< ಅರಸುಗಳು - ದ್ವಿತೀಯ ಭಾಗ 4 >

1 ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.
וְאִשָּׁה אַחַת מִנְּשֵׁי בְנֵֽי־הַנְּבִיאִים צָעֲקָה אֶל־אֱלִישָׁע לֵאמֹר עַבְדְּךָ אִישִׁי מֵת וְאַתָּה יָדַעְתָּ כִּי עַבְדְּךָ הָיָה יָרֵא אֶת־יְהֹוָה וְהַנֹּשֶׁה בָּא לָקַחַת אֶת־שְׁנֵי יְלָדַי לוֹ לַעֲבָדִֽים׃
2 ಎಲೀಷನು ಅವಳಿಗೆ, “ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು? ನನಗೆ ತಿಳಿಸು,” ಎಂದನು. ಅವಳು, “ನಿನ್ನ ಸೇವಕಿಗೆ ಒಂದು ಪಾತ್ರೆಯಲ್ಲಿ ಸ್ವಲ್ಪವೇ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ,” ಎಂದಳು.
וַיֹּאמֶר אֵלֶיהָ אֱלִישָׁע מָה אֶֽעֱשֶׂה־לָּךְ הַגִּידִי לִי מַה־יֶּשׁ־[לָךְ] (לכי) בַּבָּיִת וַתֹּאמֶר אֵין לְשִׁפְחָתְךָ כֹל בַּבַּיִת כִּי אִם־אָסוּךְ שָֽׁמֶן׃
3 ಆಗ ಅವನು, “ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರಿದಾದ ಪಾತ್ರೆಗಳನ್ನು ಬೇಕಾದಷ್ಟು ಕೇಳಿ ತೆಗೆದುಕೊಂಡು ಬಾ.
וַיֹּאמֶר לְכִי שַׁאֲלִי־לָךְ כֵּלִים מִן־הַחוּץ מֵאֵת כׇּל־[שְׁכֵנָיִךְ] (שכנכי) כֵּלִים רֵקִים אַל־תַּמְעִֽיטִי׃
4 ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು.
וּבָאת וְסָגַרְתְּ הַדֶּלֶת בַּעֲדֵךְ וּבְעַד־בָּנַיִךְ וְיָצַקְתְּ עַל כׇּל־הַכֵּלִים הָאֵלֶּה וְהַמָּלֵא תַּסִּֽיעִי׃
5 ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು.
וַתֵּלֶךְ מֵֽאִתּוֹ וַתִּסְגֹּר הַדֶּלֶת בַּעֲדָהּ וּבְעַד בָּנֶיהָ הֵם מַגִּישִׁים אֵלֶיהָ וְהִיא (מיצקת) [מוֹצָֽקֶת]׃
6 ಆ ಪಾತ್ರೆಗಳು ತುಂಬಿದ ತರುವಾಯ ಅವಳು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು. ಮಗನು ಅವಳಿಗೆ, “ಇನ್ನೊಂದು ಪಾತ್ರೆ ಇಲ್ಲ,” ಎಂದನು. ಆಗ ಎಣ್ಣೆಯು ನಿಂತುಹೋಯಿತು.
וַיְהִי ׀ כִּמְלֹאת הַכֵּלִים וַתֹּאמֶר אֶל־בְּנָהּ הַגִּישָׁה אֵלַי עוֹד כֶּלִי וַיֹּאמֶר אֵלֶיהָ אֵין עוֹד כֶּלִי וַֽיַּעֲמֹד הַשָּֽׁמֶן׃
7 ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.
וַתָּבֹא וַתַּגֵּד לְאִישׁ הָאֱלֹהִים וַיֹּאמֶר לְכִי מִכְרִי אֶת־הַשֶּׁמֶן וְשַׁלְּמִי אֶת־[נִשְׁיֵךְ] (נשיכי) וְאַתְּ [וּבָנַיִךְ] (בניכי) תִּֽחְיִי בַּנּוֹתָֽר׃
8 ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬಳು ಶ್ರೀಮಂತ ಸ್ತ್ರೀಯು ಇದ್ದಳು. ಅವಳು ಅವನನ್ನು ಊಟ ಮಾಡಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ, ಅಲ್ಲಿ ಊಟ ಮಾಡಲು ಹೋಗುತ್ತಿದ್ದನು.
וַיְהִי הַיּוֹם וַיַּֽעֲבֹר אֱלִישָׁע אֶל־שׁוּנֵם וְשָׁם אִשָּׁה גְדוֹלָה וַתַּחֲזֶק־בּוֹ לֶאֱכׇל־לָחֶם וַֽיְהִי מִדֵּי עׇבְרוֹ יָסֻר שָׁמָּה לֶאֱכׇל־לָֽחֶם׃
9 ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.
וַתֹּאמֶר אֶל־אִישָׁהּ הִנֵּה־נָא יָדַעְתִּי כִּי אִישׁ אֱלֹהִים קָדוֹשׁ הוּא עֹבֵר עָלֵינוּ תָּמִֽיד׃
10 ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.
נַעֲשֶׂה־נָּא עֲלִיַּת־קִיר קְטַנָּה וְנָשִׂים לוֹ שָׁם מִטָּה וְשֻׁלְחָן וְכִסֵּא וּמְנוֹרָה וְהָיָה בְּבֹאוֹ אֵלֵינוּ יָסוּר שָֽׁמָּה׃
11 ಒಂದು ದಿವಸ ಎಲೀಷನು ಅಲ್ಲಿಗೆ ಬಂದು, ಆ ಕೊಠಡಿಯಲ್ಲಿ ಪ್ರವೇಶಿಸಿ ಮಲಗಿದನು.
וַיְהִי הַיּוֹם וַיָּבֹא שָׁמָּה וַיָּסַר אֶל־הָעֲלִיָּה וַיִּשְׁכַּב־שָֽׁמָּה׃
12 ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.
וַיֹּאמֶר אֶל־גֵּיחֲזִי נַעֲרוֹ קְרָא לַשּׁוּנַמִּית הַזֹּאת וַיִּקְרָא־לָהּ וַֽתַּעֲמֹד לְפָנָֽיו׃
13 ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.
וַיֹּאמֶר לוֹ אֱמׇר־נָא אֵלֶיהָ הִנֵּה חָרַדְתְּ ׀ אֵלֵינוּ אֶת־כׇּל־הַחֲרָדָה הַזֹּאת מֶה לַעֲשׂוֹת לָךְ הֲיֵשׁ לְדַבֶּר־לָךְ אֶל־הַמֶּלֶךְ אוֹ אֶל־שַׂר הַצָּבָא וַתֹּאמֶר בְּתוֹךְ עַמִּי אָנֹכִי יֹשָֽׁבֶת׃
14 ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು.
וַיֹּאמֶר וּמֶה לַעֲשׂוֹת לָהּ וַיֹּאמֶר גֵּיחֲזִי אֲבָל בֵּן אֵֽין־לָהּ וְאִישָׁהּ זָקֵֽן׃
15 ಪ್ರವಾದಿಯು, “ಅವಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದಾಗ ಅವಳು ಬಾಗಿಲಲ್ಲೇ ನಿಂತಳು.
וַיֹּאמֶר קְרָא־לָהּ וַיִּקְרָא־לָהּ וַֽתַּעֲמֹד בַּפָּֽתַח׃
16 ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.
וַיֹּאמֶר לַמּוֹעֵד הַזֶּה כָּעֵת חַיָּה (אתי) [אַתְּ] חֹבֶקֶת בֵּן וַתֹּאמֶר אַל־אֲדֹנִי אִישׁ הָאֱלֹהִים אַל־תְּכַזֵּב בְּשִׁפְחָתֶֽךָ׃
17 ಆದರೆ, ಆ ಸ್ತ್ರೀಯು ಗರ್ಭಧರಿಸಿ, ಎಲೀಷನು ಹೇಳಿದ ಪ್ರಕಾರ ಮುಂದಿನ ವರ್ಷದ ಅದೇ ಸಮಯದಲ್ಲಿ ಮಗನನ್ನು ಹೆತ್ತಳು.
וַתַּהַר הָאִשָּׁה וַתֵּלֶד בֵּן לַמּוֹעֵד הַזֶּה כָּעֵת חַיָּה אֲשֶׁר־דִּבֶּר אֵלֶיהָ אֱלִישָֽׁע׃
18 ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
וַיִּגְדַּל הַיָּלֶד וַיְהִי הַיּוֹם וַיֵּצֵא אֶל־אָבִיו אֶל־הַקֹּצְרִֽים׃
19 ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು.
וַיֹּאמֶר אֶל־אָבִיו רֹאשִׁי ׀ רֹאשִׁי וַיֹּאמֶר אֶל־הַנַּעַר שָׂאֵהוּ אֶל־אִמּֽוֹ׃
20 ಸೇವಕನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದವರೆಗೂ ಅವಳ ತೊಡೆಯ ಮೇಲೆ ಇದ್ದು ಅನಂತರ ಮರಣಹೊಂದಿದನು.
וַיִּשָּׂאֵהוּ וַיְבִיאֵהוּ אֶל־אִמּוֹ וַיֵּשֶׁב עַל־בִּרְכֶּיהָ עַד־הַֽצׇּהֳרַיִם וַיָּמֹֽת׃
21 ಆಗ ಅವಳು ಏರಿಹೋಗಿ, ಅವನನ್ನು ದೇವರ ಮನುಷ್ಯನ ಮಂಚದ ಮೇಲೆ ಮಲಗಿಸಿ ಬಾಗಿಲು ಮುಚ್ಚಿದಳು.
וַתַּעַל וַתַּשְׁכִּבֵהוּ עַל־מִטַּת אִישׁ הָאֱלֹהִים וַתִּסְגֹּר בַּעֲדוֹ וַתֵּצֵֽא׃
22 ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.
וַתִּקְרָא אֶל־אִישָׁהּ וַתֹּאמֶר שִׁלְחָה נָא לִי אֶחָד מִן־הַנְּעָרִים וְאַחַת הָאֲתֹנוֹת וְאָרוּצָה עַד־אִישׁ הָאֱלֹהִים וְאָשֽׁוּבָה׃
23 ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.
וַיֹּאמֶר מַדּוּעַ (אתי) [אַתְּ] (הלכתי) [הֹלֶכֶת] אֵלָיו הַיּוֹם לֹא־חֹדֶשׁ וְלֹא שַׁבָּת וַתֹּאמֶר שָׁלֽוֹם׃
24 ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ,
וַֽתַּחֲבֹשׁ הָאָתוֹן וַתֹּאמֶר אֶֽל־נַעֲרָהּ נְהַג וָלֵךְ אַל־תַּעֲצׇר־לִי לִרְכֹּב כִּי אִם־אָמַרְתִּי לָֽךְ׃
25 ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.
וַתֵּלֶךְ וַתָּבֹא אֶל־אִישׁ הָאֱלֹהִים אֶל־הַר הַכַּרְמֶל וַיְהִי כִּרְאוֹת אִישׁ־הָאֱלֹהִים אֹתָהּ מִנֶּגֶד וַיֹּאמֶר אֶל־גֵּיחֲזִי נַעֲרוֹ הִנֵּה הַשּׁוּנַמִּית הַלָּֽז׃
26 ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’” ಎಂದನು. ಅವಳು, “ಕ್ಷೇಮ” ಎಂದಳು.
עַתָּה רֽוּץ־נָא לִקְרָאתָהּ וֶאֱמׇר־לָהּ הֲשָׁלוֹם לָךְ הֲשָׁלוֹם לְאִישֵׁךְ הֲשָׁלוֹם לַיָּלֶד וַתֹּאמֶר שָׁלֽוֹם׃
27 ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.
וַתָּבֹא אֶל־אִישׁ הָאֱלֹהִים אֶל־הָהָר וַֽתַּחֲזֵק בְּרַגְלָיו וַיִּגַּשׁ גֵּיחֲזִי לְהׇדְפָהּ וַיֹּאמֶר אִישׁ הָאֱלֹהִים הַרְפֵּה־לָהּ כִּֽי־נַפְשָׁהּ מָֽרָה־לָהּ וַֽיהֹוָה הֶעְלִים מִמֶּנִּי וְלֹא הִגִּיד לִֽי׃
28 ಆಗ ಅವಳು, “ನಾನು ನನ್ನ ಒಡೆಯನಿಂದ ಪುತ್ರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡವೆಂದು ನಾನು ಹೇಳಲಿಲ್ಲವೋ?” ಎಂದಳು.
וַתֹּאמֶר הֲשָׁאַלְתִּי בֵן מֵאֵת אֲדֹנִי הֲלֹא אָמַרְתִּי לֹא תַשְׁלֶה אֹתִֽי׃
29 ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.
וַיֹּאמֶר לְגֵיחֲזִי חֲגֹר מׇתְנֶיךָ וְקַח מִשְׁעַנְתִּי בְיָדְךָ וָלֵךְ כִּי־תִמְצָא אִישׁ לֹא תְבָרְכֶנּוּ וְכִֽי־יְבָרֶכְךָ אִישׁ לֹא תַעֲנֶנּוּ וְשַׂמְתָּ מִשְׁעַנְתִּי עַל־פְּנֵי הַנָּֽעַר׃
30 ಆದರೆ ಹುಡುಗನ ತಾಯಿಯು, “ಯೆಹೋವ ದೇವರ ಜೀವದಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದಳು. ಆಗ ಅವನೆದ್ದು ಅವಳ ಹಿಂದೆ ಹೋದನು.
וַתֹּאמֶר אֵם הַנַּעַר חַי־יְהֹוָה וְחֵֽי־נַפְשְׁךָ אִם־אֶעֶזְבֶךָּ וַיָּקׇם וַיֵּלֶךְ אַחֲרֶֽיהָ׃
31 ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.
וְגֵחֲזִי עָבַר לִפְנֵיהֶם וַיָּשֶׂם אֶת־הַמִּשְׁעֶנֶת עַל־פְּנֵי הַנַּעַר וְאֵין קוֹל וְאֵין קָשֶׁב וַיָּשׇׁב לִקְרָאתוֹ וַיַּגֶּד־לוֹ לֵאמֹר לֹא הֵקִיץ הַנָּֽעַר׃
32 ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.
וַיָּבֹא אֱלִישָׁע הַבָּיְתָה וְהִנֵּה הַנַּעַר מֵת מֻשְׁכָּב עַל־מִטָּתֽוֹ׃
33 ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.
וַיָּבֹא וַיִּסְגֹּר הַדֶּלֶת בְּעַד שְׁנֵיהֶם וַיִּתְפַּלֵּל אֶל־יְהֹוָֽה׃
34 ಅವನು ಮಗುವಿನ ಮೇಲೆ ಮಲಗಿಕೊಂಡು, ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ, ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ, ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನ ಮೇಲೆ ಬೋರಲು ಬಿದ್ದುದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
וַיַּעַל וַיִּשְׁכַּב עַל־הַיֶּלֶד וַיָּשֶׂם פִּיו עַל־פִּיו וְעֵינָיו עַל־עֵינָיו וְכַפָּיו עַל־כַּפָּו וַיִּגְהַר עָלָיו וַיָּחׇם בְּשַׂר הַיָּֽלֶד׃
35 ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.
וַיָּשׇׁב וַיֵּלֶךְ בַּבַּיִת אַחַת הֵנָּה וְאַחַת הֵנָּה וַיַּעַל וַיִּגְהַר עָלָיו וַיְזוֹרֵר הַנַּעַר עַד־שֶׁבַע פְּעָמִים וַיִּפְקַח הַנַּעַר אֶת־עֵינָֽיו׃
36 ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.
וַיִּקְרָא אֶל־גֵּיחֲזִי וַיֹּאמֶר קְרָא אֶל־הַשֻּׁנַמִּית הַזֹּאת וַיִּקְרָאֶהָ וַתָּבֹא אֵלָיו וַיֹּאמֶר שְׂאִי בְנֵֽךְ׃
37 ಆಗ ಅವಳು ಬಂದು, ಅವನ ಪಾದಗಳ ಮೇಲೆ ಬಿದ್ದು, ನೆಲಕ್ಕೆ ಬಗ್ಗಿ ತನ್ನ ಮಗನನ್ನು ಎತ್ತಿಕೊಂಡು ಹೊರಟು ಹೋದಳು.
וַתָּבֹא וַתִּפֹּל עַל־רַגְלָיו וַתִּשְׁתַּחוּ אָרְצָה וַתִּשָּׂא אֶת־בְּנָהּ וַתֵּצֵֽא׃
38 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.
וֶאֱלִישָׁע שָׁב הַגִּלְגָּלָה וְהָרָעָב בָּאָרֶץ וּבְנֵי הַנְּבִיאִים יֹשְׁבִים לְפָנָיו וַיֹּאמֶר לְנַעֲרוֹ שְׁפֹת הַסִּיר הַגְּדוֹלָה וּבַשֵּׁל נָזִיד לִבְנֵי הַנְּבִיאִֽים׃
39 ಅವರಲ್ಲಿ ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ, ಅಡವಿಯ ಬಳ್ಳಿಯನ್ನು ಕಂಡು, ಅಡವಿಯ ಕಾಯಿಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು, ಅವುಗಳನ್ನು ಕೊಯ್ದು ಗಡಿಗೆಯಲ್ಲಿ ಹಾಕಿದನು. ಅವು ಏನೆಂದು ಯಾರಿಗೂ ತಿಳಿದಿರಲಿಲ್ಲ.
וַיֵּצֵא אֶחָד אֶל־הַשָּׂדֶה לְלַקֵּט אֹרֹת וַיִּמְצָא גֶּפֶן שָׂדֶה וַיְלַקֵּט מִמֶּנּוּ פַּקֻּעֹת שָׂדֶה מְלֹא בִגְדוֹ וַיָּבֹא וַיְפַלַּח אֶל־סִיר הַנָּזִיד כִּי־לֹא יָדָֽעוּ׃
40 ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.
וַיִּֽצְקוּ לַאֲנָשִׁים לֶאֱכוֹל וַיְהִי כְּאׇכְלָם מֵהַנָּזִיד וְהֵמָּה צָעָקוּ וַיֹּֽאמְרוּ מָוֶת בַּסִּיר אִישׁ הָאֱלֹהִים וְלֹא יָכְלוּ לֶֽאֱכֹֽל׃
41 ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು.
וַיֹּאמֶר וּקְחוּ־קֶמַח וַיַּשְׁלֵךְ אֶל־הַסִּיר וַיֹּאמֶר צַק לָעָם וְיֹאכֵלוּ וְלֹא הָיָה דָּבָר רָע בַּסִּֽיר׃
42 ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.
וְאִישׁ בָּא מִבַּעַל שָׁלִשָׁה וַיָּבֵא לְאִישׁ הָאֱלֹהִים לֶחֶם בִּכּוּרִים עֶשְׂרִֽים־לֶחֶם שְׂעֹרִים וְכַרְמֶל בְּצִקְלֹנוֹ וַיֹּאמֶר תֵּן לָעָם וְיֹאכֵֽלוּ׃
43 ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು.
וַיֹּאמֶר מְשָׁרְתוֹ מָה אֶתֵּן זֶה לִפְנֵי מֵאָה אִישׁ וַיֹּאמֶר תֵּן לָעָם וְיֹאכֵלוּ כִּי כֹה אָמַר יְהֹוָה אָכֹל וְהוֹתֵֽר׃
44 ಹಾಗೆಯೇ ಸೇವಕನು ಬಡಿಸಿದನು. ಯೆಹೋವ ದೇವರು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಯಿತು.
וַיִּתֵּן לִפְנֵיהֶם וַיֹּאכְלוּ וַיּוֹתִרוּ כִּדְבַר יְהֹוָֽה׃

< ಅರಸುಗಳು - ದ್ವಿತೀಯ ಭಾಗ 4 >