< ಸಮುವೇಲನು - ದ್ವಿತೀಯ ಭಾಗ 10 >
1 ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.
此後アンモンの子孫の王死て其子ハヌン之に代りて位に即く
2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.
ダビデ我ナハシの子ハヌンにその父の我に恩惠を示せしごとく恩惠を示さんといひてダビデかれを其父の故によりて慰めんとて其僕を遣せりダビデの僕アンモンの子孫の地にいたるに
3 ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.
アンモンの子孫の諸伯其主ハヌンにいひけるはダビデ慰者を汝に遣はしたるによりて彼汝の父を崇むと汝の目に見ゆるやダビデ此城邑を窺ひこれを探りて陷いれんために其僕を汝に遣はせるにあらずや
4 ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
是においてハヌン、ダビデの僕を執へ其鬚の半を剃り落し其衣服を中より斷て股までにしてこれを歸せり
5 ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.
人々これをダビデに告たればダビデ人を遣はしてかれらを迎へしむ其人々大に恥たればなり即ち王いふ汝ら鬚の長るまでヱリコに止まりて然るのち歸るべしと
6 ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
アンモンの子孫自己のダビデに惡まるるを見しかばアンモンの子孫人を遣はしてベテレホブのスリア人とゾバのスリア人の歩兵二萬人およびマアカの王より一千人トブの人より一萬二千人を雇いれたり
7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
ダビデ聞てヨアブと勇士の惣軍を遣はせり
8 ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
アンモンの子孫出て門の入口に軍の陣列をなしたりゾバとレホブのスリア人およびトブの人とマアカの人は別に野に居り
9 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
ヨアブ戰の前後より己に向ふを見てイスラエルの選抜の兵の中を選みてこれをスリア人に對ひて備へしめ
10 ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
其餘の民をば其兄弟アビシヤイの手に交してアンモンの子孫に向て備へしめて
11 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
いひけるは若スリア人我に手強からば汝我を助けよ若アンモンの子孫汝に手剛からば我ゆきて汝をたすけん
12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
汝勇ましくなれよ我ら民のためとわれらの神の諸邑のために勇しく爲んねがはくはヱホバ其目によしと見ゆるところをなしたまへ
13 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
ヨアブ己と共に在る民と共にスリア人にむかひて戰んとて近づきければスリア人彼のまへより逃たり
14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.
アンモンの子孫スリア人の逃たるを見て亦自己等もアビシヤイのまへより逃て城邑にいりぬヨアブすなはちアンモンの子孫の所より還りてエルサレムにいたる
15 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.
スリア人其イスラエルのまへに敗れたるを見て倶にあつまれり
16 ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
ハダデゼル人をやりて河の前岸にをるスリア人を將ゐ出して皆ヘラムにきたらしむハダデゼルの軍の長シヨバクかれらを率ゐたり
17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.
其事ダビデに聞えければ彼イスラエルを悉く集めてヨルダンを渉りてヘラムに來れりスリア人ダビデに向ひて備へ之と戰ふ
18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.
スリア人イスラエルのまへより逃ければダビデ、スリアの兵車の人七百騎兵四萬を殺し又其軍の長シヨバクを撃てこれを其所に死しめたり
19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.
ハダデゼルの臣なる王等其イスラエルのまへに壞れたるを見てイスラエルと平和をなして之に事へたり斯スリア人は恐れて再びアンモンの子孫を助くることをせざりき