< ಅರಸುಗಳು - ದ್ವಿತೀಯ ಭಾಗ 3 >
1 ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರ್ಷದಲ್ಲಿ, ಅಹಾಬನ ಮಗ ಯೋರಾಮನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು.
유다 왕 여호사밧의 십팔년에 아합의 아들 여호람이 사마리아에서 이스라엘 왕이 되어 십이 년을 치리하니라
2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆಯಂತೆ, ತನ್ನ ತಾಯಿಯಂತೆ ಮಾಡಲಿಲ್ಲ. ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
저가 여호와 보시기에 악을 행하였으나 그 부모와 같이 하지는 아니하였으니 이는 저가 그 아비의 만든 바알의 주상을 제하였음이라
3 ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.
그러나 저가 느밧의 아들 여로보암이 이스라엘로 범하게 한 그 죄를 따라 행하고 떠나지 아니하였더라
4 ಮೋವಾಬಿನ ಅರಸನಾದ ಮೇಷನು ಕುರಿ ಮಂದೆಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ, ಒಂದು ಲಕ್ಷ ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಡುತ್ತಿದ್ದನು.
모압 왕 메사는 양을 치는 자라 새끼 양 십만의 털과 수양 십만의 털을 이스라엘 왕에게 바치더니
5 ಅಹಾಬನು ಮರಣ ಹೊಂದಿದ ತರುವಾಯ, ಮೋವಾಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
아합이 죽은 후에 모압 왕이 이스라엘 왕을 배반한지라
6 ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.
그 때에 여호람 왕이 사마리아에서 나가서 온 이스라엘을 점고하고
7 ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.
또 가서 유다 왕 여호사밧에게 보내어 이르되 모압 왕이 나를 배반하였으니 당신은 나와 함께 가서 모압을 치시겠느뇨 저가 가로되 내가 올라가리이다 나는 당신과 일반이요 내 백성은 당신의 백성과 일반이요 내 말들도 당신의 말들과 일반이니이다
8 ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು.
여호람이 가로되 우리가 어느 길로 올라가리이까 저가 대답하되 에돔 광야 길로니이다
9 ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
이스라엘 왕이 유다 왕과 에돔 왕으로 더불어 행하더니 길을 둘러 행한지 칠일에 군사와 따라가는 생축을 먹일 물이 없는지라
10 ಆಗ ಇಸ್ರಾಯೇಲಿನ ಅರಸನು, “ಅಯ್ಯೋ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾರಲ್ಲಾ?” ಎಂದನು.
이스라엘 왕이 가로되 슬프다 여호와께서 이 세 왕을 불러 모아 모압의 손에 붙이려 하시는도다
11 ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.
여호사밧이 가로되 우리가 여호와께 물을만한 여호와의 선지자가 여기 없느냐 이스라엘 왕의 신복 중에 한 사람이 대답하여 가로되 전에 엘리야의 손에 물을 붓던 사밧의 아들 엘리사가 여기 있나이다
12 ಆಗ ಯೆಹೋಷಾಫಾಟನು, “ಅವನ ಬಳಿಯಲ್ಲಿ ಯೆಹೋವ ದೇವರ ವಾಕ್ಯ ಇದೆ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೋಷಾಫಾಟನೂ, ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
여호사밧이 가로되 여호와의 말씀이 저에게 있도다 이에 이스라엘 왕이 여호사밧과 에돔 왕으로 더불어 그에게로 내려가니라
13 ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.
엘리사가 이스라엘 왕에게 이르되 내가 당신과 무슨 상관이 있나이까 당신의 부친의 선지자들과 당신의 모친의 선지자들에게로 가소서 이스라엘 왕이 저에게 이르되 그렇지 아니하니이다 여호와께서 이 세 왕을 불러 모아 모압의 손에 붙이려 하시나이다
14 ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರ ಆಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿ ಬಂದಿರುವುದರಿಂದ ಗೌರವಿಸುತ್ತಿದ್ದೇನೆ; ಇಲ್ಲದಿದ್ದರೆ, ನಾನು ನಿನ್ನ ಕಡೆ ಸಹ ನೋಡುತ್ತಿರಲಿಲ್ಲ.
엘리사가 가로되 내가 섬기는 만군의 여호와의 사심을 가리켜 맹세하노니 내가 만일 유다 왕 여호사밧의 낯을 봄이 아니면 당신을 향하지도 아니하고 보지도 아니하였으리이다
15 ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.
이제 내게로 거문고 탈 자를 불러 오소서 하니라 거문고 타는 자가 거문고를 탈 때에 여호와께서 엘리사를 감동하시니
16 ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ.
저가 가로되 여호와의 말씀이 이 골짜기에 개천을 많이 파라 하셨나이다
17 ಏಕೆಂದರೆ ಯೆಹೋವ ದೇವರು, ‘ನೀವು ಗಾಳಿಯನ್ನೂ, ಮಳೆಯನ್ನೂ ಕಾಣುವುದಿಲ್ಲ. ಆದರೆ ನೀವು ನಿಮ್ಮ ದನಗಳೂ, ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬುವುದು.’
여호와께서 이르시기를 너희가 바람도 보지 못하고 비도 보지 못하되 이 골짜기에 물이 가득하여 너희와 너희 육축과 짐승이 마시리라 하셨나이다
18 ಇದಲ್ಲದೆ ಇದು ಯೆಹೋವ ದೇವರ ದೃಷ್ಟಿಗೆ ಅಲ್ಪವಾಗಿರುವುದು. ಅವರು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವರು.
이것은 여호와 보시기에 오히려 작은 일이라 여호와께서 모압 사람도 당신의 손에 붙이시리니
19 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ನಾಶಮಾಡಿಬಿಟ್ಟು, ಉತ್ತಮವಾದ ಎಲ್ಲಾ ಮರಗಳನ್ನೂ ಬೀಳಮಾಡಿ, ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಉತ್ತಮವಾದ ಭೂಮಿಯಲ್ಲಿರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ಕೆಡಿಸುವಿರಿ,” ಎಂದನು.
당신들이 모든 견고한 성과 모든 아름다운 성을 치고 모든 좋은 나무를 베고 모든 샘을 메우고 돌로 모든 좋은 밭을 헐리이다 하더니
20 ಉದಯದಲ್ಲಿ ಕಾಣಿಕೆಗಳನ್ನು ಅರ್ಪಿಸುತ್ತಿರುವಾಗ, ನೀರು ಎದೋಮಿನ ಮಾರ್ಗವಾಗಿ ಬಂದದ್ದರಿಂದ ದೇಶವು ನೀರಿನಿಂದ ತುಂಬಿಕೊಂಡಿತು.
아침에 미쳐 소제 드릴 때에 물이 에돔 편에서부터 흘러와서 그 땅에 가득하였더라
21 ಅರಸರು ತಮ್ಮ ಸಂಗಡ ಯುದ್ಧಮಾಡುವುದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ, ಅವರು ಆಯುಧ ಧರಿಸತಕ್ಕ ಪ್ರಾಯಸ್ಥರು ಮೊದಲುಗೊಂಡು, ಸಮಸ್ತರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
모압 모든 사람이 왕들이 올라와서 자기를 치려한다 함을 듣고 갑옷 입을 만한 자로부터 그 이상이 다 모여 그 경계에 섰더라
22 ಮೋವಾಬ್ಯರು ಉದಯಕಾಲದಲ್ಲಿ ಎದ್ದು, ಆ ನೀರಿನ ಮೇಲೆ ಸೂರ್ಯ ಪ್ರಕಾಶ ಮೂಡಿದ್ದರಿಂದ ಆಚೆಯಲ್ಲಿರುವ ಆ ನೀರು ರಕ್ತದ ಹಾಗೆ ಕೆಂಪಾಗಿರುವುದನ್ನು ಕಂಡರು.
아침에 모압 사람이 일찍이 일어나서 해가 물에 비취므로 맞은편 물이 붉어 피와 같음을 보고
23 ಆಗ ಅವರು, “ಇದು ರಕ್ತವೇ. ಆ ಅರಸರು ತಮ್ಮನ್ನು ತಾವೇ ನಿಜವಾಗಿ ನಾಶಮಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ. ಈಗ ಮೋವಾಬ್ಯರೇ ಕೊಳ್ಳೆಗೆ ಬನ್ನಿರಿ,” ಎಂದು ಹೇಳಿಕೊಂಡರು.
가로되 이는 피라 필연 저 왕들이 싸워 서로 죽인 것이로다 모압 사람들아 이제 노략하러 가자 하고
24 ಅವರು ಇಸ್ರಾಯೇಲಿನ ದಂಡಿಗೆ ಬಂದಾಗ, ಇಸ್ರಾಯೇಲರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಸೋಲಿಸಿ, ಮೋವಾಬ್ಯರನ್ನು ಅವರ ದೇಶದವರೆಗೂ ಹೊಡೆಯುತ್ತಾ ಬಂದರು.
이스라엘 진에 이르니 이스라엘 사람이 일어나 모압 사람을 쳐서 그 앞에서 도망하게 하고 그 지경에 들어가며 모압 사람을 치고
25 ಇದಲ್ಲದೆ ಅವರು ಪಟ್ಟಣಗಳನ್ನು ಕೆಡವಿಹಾಕಿ, ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ, ಬಾವಿಗಳನ್ನೆಲ್ಲಾ ಮುಚ್ಚಿ, ಸಮಸ್ತ ಉತ್ತಮವಾದ ಮರಗಳನ್ನು ಕಡಿದುಹಾಕಿದರು. ಕೀರ್ ಹರೆಷೆತ್ ನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನು ಸುತ್ತಿಕೊಂಡು ಹೊಡೆದುಬಿಟ್ಟರು.
그 성읍을 쳐서 헐고 각기 돌을 던져 모든 좋은 밭에 가득하게 하고 모든 샘을 메우고 모든 좋은 나무를 베고 길하라셋의 돌들은 남기고 물맷군이 두루 다니며 치니라
26 ಮೋವಾಬಿನ ಅರಸನು ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಕಂಡಾಗ, ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ, ಖಡ್ಗ ಹಿಡಿಯುವ ಏಳು ನೂರು ಮಂದಿಯನ್ನು ತನ್ನ ಸಂಗಡ ತೆಗೆದುಕೊಂಡನು. ಆದರೆ ಅದು ಅವರಿಂದ ಆಗದೆ ಹೋಯಿತು.
모압 왕이 전세가 극렬하여 당하기 어려움을 보고 칼 찬 군사 칠백을 거느리고 충돌하여 지나서 에돔 왕에게로 가고자 하되 능히 못하고
27 ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು.
이에 자기 위를 이어 왕이 될 맏아들을 취하여 성 위에서 번제를 드린지라 이스라엘에게 크게 통분함이 임하매 저희가 떠나 각기 고국으로 돌아갔더라