< ಅರಸುಗಳು - ದ್ವಿತೀಯ ಭಾಗ 20 >

1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.
בַּיָּמִ֣ים הָהֵ֔ם חָלָ֥ה חִזְקִיָּ֖הוּ לָמ֑וּת וַיָּבֹ֣א אֵ֠לָיו יְשַׁעְיָ֨הוּ בֶן־אָמ֜וֹץ הַנָּבִ֗יא וַיֹּ֨אמֶר אֵלָ֜יו כֹּֽה־אָמַ֤ר יְהוָה֙ צַ֣ו לְבֵיתֶ֔ךָ כִּ֛י מֵ֥ת אַתָּ֖ה וְלֹ֥א תִֽחְיֶֽה׃
2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,
וַיַּסֵּ֥ב אֶת־פָּנָ֖יו אֶל־הַקִּ֑יר וַיִּ֨תְפַּלֵּ֔ל אֶל־יְהוָ֖ה לֵאמֹֽר׃
3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.
אָנָּ֣ה יְהוָ֗ה זְכָר־נָ֞א אֵ֣ת אֲשֶׁ֧ר הִתְהַלַּ֣כְתִּי לְפָנֶ֗יךָ בֶּֽאֱמֶת֙ וּבְלֵבָ֣ב שָׁלֵ֔ם וְהַטּ֥וֹב בְּעֵינֶ֖יךָ עָשִׂ֑יתִי וַיֵּ֥בְךְּ חִזְקִיָּ֖הוּ בְּכִ֥י גָדֽוֹל׃ ס
4 ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು,
וַיְהִ֣י יְשַׁעְיָ֔הוּ לֹ֣א יָצָ֔א העיר הַתִּֽיכֹנָ֑ה וּדְבַר־יְהוָ֔ה הָיָ֥ה אֵלָ֖יו לֵאמֹֽר׃
5 ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.
שׁ֣וּב וְאָמַרְתָּ֞ אֶל־חִזְקִיָּ֣הוּ נְגִיד־עַמִּ֗י כֹּֽה־אָמַ֤ר יְהוָה֙ אֱלֹהֵי֙ דָּוִ֣ד אָבִ֔יךָ שָׁמַ֙עְתִּי֙ אֶת־תְּפִלָּתֶ֔ךָ רָאִ֖יתִי אֶת־דִּמְעָתֶ֑ךָ הִנְנִי֙ רֹ֣פֶא לָ֔ךְ בַּיּוֹם֙ הַשְּׁלִישִׁ֔י תַּעֲלֶ֖ה בֵּ֥ית יְהוָֽה׃
6 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.
וְהֹסַפְתִּ֣י עַל־יָמֶ֗יךָ חֲמֵ֤שׁ עֶשְׂרֵה֙ שָׁנָ֔ה וּמִכַּ֤ף מֶֽלֶךְ־אַשּׁוּר֙ אַצִּ֣ילְךָ֔ וְאֵ֖ת הָעִ֣יר הַזֹּ֑את וְגַנּוֹתִי֙ עַל־הָעִ֣יר הַזֹּ֔את לְמַֽעֲנִ֔י וּלְמַ֖עַן דָּוִ֥ד עַבְדִּֽי׃
7 ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.
וַיֹּ֣אמֶר יְשַֽׁעְיָ֔הוּ קְח֖וּ דְּבֶ֣לֶת תְּאֵנִ֑ים וַיִּקְח֛וּ וַיָּשִׂ֥ימוּ עַֽל־הַשְּׁחִ֖ין וַיֶּֽחִי׃
8 ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.
וַיֹּ֤אמֶר חִזְקִיָּ֙הוּ֙ אֶֽל־יְשַׁעְיָ֔הוּ מָ֣ה א֔וֹת כִּֽי־יִרְפָּ֥א יְהוָ֖ה לִ֑י וְעָלִ֛יתִי בַּיּ֥וֹם הַשְּׁלִישִׁ֖י בֵּ֥ית יְהוָֽה׃
9 ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.
וַיֹּ֣אמֶר יְשַׁעְיָ֗הוּ זֶה־לְּךָ֤ הָאוֹת֙ מֵאֵ֣ת יְהוָ֔ה כִּ֚י יַעֲשֶׂ֣ה יְהוָ֔ה אֶת־הַדָּבָ֖ר אֲשֶׁ֣ר דִּבֵּ֑ר הָלַ֤ךְ הַצֵּל֙ עֶ֣שֶׂר מַֽעֲל֔וֹת אִם־יָשׁ֖וּב עֶ֥שֶׂר מַעֲלֽוֹת׃
10 ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.
וַיֹּ֙אמֶר֙ יְחִזְקִיָּ֔הוּ נָקֵ֣ל לַצֵּ֔ל לִנְט֖וֹת עֶ֣שֶׂר מַעֲל֑וֹת לֹ֣א כִ֔י יָשׁ֥וּב הַצֵּ֛ל אֲחֹרַנִּ֖ית עֶ֥שֶׂר מַעֲלֽוֹת׃
11 ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು.
וַיִּקְרָ֛א יְשַׁעְיָ֥הוּ הַנָּבִ֖יא אֶל־יְהוָ֑ה וַיָּ֣שֶׁב אֶת־הַצֵּ֗ל בַּֽ֠מַּעֲלוֹת אֲשֶׁ֨ר יָרְדָ֜ה בְּמַעֲל֥וֹת אָחָ֛ז אֲחֹֽרַנִּ֖ית עֶ֥שֶׂר מַעֲלֽוֹת׃ פ
12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
בָּעֵ֣ת הַהִ֡יא שָׁלַ֡ח בְּרֹאדַ֣ךְ בַּ֠לְאֲדָן בֶּֽן־בַּלְאֲדָ֧ן מֶֽלֶךְ־בָּבֶ֛ל סְפָרִ֥ים וּמִנְחָ֖ה אֶל־חִזְקִיָּ֑הוּ כִּ֣י שָׁמַ֔ע כִּ֥י חָלָ֖ה חִזְקִיָּֽהוּ׃
13 ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
וַיִּשְׁמַ֣ע עֲלֵיהֶם֮ חִזְקִיָּהוּ֒ וַיַּרְאֵ֣ם אֶת־כָּל־בֵּ֣ית נְכֹתֹ֡ה אֶת־הַכֶּסֶף֩ וְאֶת־הַזָּהָ֨ב וְאֶת־הַבְּשָׂמִ֜ים וְאֵ֣ת ׀ שֶׁ֣מֶן הַטּ֗וֹב וְאֵת֙ בֵּ֣ית כֵּלָ֔יו וְאֵ֛ת כָּל־אֲשֶׁ֥ר נִמְצָ֖א בְּאֽוֹצְרֹתָ֑יו לֹֽא־הָיָ֣ה דָבָ֗ר אֲ֠שֶׁר לֹֽא־הֶרְאָ֧ם חִזְקִיָּ֛הוּ בְּבֵית֖וֹ וּבְכָל־מֶמְשַׁלְתּֽוֹ׃
14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು.
וַיָּבֹא֙ יְשַֽׁעְיָ֣הוּ הַנָּבִ֔יא אֶל־הַמֶּ֖לֶךְ חִזְקִיָּ֑הוּ וַיֹּ֨אמֶר אֵלָ֜יו מָ֥ה אָמְר֣וּ ׀ הָאֲנָשִׁ֣ים הָאֵ֗לֶּה וּמֵאַ֙יִן֙ יָבֹ֣אוּ אֵלֶ֔יךָ וַיֹּ֙אמֶר֙ חִזְקִיָּ֔הוּ מֵאֶ֧רֶץ רְחוֹקָ֛ה בָּ֖אוּ מִבָּבֶֽל׃
15 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.
וַיֹּ֕אמֶר מָ֥ה רָא֖וּ בְּבֵיתֶ֑ךָ וַיֹּ֣אמֶר חִזְקִיָּ֗הוּ אֵ֣ת כָּל־אֲשֶׁ֤ר בְּבֵיתִי֙ רָא֔וּ לֹא־הָיָ֥ה דָבָ֛ר אֲשֶׁ֥ר לֹֽא־הִרְאִיתִ֖ם בְּאֹצְרֹתָֽי׃
16 ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವ ದೇವರ ವಾಕ್ಯವನ್ನು ಕೇಳು:
וַיֹּ֥אמֶר יְשַׁעְיָ֖הוּ אֶל־חִזְקִיָּ֑הוּ שְׁמַ֖ע דְּבַר־יְהוָֽה׃
17 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.
הִנֵּה֮ יָמִ֣ים בָּאִים֒ וְנִשָּׂ֣א ׀ כָּל־אֲשֶׁ֣ר בְּבֵיתֶ֗ךָ וַאֲשֶׁ֨ר אָצְר֧וּ אֲבֹתֶ֛יךָ עַד־הַיּ֥וֹם הַזֶּ֖ה בָּבֶ֑לָה לֹֽא־יִוָּתֵ֥ר דָּבָ֖ר אָמַ֥ר יְהוָֽה׃
18 ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.
וּמִבָּנֶ֜יךָ אֲשֶׁ֨ר יֵצְא֧וּ מִמְּךָ֛ אֲשֶׁ֥ר תּוֹלִ֖יד יקח וְהָיוּ֙ סָֽרִיסִ֔ים בְּהֵיכַ֖ל מֶ֥לֶךְ בָּבֶֽל׃
19 ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.
וַיֹּ֤אמֶר חִזְקִיָּ֙הוּ֙ אֶֽל־יְשַֽׁעְיָ֔הוּ ט֥וֹב דְּבַר־יְהוָ֖ה אֲשֶׁ֣ר דִּבַּ֑רְתָּ וַיֹּ֕אמֶר הֲל֛וֹא אִם־שָׁל֥וֹם וֶאֱמֶ֖ת יִהְיֶ֥ה בְיָמָֽי׃
20 ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וְיֶ֨תֶר דִּבְרֵ֤י חִזְקִיָּ֙הוּ֙ וְכָל־גְּב֣וּרָת֔וֹ וַאֲשֶׁ֣ר עָשָׂ֗ה אֶת־הַבְּרֵכָה֙ וְאֶת־הַתְּעָלָ֔ה וַיָּבֵ֥א אֶת־הַמַּ֖יִם הָעִ֑ירָה הֲלֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יְהוּדָֽה׃
21 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.
וַיִּשְׁכַּ֥ב חִזְקִיָּ֖הוּ עִם־אֲבֹתָ֑יו וַיִּמְלֹ֛ךְ מְנַשֶּׁ֥ה בְנ֖וֹ תַּחְתָּֽיו׃ פ

< ಅರಸುಗಳು - ದ್ವಿತೀಯ ಭಾಗ 20 >