< ಅರಸುಗಳು - ದ್ವಿತೀಯ ಭಾಗ 25 >
1 ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.
It happened that in the ninth year of the reign of King Zedekiah, in the tenth month, and on the tenth day of the month, Nebuchadnezzar king of Babylon came with all his army against Jerusalem. He camped opposite it, and they built a siege wall around it.
2 ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.
So the city was besieged until the eleventh year of King Zedekiah's reign.
3 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
On the ninth day of the fourth month of that year, the famine was so severe in the city that there was no food for the people of the land.
4 ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
Then the city was broken into, and all the fighting men fled at night by the way of the gate between the two walls, by the king's garden, although the Chaldeans were all around the city. The king went in the direction of the Arabah.
5 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
But the army of Chaldeans pursued King Zedekiah and overtook him in the plains of the Jordan River valley near Jericho. All his army was scattered away from him.
6 ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
They captured the king and brought him up to the king of Babylon at Riblah, where they passed sentence on him.
7 ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
As for Zedekiah's sons, they slaughtered them before his eyes. Then he put out his eyes, bound him in bronze chains, and brought him to Babylon.
8 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,
Now in the fifth month, on the seventh day of the month, which was the nineteenth year of the reign of Nebuchadnezzar king of Babylon, Nebuzaradan, a servant of the king of Babylon and commander of his bodyguards, came to Jerusalem.
9 ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.
He burned the house of Yahweh, the king's palace, and all the houses of Jerusalem; also every important building in the city he burned.
10 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.
As for all the walls around Jerusalem, all the army of the Babylonians who were under the commander of the bodyguard destroyed them.
11 ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.
As for the rest of the people who were left in the city, those who had deserted to the king of Babylon, and the remainder of the population—Nebuzaradan, the commander of the bodyguard, took them away into exile.
12 ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
But the commander of the bodyguard did leave some of the poorest of the land to work the vineyards and fields.
13 ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
As for the bronze pillars that were in the house of Yahweh, and the stands and the bronze sea that were in the house of Yahweh, the Chaldeans broke them into pieces and carried the bronze back to Babylon.
14 ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.
The pots, shovels, lamp trimmers, spoons, and all the utensils of bronze with which the priests had served in the temple—the Chaldeans took them all away.
15 ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.
The pots for removing ashes and the bowls that were made of gold, and those made of silver—the captain of the king's guard took them away as well.
16 ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.
The two pillars, the sea, and the stands that Solomon had made for the house of Yahweh contained more bronze than could be weighed.
17 ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.
The height of the first pillar was eighteen cubits, and a capital of bronze was on top of it. The capital was three cubits high, with latticework and pomegranates all around on the capital, all made of bronze. The other pillar and its latticework were the same as the first.
18 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.
The commander of the bodyguard took Seraiah the chief priest, together with Zephaniah, the second priest, and the three gatekeepers.
19 ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.
From the city he took prisoner an officer who was in charge of soldiers, and five men of those who advised the king, who were still in the city. He also took prisoner the king's army officer responsible for drafting men into the army, along with sixty important men from the land who were in the city.
20 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
Then Nebuzaradan, the commander of the bodyguard, took them and brought them to the king of Babylon at Riblah.
21 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
The king of Babylon put them to death at Riblah in the land of Hamath. In this way, Judah went out of its land into exile.
22 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
As for the people who remained in the land of Judah, those whom Nebuchadnezzar king of Babylon had left, he put Gedaliah son of Ahikam, son of Shaphan, in charge of them.
23 ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
Now when all the commanders of the soldiers, they and their men, heard that the king of Babylon had made Gedaliah governor, they went to Gedaliah at Mizpah. These men were Ishmael son of Nethaniah, Johanan son of Kareah, Seraiah son of Tanhumeth the Netophathite, and Jaazaniah son of the Maakathite—they and their men.
24 ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.
Gedaliah made an oath to them and to their men, and said to them, “Do not be afraid of the Chaldean officials. Live in the land and serve the king of Babylon, and it will go well with you.”
25 ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.
But it happened that in the seventh month Ishmael son of Nethaniah son of Elishama, from the royal family, came with ten men and attacked Gedaliah. Gedaliah died, along with the men of Judah and the Babylonians who were with him at Mizpah.
26 ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.
Then all the people, from the least to the greatest, and the commanders of the soldiers, arose and went to Egypt, because they were afraid of the Babylonians.
27 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.
It happened later in the thirty-seventh year of the exile of Jehoiachin king of Judah, in the twelfth month, on the twenty-seventh day of the month, that Awel-Marduk king of Babylon released Jehoiachin king of Judah from prison. This happened in the year that Awel-Marduk began to reign.
28 ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
He spoke kindly to him and gave him a seat more honorable than that of the other kings who were with him in Babylon.
29 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.
Awel-Marduk removed Jehoiachin's prison clothes, and Jehoiachin ate regularly at the king's table for the rest of his life.
30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.
A regular food allowance was given to him every day for the rest of his life.