< ಸಮುವೇಲನು - ದ್ವಿತೀಯ ಭಾಗ 5 >

1 ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.
Then all the tribes of Israel came to David in Hebron, saying: Behold we are thy bone and thy flesh.
2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’” ಎಂದರು.
Moreover yesterday also and the day before, when Saul was king over us, thou wast he that did lead out and bring in Israel: and the Lord said to thee: Thou shalt feed my people Israel, and thou shalt be prince over Israel.
3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
The ancients also of Israel came to the king to Hebron, and king David made a league with them in Hebron before the Lord: and they anointed David to be king over Israel.
4 ದಾವೀದನು ಆಳಲು ಪ್ರಾರಂಭಿಸಿದಾಗ, ಮೂವತ್ತು ವರ್ಷದವನಾಗಿದ್ದನು. ಅವನು ನಲವತ್ತು ವರ್ಷ ಆಳಿದನು.
David was thirty years old when he began to reign, and he reigned forty years.
5 ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು.
In Hebron he reigned over Juda seven years and six months: and in Jerusalem he reigned three and thirty years over all Israel and Juda.
6 ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.
And the king and all the men that were with him went to Jerusalem to the Jebusites the inhabitants of the land: and they said to David: Thou shalt not come in hither unless thou take away the blind and the lame that say: David shall not come in hither.
7 ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.
But David took the castle of Sion, the same is the city of David.
8 ಆ ದಿವಸದಲ್ಲಿ ದಾವೀದನು, “ಜಲದ್ವಾರವನ್ನು ದಾಟಿ, ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ನಾಶಮಾಡಲಿ,” ಎಂದು ಹೇಳಿದ್ದನು. ಆದುದರಿಂದಲೇ, “ಕುರುಡರೂ ಕುಂಟರೂ ಅರಮನೆಯೊಳಗೆ ಪ್ರವೇಶಿಸಲಾರರು,” ಎಂಬ ಗಾದೆಯಾಯಿತು.
For David had offered that day a reward to whosoever should strike the Jebusites and get up to the gutters of the tops of the houses, and take away the blind and the lame that hated the soul of David: therefore it is said in the proverb: The blind and the lame shall not come into the temple.
9 ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.
And David dwelt in the castle, and called it, The city of David: and built round about from Mello and inwards.
10 ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.
And he went on prospering and growing up, and the Lord God of hosts was with him.
11 ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.
And Hiram the king of Tyre sent messengers to David, and cedar trees, and carpenters, and masons for walls: and they built a house for David.
12 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.
And David knew that the Lord bad confirmed him king over Israel, and that he had exalted his kingdom over his people Israel.
13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು.
And David took more concubines and wives of Jerusalem, after he was come from Hebron: and there were born to David other sons also and daughters:
14 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್,
And these are the names of them, that were born to him in Jerusalem, Samua, and Sobab, and Nathan, and Solomon,
15 ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
And Jebahar, and Elisua, and Nepheg,
16 ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಇವರೇ.
And Japhia, and Elisama, and Elioda, and Eliphaleth.
17 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.
And the Philistines heard that they had anointed David to be king over Israel: and they all came to seek David: and when David heard of it, he went down to a strong hold.
18 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.
And the Philistines coming spread themselves in the valley of Raphaim.
19 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.
And David consulted the Lord, saying: Shall I go up to the Philistines? and wilt thou deliver them into my hand? And the Lord said to David: Go up, for I will surely deliver the Philistines into thy hand.
20 ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.
And David came to Baal Pharisim: and defeated them there, and he said: The Lord hath divided my enemies before me, as waters are divided. Therefore the name of the place was called Baal Pharisim.
21 ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟು ಹೋದುದರಿಂದ ದಾವೀದನೂ, ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
And they left there their idols: which David and his men took away.
22 ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
And the Philistines came up again and spread themselves in the valley of Raphaim.
23 ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.
And David consulted the Lord: Shall I go up against the Philistines, and wilt thou deliver them into my hands? He answered: Go not up against them, but fetch a compass behind them, and thou shalt come upon them over against the pear trees.
24 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.
And when thou shalt hear the sound of one going in the tops of the pear trees, then shalt thou join battle: for then will the Lord go out before thy face to strike the army of the Philistines.
25 ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು.
And David did as the Lord had commanded him, and he smote the Philistines from Gabaa until thou come to Gezer.

< ಸಮುವೇಲನು - ದ್ವಿತೀಯ ಭಾಗ 5 >