< ಅರಸುಗಳು - ದ್ವಿತೀಯ ಭಾಗ 23 >
1 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
И послал царь, и собрали к нему всех старейшин Иуды и Иерусалима.
2 ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
И пошел царь в дом Господень, и все Иудеи, и все жители Иерусалима с ним, и священники, и пророки, и весь народ, от малого до большого, и прочел вслух им все слова книги завета, найденной в доме Господнем.
3 ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.
Потом стал царь на возвышенное место и заключил пред лицем Господним завет - последовать Господу и соблюдать заповеди Его и откровения Его и уставы Его от всего сердца и от всей души, чтобы выполнить слова завета сего, написанные в книге сей. И весь народ вступил в завет.
4 ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.
И повелел царь Хелкии первосвященнику и вторым священникам и стоящим на страже у порога вынести из храма Господня все вещи, сделанные для Ваала и для Астарты и для всего воинства небесного, и сжег их за Иерусалимом в долине Кедрон, и велел прах их отнести в Вефиль.
5 ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ, ಯೆರೂಸಲೇಮಿನ ಸುತ್ತಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸರು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ, ಸೂರ್ಯನಿಗೂ, ಚಂದ್ರನಿಗೂ, ಗ್ರಹಗಳಿಗೂ, ಆಕಾಶದ ಸಮಸ್ತ ಸೈನ್ಯಕ್ಕೂ, ಧೂಪಸುಡುವವರನ್ನೂ ತೆಗೆದುಹಾಕಿದನು.
И отставил жрецов, которых поставили цари Иудейские, чтобы совершать курения на высотах в городах Иудейских и окрестностях Иерусалима, - и которые кадили Ваалу, солнцу, и луне, и созвездиям, и всему воинству небесному;
6 ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.
и вынес Астарту из дома Господня за Иерусалим к потоку Кедрону, и сжег ее у потока Кедрона, и истер ее в прах, и бросил прах ее на кладбище общенародное;
7 ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.
и разрушил домы блудилищные, которые были при храме Господнем, где женщины ткали одежды для Астарты;
8 ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
и вывел всех жрецов из городов Иудейских, и осквернил высоты, на которых совершали курения жрецы, от Гевы до Вирсавии, и разрушил высоты пред воротами, ту, которая у входа в ворота Иисуса градоначальника, и ту, которая на левой стороне у городских ворот.
9 ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
Впрочем жрецы высот не приносили жертв на жертвеннике Господнем в Иерусалиме, опресноки же ели вместе с братьями своими.
10 ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.
И осквернил он Тофет, что на долине сыновей Еннома, чтобы никто не проводил сына своего и дочери своей чрез огонь Молоху;
11 ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು.
и отменил коней, которых ставили цари Иудейские солнцу пред входом в дом Господень близ комнат Нефан-Мелеха евнуха, что в Фаруриме, колесницы же солнца сжег огнем.
12 ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.
И жертвенники на кровле горницы Ахазовой, которые сделали цари Иудейские, и жертвенники, которые сделал Манассия на обоих дворах дома Господня, разрушил царь, и низверг оттуда, и бросил прах их в поток Кедрон.
13 ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.
И высоты, которые пред Иерусалимом, направо от Масличной горы, которые устроил Соломон, царь Израилев, Астарте, мерзости Сидонской, и Хамосу, мерзости Моавитской, и Милхому, мерзости Аммонитской, осквернил царь;
14 ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
и изломал статуи, и срубил дубравы, и наполнил место их костями человеческими.
15 ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.
Также и жертвенник, который в Вефиле, высоту, устроенную Иеровоамом, сыном Наватовым, который ввел Израиля в грех, - также и жертвенник тот и высоту он разрушил, и сжег сию высоту, стер в прах, и сжег дубраву.
16 ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.
И взглянул Иосия и увидел могилы, которые были там на горе, и послал и взял кости из могил, и сжег на жертвеннике, и осквернил его по слову Господню, которое провозгласил человек Божий, предрекший события сии, когда Иеровоам, во время праздника, стоял пред жертвенником. Потом, обратившись, увидел могилу человека Божия, предрекшего сии события,
17 ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು.
и сказал Иосия: что это за памятник, который я вижу? И сказали ему жители города: это могила человека Божия, который приходил из Иудеи и провозгласил о том, что ты делаешь над жертвенником Вефильским.
18 “ಅದನ್ನು ಬಿಟ್ಟುಬಿಡಿರಿ. ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ,” ಎಂದನು. ಹಾಗೆಯೇ ಅವನು ಅವರ ಎಲುಬುಗಳನ್ನು ಸಮಾರ್ಯದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಬಿಟ್ಟುಬಿಟ್ಟರು.
И сказал он: оставьте его в покое, никто не трогай костей его. И сохранили кости его и кости пророка, который приходил из Самарии.
19 ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.
Также и все капища высот в городах Самарийских, которые построили цари Израильские, прогневляя Господа, разрушил Иосия, и сделал с ними то же, что сделал в Вефиле;
20 ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.
и заколол всех жрецов высот, которые там были, на жертвенниках, и сожег кости человеческие на них, - и возвратился в Иерусалим.
21 ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.
И повелел царь всему народу, сказав: “совершите пасху Господу Богу вашему, как написано в сей книге завета”,
22 ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲುಗೊಂಡು, ಇಸ್ರಾಯೇಲಿನ ಯೆಹೂದದ ಅರಸರ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ.
потому что не была совершена такая пасха от дней судей, которые судили Израиля, и во все дни царей Израильских и царей Иудейских;
23 ಅರಸನಾದ ಯೋಷೀಯನ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಆಚರಿಸಲಾಯಿತು.
а в восемнадцатый год царя Иосии была совершена сия пасха Господу в Иерусалиме.
24 ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.
И вызывателей мертвых, и волшебников, и терафимов, и идолов, и все мерзости, которые появлялись в земле Иудейской и в Иерусалиме, истребил Иосия, чтоб исполнить слова закона, написанные в книге, которую нашел Хелкия священник в доме Господнем.
25 ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.
Подобного ему не было царя прежде его, который обратился бы к Господу всем сердцем своим, и всею душею своею, и всеми силами своими, по всему закону Моисееву; и после него не восстал подобный ему.
26 ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.
Однакож Господь не отложил великой ярости гнева Своего, какою воспылал гнев Его на Иуду за все оскорбления, какими прогневал Его Манассия.
27 ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.
И сказал Господь: и Иуду отрину от лица Моего, как отринул Я Израиля, и отвергну город сей Иерусалим, который Я избрал, и дом, о котором Я сказал: “будет имя Мое там”.
28 ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
Прочее об Иосии и обо всем, что он сделал, написано в летописи царей Иудейских.
29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.
Во дни его пошел фараон Нехао, царь Египетский, против царя Ассирийского на реку Евфрат. И вышел царь Иосия навстречу ему, и тот умертвил его в Мегиддоне, когда увидел его.
30 ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.
И рабы его повезли его мертвого из Мегиддона, и привезли его в Иерусалим, и похоронили его в гробнице его. И взял народ земли Иоахаза, сына Иосиина, и помазали его и воцарили его вместо отца его.
31 ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.
Двадцати трех лет был Иоахаз, когда воцарился, и три месяца царствовал в Иерусалиме; имя матери его Хамуталь, дочь Иеремии, из Ливны.
32 ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
И делал он неугодное в очах Господних во всем так, как делали отцы его.
33 ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.
И задержал его фараон Нехао в Ривле, в земле Емафской, чтобы он не царствовал в Иерусалиме, - и наложил пени на землю сто талантов серебра и сто талантов золота.
34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.
И воцарил фараон Нехао Елиакима, сына Иосиина, вместо Иосии, отца его, и переменил имя его на Иоакима; Иоахаза же взял и отвел в Египет, где он и умер.
35 ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.
И серебро и золото давал Иоаким фараону; он сделал оценку земле, чтобы давать серебро по приказанию фараона; от каждого из народа земли, по оценке своей, он взыскивал серебро и золото для того, чтобы отдавать фараону Нехао.
36 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.
Двадцати пяти лет был Иоаким, когда воцарился, и одиннадцать лет царствовал в Иерусалиме; имя матери его Зебудда, дочь Федаии, из Румы.
37 ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
И делал он неугодное в очах Господних во всем так, как делали отцы его.