< ಅರಸುಗಳು - ದ್ವಿತೀಯ ಭಾಗ 2 >
1 ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
१जब यहोवा एलिय्याह को बवंडर के द्वारा स्वर्ग में उठा ले जाने को था, तब एलिय्याह और एलीशा दोनों संग-संग गिलगाल से चले।
2 ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
२एलिय्याह ने एलीशा से कहा, “यहोवा मुझे बेतेल तक भेजता है इसलिए तू यहीं ठहरा रह।” एलीशा ने कहा, “यहोवा के और तेरे जीवन की शपथ मैं तुझे नहीं छोड़ने का;” इसलिए वे बेतेल को चले गए,
3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.
३और बेतेलवासी भविष्यद्वक्ताओं के दल एलीशा के पास आकर कहने लगे, “क्या तुझे मालूम है कि आज यहोवा तेरे स्वामी को तेरे पास से उठा लेने पर है?” उसने कहा, “हाँ, मुझे भी यह मालूम है, तुम चुप रहो।”
4 ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
४एलिय्याह ने उससे कहा, “हे एलीशा, यहोवा मुझे यरीहो को भेजता है; इसलिए तू यहीं ठहरा रह।” उसने कहा, “यहोवा के और तेरे जीवन की शपथ मैं तुझे नहीं छोड़ने का।” अतः वे यरीहो को आए।
5 ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.
५और यरीहोवासी भविष्यद्वक्ताओं के दल एलीशा के पास आकर कहने लगे, “क्या तुझे मालूम है कि आज यहोवा तेरे स्वामी को तेरे पास से उठा लेने पर है?” उसने उत्तर दिया, “हाँ मुझे भी मालूम है, तुम चुप रहो।”
6 ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.
६फिर एलिय्याह ने उससे कहा, “यहोवा मुझे यरदन तक भेजता है, इसलिए तू यहीं ठहरा रह।” उसने कहा, “यहोवा के और तेरे जीवन की शपथ मैं तुझे नहीं छोड़ने का।” अतः वे दोनों आगे चले।
7 ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.
७और भविष्यद्वक्ताओं के दल में से पचास जन जाकर उनके सामने दूर खड़े हुए, और वे दोनों यरदन के किनारे खड़े हुए।
8 ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.
८तब एलिय्याह ने अपनी चद्दर पकड़कर ऐंठ ली, और जल पर मारा, तब वह इधर-उधर दो भाग हो गया; और वे दोनों स्थल ही स्थल पार उतर गए।
9 ಅವರು ದಾಟಿಹೋದ ತರುವಾಯ, ಎಲೀಯನು ಎಲೀಷನಿಗೆ, “ನಾನು ನಿನ್ನನ್ನು ಬಿಟ್ಟುಹೋಗುವುದಕ್ಕೆ ಮುಂಚೆ, ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು,” ಎಂದನು. ಅದಕ್ಕೆ ಎಲೀಷನು, “ನಿನ್ನ ಆತ್ಮದ ಎರಡು ಪಾಲನ್ನು ನಾನು ಬಾಧ್ಯವಾಗಿ ಹೊಂದುವಂತೆ ಮಾಡು,” ಎಂದನು.
९उनके पार पहुँचने पर एलिय्याह ने एलीशा से कहा, “इससे पहले कि मैं तेरे पास से उठा लिया जाऊँ जो कुछ तू चाहे कि मैं तेरे लिये करूँ, वह माँग।” एलीशा ने कहा, “तुझ में जो आत्मा है, उसका दो गुना भाग मुझे मिल जाए।”
10 ಅದಕ್ಕವನು, “ನೀನು ಕಠಿಣವಾದದ್ದನ್ನು ಕೇಳಿದೆ. ಆದಾಗ್ಯೂ ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ಕಂಡರೆ, ನಿನಗೆ ಅದು ದೊರಕುವುದು, ಇಲ್ಲದಿದ್ದರೆ, ದೊರಕುವುದಿಲ್ಲ,” ಎಂದನು.
१०एलिय्याह ने कहा, “तूने कठिन बात माँगी है, तो भी यदि तू मुझे उठा लिये जाने के बाद देखने पाए तो तेरे लिये ऐसा ही होगा; नहीं तो न होगा।”
11 ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
११वे चलते-चलते बातें कर रहे थे, कि अचानक एक अग्निमय रथ और अग्निमय घोड़ों ने उनको अलग-अलग किया, और एलिय्याह बवंडर में होकर स्वर्ग पर चढ़ गया।
12 ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.
१२और उसे एलीशा देखता और पुकारता रहा, “हाय मेरे पिता! हाय मेरे पिता! हाय इस्राएल के रथ और सवारों!” जब वह उसको फिर दिखाई न पड़ा, तब उसने अपने वस्त्र फाड़े और फाड़कर दो भागकर दिए।
13 ಎಲೀಷನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು, ಹಿಂದಕ್ಕೆ ಹೋಗಿ, ಯೊರ್ದನ್ ನದಿ ತೀರದಲ್ಲಿ ನಿಂತನು.
१३फिर उसने एलिय्याह की चद्दर उठाई जो उस पर से गिरी थी, और वह लौट गया, और यरदन के तट पर खड़ा हुआ।
14 ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.
१४तब उसने एलिय्याह की वह चद्दर जो उस पर से गिरी थी, पकड़कर जल पर मारी और कहा, “एलिय्याह का परमेश्वर यहोवा कहाँ है?” जब उसने जल पर मारा, तब वह इधर-उधर दो भाग हो गया और एलीशा पार हो गया।
15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.
१५उसे देखकर भविष्यद्वक्ताओं के दल जो यरीहो में उसके सामने थे, कहने लगे, “एलिय्याह में जो आत्मा थी, वही एलीशा पर ठहर गई है।” अतः वे उससे मिलने को आए और उसके सामने भूमि तक झुककर दण्डवत् की।
16 ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.
१६तब उन्होंने उससे कहा, “सुन, तेरे दासों के पास पचास बलवान पुरुष हैं, वे जाकर तेरे स्वामी को ढूँढ़ें, सम्भव है कि क्या जाने यहोवा के आत्मा ने उसको उठाकर किसी पहाड़ पर या किसी तराई में डाल दिया हो।” उसने कहा, “मत भेजो।”
17 ಆದರೆ ಅವರು ಅವನನ್ನು ಬೇಸರಪಡುವವರೆಗೂ ಬಲವಂತ ಮಾಡಿದ್ದರಿಂದ ಅವನು, “ಕಳುಹಿಸಿರಿ,” ಎಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿ ಅವನನ್ನು ಕಾಣದೆ ಹೋದರು.
१७जब उन्होंने उसको यहाँ तक दबाया कि वह लज्जित हो गया, तब उसने कहा, “भेज दो।” अतः उन्होंने पचास पुरुष भेज दिए, और वे उसे तीन दिन तक ढूँढ़ते रहे परन्तु न पाया।
18 ಅವನು ಯೆರಿಕೋವಿನಲ್ಲಿ ನಿಂತಿರುವಾಗ, ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಅವರಿಗೆ, “ಹೋಗಬೇಡಿರೆಂದು ನಾನು ನಿಮಗೆ ಹೇಳಲಿಲ್ಲವೋ?” ಎಂದನು.
१८उस समय तक वह यरीहो में ठहरा रहा, अतः जब वे उसके पास लौट आए, तब उसने उनसे कहा, “क्या मैंने तुम से न कहा था, कि मत जाओ?”
19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು.
१९उस नगर के निवासियों ने एलीशा से कहा, “देख, यह नगर मनभावने स्थान पर बसा है, जैसा मेरा प्रभु देखता है परन्तु पानी बुरा है; और भूमि गर्भ गिरानेवाली है।”
20 ಅದಕ್ಕವನು, “ನನ್ನ ಬಳಿಗೆ ಹೊಸ ಗಡಿಗೆಯನ್ನು ತೆಗೆದುಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ,” ಎಂದನು. ಅವರು ಅವನ ಬಳಿಗೆ ತೆಗೆದುಕೊಂಡು ಬಂದರು.
२०उसने कहा, “एक नये प्याले में नमक डालकर मेरे पास ले आओ।” वे उसे उसके पास ले आए।
21 ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
२१तब वह जल के सोते के पास गया, और उसमें नमक डालकर कहा, “यहोवा यह कहता है, कि मैं यह पानी ठीक कर देता हूँ, जिससे वह फिर कभी मृत्यु या गर्भ गिरने का कारण न होगा।”
22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನವರೆಗೂ ಶುದ್ಧವಾಗಿಯೇ ಇದೆ.
२२एलीशा के इस वचन के अनुसार पानी ठीक हो गया, और आज तक ऐसा ही है।
23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು.
२३वहाँ से वह बेतेल को चला, और मार्ग की चढ़ाई में चल रहा था कि नगर से छोटे लड़के निकलकर उसका उपहास करके कहने लगे, “हे चन्दुए चढ़ जा, हे चन्दुए चढ़ जा।”
24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.
२४तब उसने पीछे की ओर फिरकर उन पर दृष्टि की और यहोवा के नाम से उनको श्राप दिया, तब जंगल में से दो रीछनियों ने निकलकर उनमें से बयालीस लड़के फाड़ डाले।
25 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.
२५वहाँ से वह कर्मेल को गया, और फिर वहाँ से सामरिया को लौट गया।