيَّ فَيُعَاقِبَهُ الرَّبُّ إِلَهُكَ عَلَى مَا صَدَرَ مِنْهُ مِنْ تَعْيِيرٍ، فَصَلِّ مِنْ أَجْلِ الْبَقِيَّةِ النَّاجِيَةِ مِنَّا».٤
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
فَجَاءَ رِجَالُ الْمَلِكِ حَزَقِيَّا لإِشَعْيَاءَ،٥
6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
فَقَالَ لَهُمْ إِشَعْيَاءُ: «بَلِّغوا سَيِّدَكُمْ: هَذَا مَا يَقُولُهُ الرَّبُّ: لَا تَجْزَعْ مِمَّا سَمِعْتَهُ مِنْ تَجْدِيفِ رِجَالِ مَلِكِ أَشُورَ عَلَيَّ.٦
7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
فَهَا خَبَرٌ سَيِّئٌ يَرِدُ إِلَيْهِ مِنْ بِلادِهِ يَحْمِلُهُ عَلَى الْعَوْدَةِ إِلَيْهَا حَيْثُ أَقْضِي عَلَيْهِ بِحَدِّ السَّيْفِ فِي عُقْرِ دَارِهِ».٧
8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
وَعِنْدَمَا عَلِمَ قَائِدُ الْجَيْشِ الأَشُورِيُّ بِأَنَّ مَلِكَ أَشُورَ قَدِ ارْتَحَلَ عَنْ لَخِيشَ وَشَرَعَ فِي مُحَارَبَةِ لِبْنَةَ، انْسَحَبَ هُوَ أَيْضاً وَانْضَمَّ إِلَيْهِ هُنَاكَ.٨
9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,
وَبَلَغَ مَلِكُ أَشُورَ أَنَّ تُرْهَاقَةَ مَلِكَ كُوشٍ قَدْ خَرَجَ لِمُحَارَبَتِهِ، فَبَعَثَ مَرَّةً أُخْرَى رُسُلاً إِلَى حَزَقِيَّا قَائِلاً:٩
10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
«هَذَا مَا تُبَلِّغُونَهُ إِلَى حَزَقِيَّا مَلِكِ يَهُوذَا: لَا يَخْدَعْكَ إِلَهُكَ الَّذِي تَتَّكِلُ عَلَيْهِ عِنْدَمَا يَقُولُ لَنْ تَسْقُطَ أُورُشَلِيمُ فِي قَبْضَةِ مَلِكِ أَشُورَ،١٠
11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
فَهَا أَنْتَ قَدْ عَلِمْتَ بِمَا أَلْحَقَهُ مُلُوكُ أَشُورَ بِكُلِّ الْبُلْدَانِ مِنْ تَدْمِيرٍ كَامِلٍ فَهَلْ يُمْكِنُ أَنْ تَنْجُوَ أَنْتَ؟١١
12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
هَلْ أَنْقَذَتْ آلِهَةُ الأُمَمِ الأُخْرَى أَهْلَ جُوزَانَ وَحَارَانَ وَرَصْفَ وَبَنِي عَدَنَ الَّذِينَ فِي تَلَسَّارَ الَّذينَ أَفْنَاهُمْ آبَائِي؟١٢
13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
أَيْنَ مَلِكُ حَمَاةَ وَمَلِكُ أَرْفَادَ وَمَلِكُ مَدِينَةِ سَفْرَوَايِمَ وَهَيْنَعَ وَعَوَّا؟»١٣
14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
فَتَنَاوَلَ حَزَقِيَّا الْكِتَابَ مِنْ أَيْدِي الرُّسُلِ وَقَرَأَهُ، ثُمَّ تَوَجَّهَ إِلَى هَيْكَلِ الرَّبِّ وَبَسَطَهُ أَمَامَهُ.١٤
15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
وَصَلَّى قَائِلاً: «أَيُّهَا الرَّبُّ إِلَهُ إِسْرَائِيلَ، الْمُتَرَبِّعُ فَوْقَ الْكَرُوبِيمَ، أَنْتَ وَحْدَكَ إِلَهُ كُلِّ مَمَالِكِ الأَرْضِ. أَنْتَ وَحْدَكَ خَلَقْتَ السَّمَاوَاتِ وَالأَرْضَ.١٥
16 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
أَرْهِفْ يَا رَبُّ أُذُنَيْكَ وَاسْتَمِعْ. افْتَحْ يَا رَبُّ عَيْنَيْكَ وَانْظُرْ، وَاسْمَعْ كُلَّ تَهْدِيدَاتِ سَنْحَارِيبَ الَّتِي أَرْسَلَهَا لِيُعَيِّرَ اللهَ الْحَيَّ.١٦
17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
حَقّاً يَا رَبُّ إِنَّ مُلُوكَ أَشُّورَ قَدْ أَهْلَكُوا الأُمَمَ وَدَمَّرُوا دِيَارَهُمْ،١٧
18 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
وَطَرَحُوا آلِهَتَهُمْ إِلَى النَّارِ وَأَبَادُوهَا لأَنَّهَا لَيْسَتْ فِعْلاً آلِهَةً بَلْ خَشَباً وَحِجَارَةً مِنْ صَنْعَةِ أَيْدِي النَّاسِ،١٨
19 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
فَخَلِّصْنَا الآنَ أَيُّهَا الرَّبُّ إِلَهُنَا مِنْ يَدِهِ، فَتُدْرِكَ مَمَالِكُ الأَرْضِ بِأَسْرِهَا أَنَّكَ أَنْتَ وَحْدَكَ الرَّبُّ الإِلَهُ».١٩
20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.
فَبَعَثَ إِشَعْيَاءُ بْنُ آمُوصَ إِلَى حَزَقِيَّا قَائِلاً: «هَذَا مَا يَقُولُهُ الرَّبُّ إِلَهُ إِسْرَائِيلَ الَّذِي تَضَرَّعْتَ إِلَيْهِ لِيُنْقِذَكَ مِنْ سَنْحَارِيبَ مَلِكِ أَشُّورَ: قَدْ سَمِعْتُ».٢٠
21 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
وَهَذَا هُوَ رَدُّ الرَّبِّ عَلَيْهِ: «هَا الْعَذْرَاءُ ابْنَةُ صِهْيَوْنَ قَدِ احْتَقَرَتْكَ وَاسْتَهْزَأَتْ بِكَ، وَهَزَّتِ ابْنَةُ أُورُشَلِيمَ رَأْسَهَا سُخْرِيَةً مِنْكَ.٢١
22 ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
مَنْ عَيَّرْتَ وَجَدَّفْتَ عَلَيْهِ؟ وَعَلَى مَنْ رَفَعْتَ صَوْتاً وَشَمَخْتَ بِعَيْنَيْكَ زَهْواً؟ أَعَلَى قُدُّوسِ إِسْرَائِيلَ؟٢٢
23 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
لَقَدْ عَيَّرْتَ السَّيِّدَ عَلَى لِسَانِ رُسُلِكَ، وَقُلْتَ: بِكَثْرَةِ مَرْكَبَاتِي قَدْ صَعِدْتُ إِلَى أَعَالِي الْجِبَالِ، وَبَلَغْتُ أَقَاصِي لُبْنَانَ قَاطِعاً أَطْوَلَ أَرْزِهِ وَخِيَارَ سَرْوِهِ وَاخْتَرَقْتُ أَبْعَدَ رُبُوعِهِ وأَفْضَلَ غَابَاتِهِ.٢٣
24 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”
قَدْ حَفَرْتُ آبَاراً فِي أَرْضٍ غَرِيبَةٍ وَشَرِبْتُ مِيَاهاً، وَبِبَاطِنِ قَدَمَيَّ جَفَّفْتُ جَمِيعَ خُلْجَانِ مِصْرَ.٢٤
25 “‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.
أَلَمْ تَسْمَعْ؟ مُنْذُ زَمَنٍ طَوِيلٍ قَدَّرْتُ ذَلِكَ. مُنْذُ الأَيَّامِ الْقَدِيمَةِ قَرَّرْتُهُ وَهَا أَنَا الآنَ أُحَقِّقُهُ، إِذْ أَقَمْتُكَ لِتَدْمِيرِ مُدُنٍ مُحَصَّنَةٍ فَتُحَوِّلُهَا إِلَى رَوَابِي خَرِبَةٍ.٢٥
26 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
وَقَدْ خَارَتْ قُوَى أَهْلِهَا فَأَصْبَحُوا مُرْتَاعِينَ خَجِلِينَ، صَارُوا كَعُشْبِ الْحَقْلِ، كَالنَّبَاتِ اللَّيِّنِ وَكَحَشِيشِ السُّطُوحِ الذَّاوِي قَبْلَ نُمُوِّهِ.٢٦
27 “‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
وَلَكِنِّي مُطَّلِعٌ عَلَى حَرَكَاتِكَ وَسَكَنَاتِكَ وَهَيَجَانِكَ عَلَيَّ.٢٧
28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’
وَلأَنَّ ثَوْرَتَكَ عَلَيَّ وَعَجْرَفَتَكَ قَدْ بَلَغَتَا مَسَامِعِي، فَإِنِّي سَأَشْكُمُكَ بِخِزَامَتِي فِي أَنْفِكَ، وَأَضَعُ لِجَامِي فِي فَمِكَ، وَأُعِيدُكَ فِي نَفْسِ الطَّرِيقِ الَّذِي أَقْبَلْتَ مِنْهُ.٢٨
29 “ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.
وَهَذِهِ عَلامَةٌ لَكَ يَا حَزَقِيَّا: فِي هَذِهِ السَّنَةِ تَأْكُلُونَ مِمَّا نَبَتَ مِنْ نَفْسِهِ، وَفِي السَّنَةِ الثَّانِيَةِ تَأْكُلُونَ مِمَّا يَنْبُتُ عَنْهُ، وَأَمَّا فِي السَّنَةِ الثَّالِثَةِ فَتَزْرَعُونَ فِيهَا وَتَحْصُدُونَ وَتَغْرِسُونَ كُروُماً وَتَجْنُونَ أَثْمَارَهَا.٢٩
30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
وَيَعُودُ النَّاجُونَ الْبَاقُونَ مِنْ بَيْتِ يَهُوذَا، فَتَتَأَصَّلُ جُذُورُهُمْ فِي الأَرْضِ، وَيَحْمِلُونَ أَثْمَاراً عَلَى أَغْصَانِهِمْ،٣٠
31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
لأَنَّ مِنْ أُورُشَلِيمَ تَخْرُجُ الْبَقِيَّةُ، وَمِنْ جَبَلِ صِهْيَوْنَ يَأْتِي النَّاجُونَ، فَغَيْرَةُ الرَّبِّ الْقَدِيرِ تَصْنَعُ هَذَا.٣١
32 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
لِذَلِكَ فَهَذَا مَا يَقُولُهُ الرَّبُّ عَنْ مَلِكِ أَشُورَ: لَنْ يَدْخُلَ هَذِهِ الْمَدِينَةَ وَلَنْ يُطْلِقَ عَلَيْهَا سَهْماً أَوْ يَتَقَدَّمَ نَحْوَهَا بِتُرْسٍ وَلَنْ يُقِيمَ عَلَيْهَا مِقْلاعاً.٣٢
33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
بَلْ يَرْجِعَ فِي الطَّرِيقِ الَّذِي جَاءَ مِنْهُ، وَلَنْ يَدْخُلَ هَذِهِ الْمَدِينَةَ، يَقُولُ الرَّبُّ.٣٣
34 ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’”
لأَنَّنِي أُدَافِعُ عَنْهَا، وَأُنْقِذُهَا مِنْ أَجْلِ نَفْسِي، وَإِكْرَاماً لِدَاوُدَ عَبْدِي».٣٤
35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
وَحَدَثَ فِي تِلْكَ اللَّيْلَةِ أَنَّ مَلاكَ الرَّبِّ قَتَلَ مِئَةً وَخَمْسَةً وَثَمَانِينَ أَلْفاً مِنْ جَيْشِ الأَشُورِيِّينَ، فَمَا إِنْ طَلَعَ الصَّبَاحُ حَتَّى كَانَتِ الْجُثَثُ الْمَيْتَةُ تَمْلأُ الْمَكَانَ.٣٥
36 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
فَانْسَحَبَ سَنْحَارِيبُ مَلِكُ أَشُورَ وَارْتَدَّ إِلَى بِلادِهِ وَمَكَثَ فِي نِينَوَى.٣٦
37 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
وَفِيمَا هُوَ يَتَعَبَّدُ فِي هَيْكَلِ إِلَهِهِ نِسْرُوخَ، اغْتَالَهُ ابْنَاهُ، أَدْرَمَّلَكُ وَشَرَآصِرُ، وَفَرَّا إِلَى أَرْضِ أَرَارَاطَ، فَخَلَفَهُ ابْنُهُ آسَرْحَدُّونُ عَلَى الْعَرْشِ.٣٧

< ಅರಸುಗಳು - ದ್ವಿತೀಯ ಭಾಗ 19 >