< ಸಮುವೇಲನು - ದ್ವಿತೀಯ ಭಾಗ 22 >

1 ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.
וַיְדַבֵּר דָּוִד לַֽיהוָה אֶת־דִּבְרֵי הַשִּׁירָה הַזֹּאת בְּיוֹם הִצִּיל יְהוָה אֹתוֹ מִכַּף כָּל־אֹיְבָיו וּמִכַּף שָׁאֽוּל׃
2 ಅವನು ಹೇಳಿದನು: “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ,
וַיֹּאמַר יְהוָה סַֽלְעִי וּמְצֻדָתִי וּמְפַלְטִי־לִֽי׃
3 ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.
אֱלֹהֵי צוּרִי אֶחֱסֶה־בּוֹ מָגִנִּי וְקֶרֶן יִשְׁעִי מִשְׂגַּבִּי וּמְנוּסִי מֹשִׁעִי מֵחָמָס תֹּשִׁעֵֽנִי׃
4 “ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.
מְהֻלָּל אֶקְרָא יְהוָה וּמֵאֹיְבַי אִוָּשֵֽׁעַ׃
5 ಮರಣದಲೆಗಳು ನನ್ನನ್ನು ಆವರಿಸಿಕೊಂಡವು. ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು;
כִּי אֲפָפֻנִי מִשְׁבְּרֵי־מָוֶת נַחֲלֵי בְלִיַּעַל יְבַעֲתֻֽנִי׃
6 ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು. (Sheol h7585)
חֶבְלֵי שְׁאוֹל סַבֻּנִי קִדְּמֻנִי מֹֽקְשֵׁי־מָֽוֶת׃ (Sheol h7585)
7 “ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.
בַּצַּר־לִי אֶקְרָא יְהוָה וְאֶל־אֱלֹהַי אֶקְרָא וַיִּשְׁמַע מֵהֵֽיכָלוֹ קוֹלִי וְשַׁוְעָתִי בְּאָזְנָֽיו׃
8 ಆಗ ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು, ಆಕಾಶಗಳ ಅಸ್ತಿವಾರಗಳು ಸಹ ಕದಲಿದವು.
ותגעש וַיִּתְגָּעַשׁ וַתִּרְעַשׁ הָאָרֶץ מוֹסְדוֹת הַשָּׁמַיִם יִרְגָּזוּ וַיִּֽתְגָּעֲשׁוּ כִּֽי־חָרָה לֽוֹ׃
9 ಮೂಗಿನಿಂದ ಹೊಗೆ ಬಂದಂತೆಯೂ, ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇತ್ತು.
עָלָה עָשָׁן בְּאַפּוֹ וְאֵשׁ מִפִּיו תֹּאכֵל גֶּחָלִים בָּעֲרוּ מִמֶּֽנּוּ׃
10 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;
וַיֵּט שָׁמַיִם וַיֵּרַד וַעֲרָפֶל תַּחַת רַגְלָֽיו׃
11 ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.
וַיִּרְכַּב עַל־כְּרוּב וַיָּעֹף וַיֵּרָא עַל־כַּנְפֵי־רֽוּחַ׃
12 ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು.
וַיָּשֶׁת חֹשֶׁךְ סְבִיבֹתָיו סֻכּוֹת חַֽשְׁרַת־מַיִם עָבֵי שְׁחָקִֽים׃
13 ಅವರ ಸನ್ನಿಧಿಯ ಪ್ರಕಾಶದಿಂದ ಮಿಂಚಿನ ಜ್ವಾಲೆಗಳು ಹೊರಹೊಮ್ಮಿದವು.
מִנֹּגַהּ נֶגְדּוֹ בָּעֲרוּ גַּחֲלֵי־אֵֽשׁ׃
14 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು. ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.
יַרְעֵם מִן־שָׁמַיִם יְהוָה וְעֶלְיוֹן יִתֵּן קוֹלֽוֹ׃
15 ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.
וַיִּשְׁלַח חִצִּים וַיְפִיצֵם בָּרָק ויהמם וַיָּהֹֽם׃
16 ಆಗ ಯೆಹೋವ ದೇವರ ಗದರಿಕೆಯಿಂದಲೂ, ಅವರ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿತು. ಭೂಲೋಕದ ಅಸ್ತಿವಾರಗಳು ಬಯಲಾದವು.
וַיֵּֽרָאוּ אֲפִקֵי יָם יִגָּלוּ מֹסְדוֹת תֵּבֵל בְּגַעֲרַת יְהוָה מִנִּשְׁמַת רוּחַ אַפּֽוֹ׃
17 “ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.
יִשְׁלַח מִמָּרוֹם יִקָּחֵנִי יַֽמְשֵׁנִי מִמַּיִם רַבִּֽים׃
18 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.
יַצִּילֵנִי מֵאֹיְבִי עָז מִשֹּׂנְאַי כִּי אָמְצוּ מִמֶּֽנִּי׃
19 ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.
יְקַדְּמֻנִי בְּיוֹם אֵידִי וַיְהִי יְהוָה מִשְׁעָן לִֽי׃
20 ಅವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.
וַיֹּצֵא לַמֶּרְחָב אֹתִי יְחַלְּצֵנִי כִּי־חָפֵֽץ בִּֽי׃
21 “ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.
יִגְמְלֵנִי יְהוָה כְּצִדְקָתִי כְּבֹר יָדַי יָשִׁיב לִֽי׃
22 ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
כִּי שָׁמַרְתִּי דַּרְכֵי יְהוָה וְלֹא רָשַׁעְתִּי מֵאֱלֹהָֽי׃
23 ಅವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ದೇವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.
כִּי כָל־משפטו מִשְׁפָּטָיו לְנֶגְדִּי וְחֻקֹּתָיו לֹא־אָסוּר מִמֶּֽנָּה׃
24 ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.
וָאֶהְיֶה תָמִים לוֹ וָאֶשְׁתַּמְּרָה מֵעֲוֺנִֽי׃
25 ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.
וַיָּשֶׁב יְהוָה לִי כְּצִדְקָתִי כְּבֹרִי לְנֶגֶד עֵינָֽיו׃
26 “ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ; ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.
עִם־חָסִיד תִּתְחַסָּד עִם־גִּבּוֹר תָּמִים תִּתַּמָּֽם׃
27 ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.
עִם־נָבָר תִּתָּבָר וְעִם־עִקֵּשׁ תִּתַּפָּֽל׃
28 ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.
וְאֶת־עַם עָנִי תּוֹשִׁיעַ וְעֵינֶיךָ עַל־רָמִים תַּשְׁפִּֽיל׃
29 ಯೆಹೋವ ದೇವರೇ, ನನ್ನ ದೀಪವು ನೀವೇ; ಯೆಹೋವ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.
כִּֽי־אַתָּה נֵירִי יְהוָה וַיהוָה יַגִּיהַּ חָשְׁכִּֽי׃
30 ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು. ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.
כִּי בְכָה אָרוּץ גְּדוּד בֵּאלֹהַי אֲדַלֶּג־שֽׁוּר׃
31 “ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
הָאֵל תָּמִים דַּרְכּוֹ אִמְרַת יְהוָה צְרוּפָה מָגֵן הוּא לְכֹל הַחֹסִים בּֽוֹ׃
32 ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು?
כִּי מִי־אֵל מִבַּלְעֲדֵי יְהוָה וּמִי צוּר מִֽבַּלְעֲדֵי אֱלֹהֵֽינוּ׃
33 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.
הָאֵל מָעוּזִּי חָיִל וַיַּתֵּר תָּמִים דרכו דַּרְכִּֽי׃
34 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.
מְשַׁוֶּה רגליו רַגְלַי כָּאַיָּלוֹת וְעַל בָּמוֹתַי יַעֲמִדֵֽנִי׃
35 ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.
מְלַמֵּד יָדַי לַמִּלְחָמָה וְנִחַת קֶֽשֶׁת־נְחוּשָׁה זְרֹעֹתָֽי׃
36 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
וַתִּתֶּן־לִי מָגֵן יִשְׁעֶךָ וַעֲנֹתְךָ תַּרְבֵּֽנִי׃
37 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
תַּרְחִיב צַעֲדִי תַּחְתֵּנִי וְלֹא מָעֲדוּ קַרְסֻלָּֽי׃
38 “ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.
אֶרְדְּפָה אֹיְבַי וָאַשְׁמִידֵם וְלֹא אָשׁוּב עַד־כַּלּוֹתָֽם׃
39 ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.
וָאֲכַלֵּם וָאֶמְחָצֵם וְלֹא יְקוּמוּן וַֽיִּפְּלוּ תַּחַת רַגְלָֽי׃
40 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.
וַתַּזְרֵנִי חַיִל לַמִּלְחָמָה תַּכְרִיעַ קָמַי תַּחְתֵּֽנִי׃
41 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.
וְאֹיְבַי תַּתָּה לִּי עֹרֶף מְשַׂנְאַי וָאַצְמִיתֵֽם׃
42 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.
יִשְׁעוּ וְאֵין מֹשִׁיעַ אֶל־יְהוָה וְלֹא עָנָֽם׃
43 ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.
וְאֶשְׁחָקֵם כַּעֲפַר־אָרֶץ כְּטִיט־חוּצוֹת אֲדִקֵּם אֶרְקָעֵֽם׃
44 “ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; ನಾನು ಅರಿಯದ ಜನರು ನನಗೆ ವಿಧೇಯರಾಗುವರು.
וַֽתְּפַלְּטֵנִי מֵרִיבֵי עַמִּי תִּשְׁמְרֵנִי לְרֹאשׁ גּוֹיִם עַם לֹא־יָדַעְתִּי יַעַבְדֻֽנִי׃
45 ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.
בְּנֵי נֵכָר יִתְכַּֽחֲשׁוּ־לִי לִשְׁמוֹעַ אֹזֶן יִשָּׁמְעוּ לִֽי׃
46 ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.
בְּנֵי נֵכָר יִבֹּלוּ וְיַחְגְּרוּ מִמִּסְגְּרוֹתָֽם׃
47 “ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.
חַי־יְהוָה וּבָרוּךְ צוּרִי וְיָרֻם אֱלֹהֵי צוּר יִשְׁעִֽי׃
48 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.
הָאֵל הַנֹּתֵן נְקָמֹת לִי וּמוֹרִיד עַמִּים תַּחְתֵּֽנִי׃
49 ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.
וּמוֹצִיאִי מֵאֹֽיְבָי וּמִקָּמַי תְּרוֹמְמֵנִי מֵאִישׁ חֲמָסִים תַּצִּילֵֽנִי׃
50 ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು. ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.
עַל־כֵּן אוֹדְךָ יְהוָה בַּגּוֹיִם וּלְשִׁמְךָ אֲזַמֵּֽר׃
51 “ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”
מגדיל מִגְדּוֹל יְשׁוּעוֹת מַלְכּוֹ וְעֹֽשֶׂה־חֶסֶד לִמְשִׁיחוֹ לְדָוִד וּלְזַרְעוֹ עַד־עוֹלָֽם׃

< ಸಮುವೇಲನು - ದ್ವಿತೀಯ ಭಾಗ 22 >