< ಅರಸುಗಳು - ದ್ವಿತೀಯ ಭಾಗ 22 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.
בֶּן־שְׁמֹנֶה שָׁנָה יֹאשִׁיָּהוּ בְמׇלְכוֹ וּשְׁלֹשִׁים וְאַחַת שָׁנָה מָלַךְ בִּירוּשָׁלָ͏ִם וְשֵׁם אִמּוֹ יְדִידָה בַת־עֲדָיָה מִבָּצְקַֽת׃
2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
וַיַּעַשׂ הַיָּשָׁר בְּעֵינֵי יְהֹוָה וַיֵּלֶךְ בְּכׇל־דֶּרֶךְ דָּוִד אָבִיו וְלֹא־סָר יָמִין וּשְׂמֹֽאול׃
3 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,
וַיְהִי בִּשְׁמֹנֶה עֶשְׂרֵה שָׁנָה לַמֶּלֶךְ יֹאשִׁיָּהוּ שָׁלַח הַמֶּלֶךְ אֶת־שָׁפָן בֶּן־אֲצַלְיָהוּ בֶן־מְשֻׁלָּם הַסֹּפֵר בֵּית יְהֹוָה לֵאמֹֽר׃
4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
עֲלֵה אֶל־חִלְקִיָּהוּ הַכֹּהֵן הַגָּדוֹל וְיַתֵּם אֶת־הַכֶּסֶף הַמּוּבָא בֵּית יְהֹוָה אֲשֶׁר אָסְפוּ שֹׁמְרֵי הַסַּף מֵאֵת הָעָֽם׃
5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.
(ויתנה) [וְיִתְּנוּהוּ] עַל־יַד עֹשֵׂי הַמְּלָאכָה הַמֻּפְקָדִים (בבית) [בֵּית] יְהֹוָה וְיִתְּנוּ אֹתוֹ לְעֹשֵׂי הַמְּלָאכָה אֲשֶׁר בְּבֵית יְהֹוָה לְחַזֵּק בֶּדֶק הַבָּֽיִת׃
6 ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.
לֶחָרָשִׁים וְלַבֹּנִים וְלַגֹּֽדְרִים וְלִקְנוֹת עֵצִים וְאַבְנֵי מַחְצֵב לְחַזֵּק אֶת־הַבָּֽיִת׃
7 ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.
אַךְ לֹא־יֵחָשֵׁב אִתָּם הַכֶּסֶף הַנִּתָּן עַל־יָדָם כִּי בֶאֱמוּנָה הֵם עֹשִֽׂים׃
8 ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.
וַיֹּאמֶר חִלְקִיָּהוּ הַכֹּהֵן הַגָּדוֹל עַל־שָׁפָן הַסֹּפֵר סֵפֶר הַתּוֹרָה מָצָאתִי בְּבֵית יְהֹוָה וַיִּתֵּן חִלְקִיָּה אֶת־הַסֵּפֶר אֶל־שָׁפָן וַיִּקְרָאֵֽהוּ׃
9 ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.
וַיָּבֹא שָׁפָן הַסֹּפֵר אֶל־הַמֶּלֶךְ וַיָּשֶׁב אֶת־הַמֶּלֶךְ דָּבָר וַיֹּאמֶר הִתִּיכוּ עֲבָדֶיךָ אֶת־הַכֶּסֶף הַנִּמְצָא בַבַּיִת וַֽיִּתְּנֻהוּ עַל־יַד עֹשֵׂי הַמְּלָאכָה הַמֻּפְקָדִים בֵּית יְהֹוָֽה׃
10 ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.
וַיַּגֵּד שָׁפָן הַסֹּפֵר לַמֶּלֶךְ לֵאמֹר סֵפֶר נָתַן לִי חִלְקִיָּה הַכֹּהֵן וַיִּקְרָאֵהוּ שָׁפָן לִפְנֵי הַמֶּֽלֶךְ׃
11 ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
וַֽיְהִי כִּשְׁמֹעַ הַמֶּלֶךְ אֶת־דִּבְרֵי סֵפֶר הַתּוֹרָה וַיִּקְרַע אֶת־בְּגָדָֽיו׃
12 ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
וַיְצַו הַמֶּלֶךְ אֶת־חִלְקִיָּה הַכֹּהֵן וְאֶת־אֲחִיקָם בֶּן־שָׁפָן וְאֶת־עַכְבּוֹר בֶּן־מִיכָיָה וְאֵת ׀ שָׁפָן הַסֹּפֵר וְאֵת עֲשָׂיָה עֶֽבֶד־הַמֶּלֶךְ לֵאמֹֽר׃
13 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.
לְכוּ דִרְשׁוּ אֶת־יְהֹוָה בַּעֲדִי וּבְעַד־הָעָם וּבְעַד כׇּל־יְהוּדָה עַל־דִּבְרֵי הַסֵּפֶר הַנִּמְצָא הַזֶּה כִּֽי־גְדוֹלָה חֲמַת יְהֹוָה אֲשֶׁר־הִיא נִצְּתָה בָנוּ עַל אֲשֶׁר לֹֽא־שָׁמְעוּ אֲבֹתֵינוּ עַל־דִּבְרֵי הַסֵּפֶר הַזֶּה לַעֲשׂוֹת כְּכׇל־הַכָּתוּב עָלֵֽינוּ׃
14 ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
וַיֵּלֶךְ חִלְקִיָּהוּ הַכֹּהֵן וַאֲחִיקָם וְעַכְבּוֹר וְשָׁפָן וַעֲשָׂיָה אֶל־חֻלְדָּה הַנְּבִיאָה אֵשֶׁת ׀ שַׁלֻּם בֶּן־תִּקְוָה בֶּן־חַרְחַס שֹׁמֵר הַבְּגָדִים וְהִיא יֹשֶׁבֶת בִּירוּשָׁלַ͏ִם בַּמִּשְׁנֶה וַֽיְדַבְּרוּ אֵלֶֽיהָ׃
15 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
וַתֹּאמֶר אֲלֵיהֶם כֹּה־אָמַר יְהֹוָה אֱלֹהֵי יִשְׂרָאֵל אִמְרוּ לָאִישׁ אֲשֶׁר־שָׁלַח אֶתְכֶם אֵלָֽי׃
16 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.
כֹּה אָמַר יְהֹוָה הִנְנִי מֵבִיא רָעָה אֶל־הַמָּקוֹם הַזֶּה וְעַל־יֹֽשְׁבָיו אֵת כׇּל־דִּבְרֵי הַסֵּפֶר אֲשֶׁר קָרָא מֶלֶךְ יְהוּדָֽה׃
17 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’
תַּחַת ׀ אֲשֶׁר עֲזָבוּנִי וַֽיְקַטְּרוּ לֵאלֹהִים אֲחֵרִים לְמַעַן הַכְעִיסֵנִי בְּכֹל מַעֲשֵׂה יְדֵיהֶם וְנִצְּתָה חֲמָתִי בַּמָּקוֹם הַזֶּה וְלֹא תִכְבֶּֽה׃
18 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
וְאֶל־מֶלֶךְ יְהוּדָה הַשֹּׁלֵחַ אֶתְכֶם לִדְרֹשׁ אֶת־יְהֹוָה כֹּה תֹאמְרוּ אֵלָיו כֹּֽה־אָמַר יְהֹוָה אֱלֹהֵי יִשְׂרָאֵל הַדְּבָרִים אֲשֶׁר שָׁמָֽעְתָּ׃
19 ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.
יַעַן רַךְ־לְבָבְךָ וַתִּכָּנַע ׀ מִפְּנֵי יְהֹוָה בְּֽשׇׁמְעֲךָ אֲשֶׁר דִּבַּרְתִּי עַל־הַמָּקוֹם הַזֶּה וְעַל־יֹשְׁבָיו לִֽהְיוֹת לְשַׁמָּה וְלִקְלָלָה וַתִּקְרַע אֶת־בְּגָדֶיךָ וַתִּבְכֶּה לְפָנָי וְגַם אָנֹכִי שָׁמַעְתִּי נְאֻם־יְהֹוָֽה׃
20 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
לָכֵן הִנְנִי אֹסִפְךָ עַל־אֲבֹתֶיךָ וְנֶאֱסַפְתָּ אֶל־קִבְרֹתֶיךָ בְּשָׁלוֹם וְלֹא־תִרְאֶינָה עֵינֶיךָ בְּכֹל הָרָעָה אֲשֶׁר־אֲנִי מֵבִיא עַל־הַמָּקוֹם הַזֶּה וַיָּשִׁבוּ אֶת־הַמֶּלֶךְ דָּבָֽר׃

< ಅರಸುಗಳು - ದ್ವಿತೀಯ ಭಾಗ 22 >