< ಪೇತ್ರನು ಬರೆದ ಎರಡನೆಯ ಪತ್ರಿಕೆ 3 >

1 ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.
Carísimos, he aquí que os escribo esta segunda carta, y en ambas despierto la rectitud de vuestro espíritu con lo que os recuerdo,
2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.
para que tengáis presentes las palabras predichas por los santos profetas y el mandato que el Señor y Salvador ha transmitido por vuestros apóstoles;
3 ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು,
sabiendo ante todo que en los últimos días vendrán impostores burlones que, mientras viven según sus propias concupiscencias,
4 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.
dirán: “¿Dónde está la promesa de su Parusía? Pues desde que los padres se durmieron todo permanece lo mismo que desde el principio de la creación”.
5 ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.
Se les escapa, porque así lo quieren, que hubo cielos desde antiguo y tierra sacada del agua y afirmada sobre el agua por la palabra de Dios;
6 ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.
y que por esto, el mundo de entonces pereció anegado en el agua;
7 ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.
pero que los cielos de hoy y la tierra están, por esa misma palabra, reservados para el fuego, guardados para el día del juicio y del exterminio de los hombres impíos.
8 ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
A vosotros, empero, carísimos, no se os escape una cosa, a saber, que para el Señor un día es como mil años y mil años son como un día.
9 ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
No es moroso el Señor en la promesa, antes bien —lo que algunos pretenden ser tardanza— tiene Él paciencia con vosotros, no queriendo que algunos perezcan, sino que todos lleguen al arrepentimiento.
10 ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
Pero el día del Señor vendrá como ladrón, y entonces pasarán los cielos con gran estruendo, y los elementos se disolverán para ser quemados, y la tierra y las obras que hay en ella no serán más halladas.
11 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
Si, pues, todo ha de disolverse así ¿cuál no debe ser la santidad de vuestra conducta y piedad
12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
para esperar y apresurar la Parusía del día de Dios, por el cual los cielos encendidos se disolverán y los elementos se fundirán para ser quemados?
13 ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
Pues esperamos también conforme a su promesa cielos nuevos y tierra nueva en los cuales habite la justicia.
14 ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.
Por lo cual, carísimos, ya que esperáis estas cosas, procurad estar sin mancha y sin reproche para que Él os encuentre en paz.
15 ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
Y creed que la longanimidad de nuestro Señor es para salvación, según os lo escribió igualmente nuestro amado hermano Pablo, conforme a la sabiduría que le ha sido concedida;
16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.
como que él habla de esto mismo en todas sus epístolas, en las cuales hay algunos pasajes difíciles de entender, que los ignorantes y superficiales deforman, como lo hacen, por lo demás, con las otras Escrituras, para su propia ruina.
17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.
Vosotros, pues, carísimos, que lo sabéis de antemano, estad en guardia, no sea que aquellos impíos os arrastren consigo por sus errores y caigáis del sólido fundamento en que estáis.
18 ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್. (aiōn g165)
Antes bien, creced en la gracia y en el conocimiento de nuestro Señor y Salvador Jesucristo. A Él sea la gloria ahora y para el día de la eternidad. Amén. (aiōn g165)

< ಪೇತ್ರನು ಬರೆದ ಎರಡನೆಯ ಪತ್ರಿಕೆ 3 >

The Great Flood
The Great Flood