< ಸಮುವೇಲನು - ದ್ವಿತೀಯ ಭಾಗ 23 >
1 ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:
Haya ni maneno ya mwisho ya Daudi: “Neno la Daudi mwana wa Yese, neno la mtu aliyeinuliwa na Aliye Juu Sana, mtu aliyepakwa mafuta na Mungu wa Yakobo, mwimbaji wa nyimbo wa Israeli:
2 “ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.
“Roho wa Bwana alinena kupitia kwangu, neno lake lilikuwa ulimini mwangu.
3 ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.
Mungu wa Israeli alinena, mwamba wa Israeli akaniambia: ‘Mtu anatawala watu kwa haki, wakati anapotawala akiwa na hofu ya Mungu,
4 ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’
yeye ni kama mwanga wa asubuhi jua lichomozapo asubuhi isiyo na mawingu, kama mwanga baada ya mvua uchipuzao majani kutoka ardhini.’
5 “ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.
“Je, si hivyo ilivyo nyumba yangu mbele za Mungu? Je, hajafanya Agano la milele nami, lililopangwa na kuimarishwa kila sehemu? Je, hatanifanya niufurahie wokovu wangu na kunijalia matakwa yangu yote?
6 ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.
Lakini watu waovu wote watatupwa kando kama miiba, ambayo haikusanywi kwa mkono.
7 ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”
Yeyote agusaye miiba hutumia chombo cha chuma au mpini wa mkuki, nayo huchomwa pale ilipo.”
8 ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.
Haya ndiyo majina ya mashujaa wa Daudi: Yosheb-Bashebethi, Mtahkemoni, alikuwa kiongozi wa wale Watatu; yeye aliinua mkuki wake dhidi ya watu 800, ambao aliwaua katika pambano moja.
9 ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
Wa pili wake alikuwa Eleazari mwana wa Dodai, Mwahohi. Akiwa mmojawapo wa wale mashujaa watatu, alikuwa pamoja na Daudi wakati waliwadhihaki Wafilisti waliokuwa wamekusanyika huko Pas-Damimu kwa ajili ya vita. Kisha watu wa Israeli wakarudi nyuma,
10 ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.
lakini yeye alisimama imara akawaua Wafilisti hadi mkono wake ukachoka na ukagandamana na upanga. Bwana akawapa ushindi mkubwa siku ile. Vikosi vikarudi kwa Eleazari, kuteka tu nyara za waliokufa.
11 ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.
Aliyefuata alikuwa Shama mwana wa Agee, Mharari. Wafilisti walipokusanyika pamoja mahali palipokuwa shamba lililojaa dengu, vikosi vya Israeli viliwakimbia.
12 ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.
Lakini Shama akasimama imara katikati ya lile shamba. Akalitetea na kuwaua Wafilisti, naye Bwana akawapa ushindi mkubwa.
13 ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.
Wakati wa mavuno, viongozi watatu kati ya viongozi thelathini walishuka, wakamwendea Daudi katika pango la Adulamu, wakati kikundi cha Wafilisti kilikuwa kimepiga kambi katika Bonde la Warefai.
14 ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Wakati huo Daudi alikuwa katika ngome, na kambi ya Wafilisti ilikuwa huko Bethlehemu.
15 ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.
Daudi akatamani maji, akasema, “Laiti mtu angenipatia maji ya kunywa kutoka kisima kilicho karibu na lango la Bethlehemu!”
16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.
Basi mashujaa hao watatu wakapenya katikati ya Wafilisti, wakaenda kuchota maji kutoka kwa kisima kilicho karibu na lango la Bethlehemu, wakamletea Daudi. Lakini Daudi akakataa kuyanywa. Badala yake, aliyamimina mbele za Bwana.
17 ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Akasema, “Iwe mbali nami, Ee Bwana, kufanya kitu hiki. Je, hii si damu ya watu ambao walikwenda kwa kuhatarisha maisha yao?” Naye Daudi hakuyanywa. Haya yalifanywa na hao mashujaa watatu.
18 ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.
Abishai ndugu yake Yoabu mwana wa Seruya ndiye alikuwa kiongozi wa hao Watatu. Aliinua mkuki wake dhidi ya watu 300 ambao aliwaua, kwa hiyo naye akawa na sifa kama hao Watatu.
19 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.
Je, hakupata heshima kubwa zaidi kuliko hao Watatu? Alikuwa jemadari wao, ingawa hakuhesabiwa miongoni mwao.
20 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
Benaya mwana wa Yehoyada alikuwa mpiganaji hodari kutoka Kabseeli ambaye alifanya mambo makubwa ya ujasiri. Aliwaua mashujaa wawili waliokuwa hodari kuliko wote wa Moabu. Pia alishuka shimoni kulipokuwa na theluji na kumuua simba.
21 ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.
Pia alimuua Mmisri mrefu mkubwa. Ingawa Mmisri alikuwa na mkuki mkononi mwake, Benaya alimwendea akiwa na rungu. Alipokonya mkuki kutoka mkononi mwa Mmisri na kumuua kwa mkuki wake mwenyewe.
22 ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.
Haya yalikuwa mambo ya ushujaa ya Benaya mwana wa Yehoyada; naye pia alikuwa maarufu kama wale mashujaa watatu.
23 ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.
Yeye aliheshimiwa zaidi ya wale Thelathini, lakini hakujumuishwa miongoni mwa wale Watatu. Daudi akamweka kuwa kiongozi wa walinzi wake.
24 ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;
Miongoni mwa wale Thelathini walikuwepo: Asaheli ndugu wa Yoabu; Elhanani mwana wa Dodo kutoka Bethlehemu;
25 ಹರೋದಿನವನಾದ ಶಮ್ಮನು; ಹರೋದಿನವನಾದ ಎಲೀಕನು;
Shama, Mharodi; Elika, Mharodi;
26 ಪೆಲೆಟಿನವನಾದ ಹೆಲೆಚನು; ತೆಕೋವದ ಇಕ್ಕೇಷನ ಮಗನಾದ ಈರನು;
Helesi, Mpalti; Ira mwana wa Ikeshi kutoka Tekoa;
27 ಅನಾತೋತಿನವನಾದ ಅಬೀಯೆಜೆರನು; ಹುಷಾ ಊರಿನವನಾದ ಮೆಬುನೈ,
Abiezeri kutoka Anathothi; Mebunai, Mhushathi;
28 ಅಹೋಹ್ಯನಾದ ಚಲ್ಮೋನನು; ನೆಟೋಫದವನಾದ ಮಹರೈ;
Salmoni, Mwahohi; Maharai, Mnetofathi;
29 ನೆಟೋಫದವನಾದ ಬಾಣನ ಮಗ ಹೆಲೇಬ್, ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ;
Heledi mwana wa Baana, Mnetofathi; Itai mwana wa Ribai kutoka Gibea ya Benyamini;
30 ಪಿರಾತೋನ್ಯನಾದ ಬೆನಾಯನು; ಹೊಳೆಗಳುಳ್ಳ ಗಾಷ್ ಊರಿನವನಾದ ಹಿದ್ದೈ;
Benaya Mpirathoni; Hidai kutoka mabonde ya Gaashi;
31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; ಬಹರೂಮ್ಯನಾದ ಅಜ್ಮಾವೆತನು;
Abi-Alboni, Mwaribathi; Azmawethi, Mbarhumi;
32 ಶಾಲ್ಬೋನ್ಯನಾದ ಎಲೆಯಖ್ಬಾನು; ಯಾಷೇನನ ಪುತ್ರರಲ್ಲಿ ಒಬ್ಬನು ಯೋನಾತಾನನು;
Eliaba, Mshaalboni; wana wa Yasheni; Yonathani
33 ಹರಾರ್ಯನಾದ ಶಮ್ಮನು; ಹರಾರ್ಯನಾದ ಶಾರಾರನ ಮಗ ಅಹೀಯಾಮ್;
mwana wa Shama, Mharari; Ahiamu mwana wa Sharari, Mharari;
34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;
Elifeleti mwana wa Ahasbai, Mmaakathi; Eliamu mwana wa Ahithofeli, Mgiloni;
35 ಕರ್ಮೇಲ್ಯನಾದ ಹೆಚ್ರೋ; ಅರ್ಬಿಯನಾದ ಪಾರೈ;
Hezro, Mkarmeli; Paarai, Mwarbi;
36 ಹಗ್ರೀಯನ ಮಗನಾದ ಚೋಬ ಊರಿನವನಾದ ನಾತಾನನ ಮಗ ಇಗಾಲನು, ಗಾದ್ಯನಾದ ಬಾನೀ.
Igali mwana wa Nathani kutoka Soba; Bani, Mgadi;
37 ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;
Seleki, Mwamoni; Naharai, Mbeerothi, aliyekuwa mbeba silaha za Yoabu mwana wa Seruya;
38 ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;
Ira, Mwithiri; Garebu, Mwithiri;
39 ಹಿತ್ತಿಯನಾದ ಊರೀಯನು. ಹೀಗೆ ಇವರು ಸೇರಿ ಒಟ್ಟು ಮೂವತ್ತೇಳು ಮಂದಿ ರಣಧೀರರಿದ್ದರು.
na Uria, Mhiti. Jumla yao wote walikuwa watu thelathini na saba.