< ಅರಸುಗಳು - ದ್ವಿತೀಯ ಭಾಗ 8 >
1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.
Y habló Eliseo a aquella mujer, cuyo hijo había hecho vivir, diciendo: Levántate, vete, tú y toda tu casa, a vivir donde pudieres; porque Jehová ha llamado hambre, la cual vendrá también sobre la tierra siete años.
2 ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ, ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.
Entonces la mujer se levantó, e hizo como el varón de Dios la dijo: y partióse ella y su casa, y vivió en tierra de los Filisteos siete años.
3 ಏಳು ವರ್ಷ ಆದ ತರುವಾಯ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರುಗಿಬಂದು ತನ್ನ ಹೊಲಮನೆಗಳಿಗೋಸ್ಕರ ಅರಸನಿಗೆ ಮೊರೆಯಿಟ್ಟಳು.
Y como fueron pasados los siete años, la mujer volvió de la tierra de los Filisteos: y salió para clamar al rey por su casa, y por sus tierras.
4 ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.
Y el rey había hablado con Giezi siervo del varón de Dios, diciéndole: Ruégote que me cuentes todas las maravillas que ha hecho Eliseo.
5 ಗೇಹಜಿಯು ಸತ್ತ ಹುಡುಗನನ್ನು ಹೇಗೆ ಎಲೀಷನು ಬದುಕಿಸಿದನೆಂದು ಅರಸನಿಗೆ ವಿವರವಾಗಿ ಹೇಳುತ್ತಿರುವಾಗಲೇ, ಎಲೀಷನು ಬದುಕಿಸಿದ ಹುಡುಗನ ತಾಯಿಯು ತನ್ನ ಹೊಲಮನೆಗೋಸ್ಕರ, ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಆ ಹುಡುಗನು ಇವನೇ,” ಎಂದನು.
Y contando él al rey, como había hecho vivir un muerto, he aquí la mujer, cuyo hijo había hecho vivir, que clamaba al rey por su casa, y por sus tierras. Entonces dijo Giezi: Rey señor mío, esta es la mujer, y este es su hijo, al cual Eliseo hizo vivir.
6 ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.
Y preguntando el rey a la mujer, ella se lo contó. Y el rey le dio un eunuco, diciéndole: Házle volver todas las cosas que eran suyas, y todos los frutos de las tierras desde el día que dejó las tierras hasta ahora.
7 ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು.
Eliseo se fue a Damasco, y Ben-adad rey de Siria estaba enfermo, al cual dieron aviso, diciendo: El varón de Dios es venido aquí.
8 ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.
Y el rey dijo a Hazael: Toma en tu mano un presente, y vé a recibir al varón de Dios, y consulta por él a Jehová, diciendo: ¿Tengo de sanar de esta enfermedad?
9 ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.
Y Hazael tomó en su mano un presente de todos los bienes de Damasco, cuarenta camellos cargados, y salióle a recibir: y llegó y púsose delante de él, y dijo: Tu hijo Ben-adad rey de Siria me ha enviado a ti, diciendo: ¿Tengo de sanar de esta enfermedad?
10 ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.
Y Eliseo le dijo: Vé, díle: Viviendo vivirás: empero Jehová me ha mostrado que muriendo ha de morir.
11 ದೇವರ ಮನುಷ್ಯನಾದ ಎಲೀಷನು ಹಜಾಯೇಲನು ಮುಜುಗರಕ್ಕೆ ಒಳಗಾಗುವವರೆಗೂ ಅವನನ್ನು ದಿಟ್ಟಿಸಿ ನೋಡುತ್ತಿದ್ದನು. ನಂತರ ದೇವರ ಮನುಷ್ಯನು ಅಳತೊಡಗಿದನು.
Y el varón de Dios le volvió el rostro afirmadamente, y estúvose así una gran pieza, y lloró el varón de Dios.
12 ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.
Entonces díjole Hazael: ¿Por qué llora mi señor? Y él respondió: Porque sé el mal que has de hacer a los hijos de Israel: sus fortalezas encenderás a fuego, y sus mancebos pasarás a cuchillo, y sus niños estrellarás, y sus preñadas abrirás.
13 ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.
Y Hazael dijo: ¿Por qué? ¿Es tu siervo perro, para hacer esta gran cosa? Y respondió Eliseo: Jehová me ha mostrado, que tú has de ser rey de Siria.
14 ಹಜಾಯೇಲನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಆಗ ಅವನು, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದ್ದಕ್ಕೆ ಹಜಾಯೇಲನು, “ನೀನು ನಿಜವಾಗಿ ಬದುಕುವೆ ಎಂದು ನನಗೆ ಹೇಳಿದನು,” ಎಂದನು.
Y él se partió de Eliseo, y vino a su señor: y él le dijo: ¿Qué te dijo Eliseo? Y él respondió: Díjome, que viviendo vivirás.
15 ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.
El día siguiente tomó un paño basto y metióle en agua, y tendióle sobre su rostro: y murió, y reinó Hazael en su lugar.
16 ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಯೆಹೂದದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
En el quinto año de Joram, hijo de Acab, rey de Israel, y de Josafat rey de Judá, comenzó a reinar Joram, hijo de Josafat rey de Judá.
17 ಅವನು ಆಳಲಾರಂಭಿಸಿದಾಗ, ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
De treinta y dos años era, cuando comenzó a reinar, y ocho años reinó en Jerusalem.
18 ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Anduvo en el camino de los reyes de Israel, como hizo la casa de Acab: porque una hija de Acab fue su mujer, e hizo lo malo en ojos de Jehová.
19 ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.
Con todo eso Jehová no quiso cortar a Judá, por amor de David su siervo, como le había prometido de darle lámpara de sus hijos perpetuamente.
20 ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.
En su tiempo se rebeló Edom de debajo de la mano de Judá: y pusieron rey sobre sí.
21 ಆದ್ದರಿಂದ ಯೆಹೋರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಬಲವನ್ನು ತೆಗೆದುಕೊಂಡು ಚಾಯೀರಿಗೆ ಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ ತನ್ನ ರಥಗಳ ಅಧಿಪತಿಗಳನ್ನೂ ಎದೋಮ್ಯರನ್ನು ಸೋಲಿಸಿದನು. ಅವನ ಸೈನಿಕರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
Y Joram pasó en Seir, él y todos sus carros con él: y levantándose de noche hirió a los Idumeos, los cuales le habían encerrado, juntamente con los capitanes de los carros: y el pueblo huyó a sus estancias.
22 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.
Y se rebeló Edom de debajo de la mano de Judá hasta hoy. Entonces se rebeló Lebna en el mismo tiempo.
23 ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
Lo demás de los hechos de Joram, y todas las cosas que hizo, ¿no está escrito en el libro de las crónicas de los reyes de Judá?
24 ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
Y durmió Joram con sus padres, y fue sepultado con sus padres en la ciudad de David: y reinó en su lugar Ocozías su hijo.
25 ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
En el año doce de Joram, hijo de Acab, rey de Israel, comenzó a reinar Ocozías, hijo de Joram rey de Judá.
26 ಇವನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇವನ ತಾಯಿಯ ಹೆಸರು ಅತಲ್ಯಳು, ಅವಳು ಇಸ್ರಾಯೇಲಿನ ಅರಸನಾದ ಒಮ್ರಿಯ ಮೊಮ್ಮಗಳು.
De veinte y dos años era Ocozías cuando comenzó a reinar: y reinó un año en Jerusalem: el nombre de su madre fue Atalía, hija de Amrí, rey de Israel.
27 ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು.
Anduvo en el camino de la casa de Acab, e hizo lo malo en ojos de Jehová, como la casa de Acab; porque era yerno de la casa de Acab.
28 ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.
Y fue a la guerra con Joram, hijo de Acab, a Ramot de Galaad contra Hazael rey de Siria: y los Siros hirieron a Joram.
29 ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.
Y el rey Joram se volvió a Jezrael para curarse de las heridas que los Siros le dieron delante de Ramot, cuando peleó contra Hazael rey de Siria: y descendió Ocozías, hijo de Joram, rey de Judá, a visitar a Joram, hijo de Acab, en Jezrael, porque estaba enfermo.