< ಸಮುವೇಲನು - ದ್ವಿತೀಯ ಭಾಗ 24 >

1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.
וַיֹּסֶף אַף־יְהוָה לַחֲרוֹת בְּיִשְׂרָאֵל וַיָּסֶת אֶת־דָּוִד בָּהֶם לֵאמֹר לֵךְ מְנֵה אֶת־יִשְׂרָאֵל וְאֶת־יְהוּדָֽה׃
2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.
וַיֹּאמֶר הַמֶּלֶךְ אֶל־יוֹאָב ׀ שַׂר־הַחַיִל אֲשֶׁר־אִתּוֹ שֽׁוּט־נָא בְּכָל־שִׁבְטֵי יִשְׂרָאֵל מִדָּן וְעַד־בְּאֵר שֶׁבַע וּפִקְדוּ אֶת־הָעָם וְיָדַעְתִּי אֵת מִסְפַּר הָעָֽם׃
3 ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.
וַיֹּאמֶר יוֹאָב אֶל־הַמֶּלֶךְ וְיוֹסֵף יְהוָה אֱלֹהֶיךָ אֶל־הָעָם כָּהֵם ׀ וְכָהֵם מֵאָה פְעָמִים וְעֵינֵי אֲדֹנִֽי־הַמֶּלֶךְ רֹאוֹת וַאדֹנִי הַמֶּלֶךְ לָמָּה חָפֵץ בַּדָּבָר הַזֶּֽה׃
4 ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
וַיֶּחֱזַק דְּבַר־הַמֶּלֶךְ אֶל־יוֹאָב וְעַל שָׂרֵי הֶחָיִל וַיֵּצֵא יוֹאָב וְשָׂרֵי הַחַיִל לִפְנֵי הַמֶּלֶךְ לִפְקֹד אֶת־הָעָם אֶת־יִשְׂרָאֵֽל׃
5 ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.
וַיַּעַבְרוּ אֶת־הַיַּרְדֵּן וַיַּחֲנוּ בַעֲרוֹעֵר יְמִין הָעִיר אֲשֶׁר בְּתוֹךְ־הַנַּחַל הַגָּד וְאֶל־יַעְזֵֽר׃
6 ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.
וַיָּבֹאוּ הַגִּלְעָדָה וְאֶל־אֶרֶץ תַּחְתִּים חָדְשִׁי וַיָּבֹאוּ דָּנָה יַּעַן וְסָבִיב אֶל־צִידֽוֹן׃
7 ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.
וַיָּבֹאוּ מִבְצַר־צֹר וְכָל־עָרֵי הַחִוִּי וְהַֽכְּנַעֲנִי וַיֵּֽצְאוּ אֶל־נֶגֶב יְהוּדָה בְּאֵר שָֽׁבַע׃
8 ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
וַיָּשֻׁטוּ בְּכָל־הָאָרֶץ וַיָּבֹאוּ מִקְצֵה תִשְׁעָה חֳדָשִׁים וְעֶשְׂרִים יוֹם יְרוּשָׁלָֽ͏ִם׃
9 ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.
וַיִּתֵּן יוֹאָב אֶת־מִסְפַּר מִפְקַד־הָעָם אֶל־הַמֶּלֶךְ וַתְּהִי יִשְׂרָאֵל שְׁמֹנֶה מֵאוֹת אֶלֶף אִֽישׁ־חַיִל שֹׁלֵֽף חֶרֶב וְאִישׁ יְהוּדָה חֲמֵשׁ־מֵאוֹת אֶלֶף אִֽישׁ׃
10 ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
וַיַּךְ לֵב־דָּוִד אֹתוֹ אַחֲרֵי־כֵן סָפַר אֶת־הָעָם וַיֹּאמֶר דָּוִד אֶל־יְהוָה חָטָאתִי מְאֹד אֲשֶׁר עָשִׂיתִי וְעַתָּה יְהוָה הַֽעֲבֶר־נָא אֶת־עֲוֺן עַבְדְּךָ כִּי נִסְכַּלְתִּי מְאֹֽד׃
11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,
וַיָּקָם דָּוִד בַּבֹּקֶר וּדְבַר־יְהוָה הָיָה אֶל־גָּד הַנָּבִיא חֹזֵה דָוִד לֵאמֹֽר׃
12 “ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.
הָלוֹךְ וְדִבַּרְתָּ אֶל־דָּוִד כֹּה אָמַר יְהוָה שָׁלֹשׁ אָנֹכִי נוֹטֵל עָלֶיךָ בְּחַר־לְךָ אַֽחַת־מֵהֶם וְאֶֽעֱשֶׂה־לָּֽךְ׃
13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
וַיָּבֹא־גָד אֶל־דָּוִד וַיַּגֶּד־לוֹ וַיֹּאמֶר לוֹ הֲתָבוֹא לְךָ שֶֽׁבַע שָׁנִים ׀ רָעָב ׀ בְּאַרְצֶךָ אִם־שְׁלֹשָׁה חֳדָשִׁים נֻסְךָ לִפְנֵֽי־צָרֶיךָ וְהוּא רֹדְפֶךָ וְאִם־הֱיוֹת שְׁלֹשֶׁת יָמִים דֶּבֶר בְּאַרְצֶךָ עַתָּה דַּע וּרְאֵה מָה־אָשִׁיב שֹׁלְחִי דָּבָֽר׃
14 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
וַיֹּאמֶר דָּוִד אֶל־גָּד צַר־לִי מְאֹד נִפְּלָה־נָּא בְיַד־יְהוָה כִּֽי־רַבִּים רחמו רַֽחֲמָיו וּבְיַד־אָדָם אַל־אֶפֹּֽלָה׃
15 ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
וַיִּתֵּן יְהוָה דֶּבֶר בְּיִשְׂרָאֵל מֵהַבֹּקֶר וְעַד־עֵת מוֹעֵד וַיָּמָת מִן־הָעָם מִדָּן וְעַד־בְּאֵר שֶׁבַע שִׁבְעִים אֶלֶף אִֽישׁ׃
16 ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.
וַיִּשְׁלַח יָדוֹ הַמַּלְאָךְ ׀ יְרֽוּשָׁלִַם לְשַׁחֲתָהּ וַיִּנָּחֶם יְהוָה אֶל־הָרָעָה וַיֹּאמֶר לַמַּלְאָךְ הַמַּשְׁחִית בָּעָם רַב עַתָּה הֶרֶף יָדֶךָ וּמַלְאַךְ יְהוָה הָיָה עִם־גֹּרֶן האורנה הָאֲרַוְנָה הַיְבֻסִֽי׃
17 ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
וַיֹּאמֶר דָּוִד אֶל־יְהוָה בִּרְאֹתוֹ ׀ אֶֽת־הַמַּלְאָךְ ׀ הַמַּכֶּה בָעָם וַיֹּאמֶר הִנֵּה אָנֹכִי חָטָאתִי וְאָנֹכִי הֶעֱוֵיתִי וְאֵלֶּה הַצֹּאן מֶה עָשׂוּ תְּהִי נָא יָדְךָ בִּי וּבְבֵית אָבִֽי׃
18 ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.
וַיָּבֹא־גָד אֶל־דָּוִד בַּיּוֹם הַהוּא וַיֹּאמֶר לוֹ עֲלֵה הָקֵם לַֽיהוָה מִזְבֵּחַ בְּגֹרֶן ארניה אֲרַוְנָה הַיְבֻסִֽי׃
19 ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.
וַיַּעַל דָּוִד כִּדְבַר־גָּד כַּאֲשֶׁר צִוָּה יְהוָֽה׃
20 ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
וַיַּשְׁקֵף אֲרַוְנָה וַיַּרְא אֶת־הַמֶּלֶךְ וְאֶת־עֲבָדָיו עֹבְרִים עָלָיו וַיֵּצֵא אֲרַוְנָה וַיִּשְׁתַּחוּ לַמֶּלֶךְ אַפָּיו אָֽרְצָה׃
21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.
וַיֹּאמֶר אֲרַוְנָה מַדּוּעַ בָּא אֲדֹנִֽי־הַמֶּלֶךְ אֶל־עַבְדּוֹ וַיֹּאמֶר דָּוִד לִקְנוֹת מֵעִמְּךָ אֶת־הַגֹּרֶן לִבְנוֹת מִזְבֵּחַ לַֽיהוָה וְתֵעָצַר הַמַּגֵּפָה מֵעַל הָעָֽם׃
22 ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.
וַיֹּאמֶר אֲרַוְנָה אֶל־דָּוִד יִקַּח וְיַעַל אֲדֹנִי הַמֶּלֶךְ הַטּוֹב בעינו בְּעֵינָיו רְאֵה הַבָּקָר לָעֹלָה וְהַמֹּרִגִּים וּכְלֵי הַבָּקָר לָעֵצִֽים׃
23 ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.
הַכֹּל נָתַן אֲרַוְנָה הַמֶּלֶךְ לַמֶּלֶךְ וַיֹּאמֶר אֲרַוְנָה אֶל־הַמֶּלֶךְ יְהוָה אֱלֹהֶיךָ יִרְצֶֽךָ׃
24 ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.
וַיֹּאמֶר הַמֶּלֶךְ אֶל־אֲרַוְנָה לֹא כִּֽי־קָנוֹ אֶקְנֶה מֵאֽוֹתְךָ בִּמְחִיר וְלֹא אַעֲלֶה לַיהוָה אֱלֹהַי עֹלוֹת חִנָּם וַיִּקֶן דָּוִד אֶת־הַגֹּרֶן וְאֶת־הַבָּקָר בְּכֶסֶף שְׁקָלִים חֲמִשִּֽׁים׃
25 ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.
וַיִּבֶן שָׁם דָּוִד מִזְבֵּחַ לַֽיהוָה וַיַּעַל עֹלוֹת וּשְׁלָמִים וַיֵּעָתֵר יְהוָה לָאָרֶץ וַתֵּעָצַר הַמַּגֵּפָה מֵעַל יִשְׂרָאֵֽל׃ 695 24 4 4

< ಸಮುವೇಲನು - ದ್ವಿತೀಯ ಭಾಗ 24 >