< ಸಮುವೇಲನು - ದ್ವಿತೀಯ ಭಾಗ 11 >
1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
१फिर जिस समय राजा लोग युद्ध करने को निकला करते हैं, उस समय, अर्थात् वर्ष के आरम्भ में दाऊद ने योआब को, और उसके संग अपने सेवकों और समस्त इस्राएलियों को भेजा; और उन्होंने अम्मोनियों का नाश किया, और रब्बाह नगर को घेर लिया। परन्तु दाऊद यरूशलेम में रह गया।
2 ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.
२साँझ के समय दाऊद पलंग पर से उठकर राजभवन की छत पर टहल रहा था, और छत पर से उसको एक स्त्री, जो अति सुन्दर थी, नहाती हुई देख पड़ी।
3 ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.
३जब दाऊद ने भेजकर उस स्त्री को पुछवाया, तब किसी ने कहा, “क्या यह एलीआम की बेटी, और हित्ती ऊरिय्याह की पत्नी बतशेबा नहीं है?”
4 ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.
४तब दाऊद ने दूत भेजकर उसे बुलवा लिया; और वह दाऊद के पास आई, और वह उसके साथ सोया। (वह तो ऋतु से शुद्ध हो गई थी) तब वह अपने घर लौट गई।
5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.
५और वह स्त्री गर्भवती हुई, तब दाऊद के पास कहला भेजा, कि मुझे गर्भ है।
6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
६तब दाऊद ने योआब के पास कहला भेजा, “हित्ती ऊरिय्याह को मेरे पास भेज।” तब योआब ने ऊरिय्याह को दाऊद के पास भेज दिया।
7 ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.
७जब ऊरिय्याह उसके पास आया, तब दाऊद ने उससे योआब और सेना का कुशल क्षेम और युद्ध का हाल पूछा।
8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.
८तब दाऊद ने ऊरिय्याह से कहा, “अपने घर जाकर अपने पाँव धो।” और ऊरिय्याह राजभवन से निकला, और उसके पीछे राजा के पास से कुछ इनाम भेजा गया।
9 ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.
९परन्तु ऊरिय्याह अपने स्वामी के सब सेवकों के संग राजभवन के द्वार में लेट गया, और अपने घर न गया।
10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.
१०जब दाऊद को यह समाचार मिला, “ऊरिय्याह अपने घर नहीं गया,” तब दाऊद ने ऊरिय्याह से कहा, “क्या तू यात्रा करके नहीं आया? तो अपने घर क्यों नहीं गया?”
11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.
११ऊरिय्याह ने दाऊद से कहा, “जब सन्दूक और इस्राएल और यहूदा झोपड़ियों में रहते हैं, और मेरा स्वामी योआब और मेरे स्वामी के सेवक खुले मैदान पर डेरे डाले हुए हैं, तो क्या मैं घर जाकर खाऊँ, पीऊँ, और अपनी पत्नी के साथ सोऊँ? तेरे जीवन की शपथ, और तेरे प्राण की शपथ, कि मैं ऐसा काम नहीं करने का।”
12 ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.
१२दाऊद ने ऊरिय्याह से कहा, “आज यहीं रह, और कल मैं तुझे विदा करूँगा।” इसलिए ऊरिय्याह उस दिन और दूसरे दिन भी यरूशलेम में रहा।
13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.
१३तब दाऊद ने उसे नेवता दिया, और उसने उसके सामने खाया पिया, और उसी ने उसे मतवाला किया; और साँझ को वह अपने स्वामी के सेवकों के संग अपनी चारपाई पर सोने को निकला, परन्तु अपने घर न गया।
14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.
१४सवेरे दाऊद ने योआब के नाम पर एक चिट्ठी लिखकर ऊरिय्याह के हाथ से भेज दी।
15 ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.
१५उस चिट्ठी में यह लिखा था, “सबसे घोर युद्ध के सामने ऊरिय्याह को रखना, तब उसे छोड़कर लौट आओ, कि वह घायल होकर मर जाए।”
16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.
१६अतः योआब ने नगर को अच्छी रीति से देख-भाल कर जिस स्थान में वह जानता था कि वीर हैं, उसी में ऊरिय्याह को ठहरा दिया।
17 ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.
१७तब नगर के पुरुषों ने निकलकर योआब से युद्ध किया, और लोगों में से, अर्थात् दाऊद के सेवकों में से कितने मारे गए; और उनमें हित्ती ऊरिय्याह भी मर गया।
18 ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:
१८तब योआब ने दूत को भेजकर दाऊद को युद्ध का पूरा हाल बताया;
19 “ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,
१९और दूत को आज्ञा दी, “जब तू युद्ध का पूरा हाल राजा को बता दे,
20 ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?
२०तब यदि राजा क्रोध में कहने लगे, ‘तुम लोग लड़ने को नगर के ऐसे निकट क्यों गए? क्या तुम न जानते थे कि वे शहरपनाह पर से तीर छोड़ेंगे?
21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.
२१यरूब्बेशेत के पुत्र अबीमेलेक को किसने मार डाला? क्या एक स्त्री ने शहरपनाह पर से चक्की का उपरला पाट उस पर ऐसा न डाला कि वह तेबेस में मर गया? फिर तुम शहरपनाह के ऐसे निकट क्यों गए?’ तो तू यह कहना, ‘तेरा दास ऊरिय्याह हित्ती भी मर गया।’”
22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.
२२तब दूत चल दिया, और जाकर दाऊद से योआब की सब बातों का वर्णन किया।
23 ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.
२३दूत ने दाऊद से कहा, “वे लोग हम पर प्रबल होकर मैदान में हमारे पास निकल आए, फिर हमने उन्हें फाटक तक खदेड़ा।
24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.
२४तब धनुर्धारियों ने शहरपनाह पर से तेरे जनों पर तीर छोड़े; और राजा के कितने जन मर गए, और तेरा दास ऊरिय्याह हित्ती भी मर गया।”
25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.
२५दाऊद ने दूत से कहा, “योआब से यह कहना, ‘इस बात के कारण उदास न हो, क्योंकि तलवार जैसे इसको वैसे उसको नष्ट करती है; तू नगर के विरुद्ध अधिक दृढ़ता से लड़कर उसे उलट दे।’ और तू उसे हियाव बंधा।”
26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.
२६जब ऊरिय्याह की स्त्री ने सुना कि मेरा पति मर गया, तब वह अपने पति के लिये रोने पीटने लगी।
27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.
२७और जब उसके विलाप के दिन बीत चुके, तब दाऊद ने उसे बुलवाकर अपने घर में रख लिया, और वह उसकी पत्नी हो गई, और उसके पुत्र उत्पन्न हुआ। परन्तु उस काम से जो दाऊद ने किया था यहोवा क्रोधित हुआ।