< ಸಮುವೇಲನು - ದ್ವಿತೀಯ ಭಾಗ 9 >

1 ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.
וַיֹּ֣אמֶר דָּוִ֔ד הֲכִ֣י יֶשׁ־עֹ֔וד אֲשֶׁ֥ר נֹותַ֖ר לְבֵ֣ית שָׁא֑וּל וְאֶעֱשֶׂ֤ה עִמֹּו֙ חֶ֔סֶד בַּעֲב֖וּר יְהֹונָתָֽן׃
2 ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು. ಅದಕ್ಕವನು, “ನಿನ್ನ ದಾಸನು ನಾನೇ,” ಎಂದನು.
וּלְבֵ֨ית שָׁא֥וּל עֶ֙בֶד֙ וּשְׁמֹ֣ו צִיבָ֔א וַיִּקְרְאוּ־לֹ֖ו אֶל־דָּוִ֑ד וַיֹּ֨אמֶר הַמֶּ֧לֶךְ אֵלָ֛יו הַאַתָּ֥ה צִיבָ֖א וַיֹּ֥אמֶר עַבְדֶּֽךָ׃
3 ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.
וַיֹּ֣אמֶר הַמֶּ֗לֶךְ הַאֶ֨פֶס עֹ֥וד אִישׁ֙ לְבֵ֣ית שָׁא֔וּל וְאֶעֱשֶׂ֥ה עִמֹּ֖ו חֶ֣סֶד אֱלֹהִ֑ים וַיֹּ֤אמֶר צִיבָא֙ אֶל־הַמֶּ֔לֶךְ עֹ֛וד בֵּ֥ן לִיהֹונָתָ֖ן נְכֵ֥ה רַגְלָֽיִם׃
4 “ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ, “ಅವನು ಲೋದೆಬಾರಲ್ಲಿ ಅಮ್ಮಿಯೇಲನ ಮಗ ಮಾಕೀರನ ಮನೆಯಲ್ಲಿ ಇದ್ದಾನೆ,” ಎಂದನು.
וַיֹּֽאמֶר־לֹ֥ו הַמֶּ֖לֶךְ אֵיפֹ֣ה ה֑וּא וַיֹּ֤אמֶר צִיבָא֙ אֶל־הַמֶּ֔לֶךְ הִנֵּה־ה֗וּא בֵּ֛ית מָכִ֥יר בֶּן־עַמִּיאֵ֖ל בְּלֹ֥ו דְבָֽר׃
5 ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು.
וַיִּשְׁלַ֖ח הַמֶּ֣לֶךְ דָּוִ֑ד וַיִּקָּחֵ֗הוּ מִבֵּ֛ית מָכִ֥יר בֶּן־עַמִּיאֵ֖ל מִלֹּ֥ו דְבָֽר׃
6 ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.
וַ֠יָּבֹא מְפִיבֹ֨שֶׁת בֶּן־יְהֹונָתָ֤ן בֶּן־שָׁאוּל֙ אֶל־דָּוִ֔ד וַיִּפֹּ֥ל עַל־פָּנָ֖יו וַיִּשְׁתָּ֑חוּ וַיֹּ֤אמֶר דָּוִד֙ מְפִיבֹ֔שֶׁת וַיֹּ֖אמֶר הִנֵּ֥ה עַבְדֶּֽךָ׃
7 ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.
וַיֹּאמֶר֩ לֹ֨ו דָוִ֜ד אַל־תִּירָ֗א כִּ֣י עָשֹׂה֩ אֶעֱשֶׂ֨ה עִמְּךָ֥ חֶ֙סֶד֙ בַּֽעֲבוּר֙ יְהֹונָתָ֣ן אָבִ֔יךָ וַהֲשִׁבֹתִ֣י לְךָ֔ אֶֽת־כָּל־שְׂדֵ֖ה שָׁא֣וּל אָבִ֑יךָ וְאַתָּ֗ה תֹּ֥אכַל לֶ֛חֶם עַל־שֻׁלְחָנִ֖י תָּמִֽיד׃
8 ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.
וַיִּשְׁתַּ֕חוּ וַיֹּ֖אמֶר מֶ֣ה עַבְדֶּ֑ךָ כִּ֣י פָנִ֔יתָ אֶל־הַכֶּ֥לֶב הַמֵּ֖ת אֲשֶׁ֥ר כָּמֹֽונִי׃
9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.
וַיִּקְרָ֣א הַמֶּ֗לֶךְ אֶל־צִיבָ֛א נַ֥עַר שָׁא֖וּל וַיֹּ֣אמֶר אֵלָ֑יו כֹּל֩ אֲשֶׁ֨ר הָיָ֤ה לְשָׁאוּל֙ וּלְכָל־בֵּיתֹ֔ו נָתַ֖תִּי לְבֶן־אֲדֹנֶֽיךָ׃
10 ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
וְעָבַ֣דְתָּ לֹּ֣ו אֶֽת־הָאֲדָמָ֡ה אַתָּה֩ וּבָנֶ֨יךָ וַעֲבָדֶ֜יךָ וְהֵבֵ֗אתָ וְהָיָ֨ה לְבֶן־אֲדֹנֶ֤יךָ לֶּ֙חֶם֙ וַאֲכָלֹ֔ו וּמְפִיבֹ֙שֶׁת֙ בֶּן־אֲדֹנֶ֔יךָ יֹאכַ֥ל תָּמִ֛יד לֶ֖חֶם עַל־שֻׁלְחָנִ֑י וּלְצִיבָ֗א חֲמִשָּׁ֥ה עָשָׂ֛ר בָּנִ֖ים וְעֶשְׂרִ֥ים עֲבָדִֽים׃
11 ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
וַיֹּ֤אמֶר צִיבָא֙ אֶל־הַמֶּ֔לֶךְ כְּכֹל֩ אֲשֶׁ֨ר יְצַוֶּ֜ה אֲדֹנִ֤י הַמֶּ֙לֶךְ֙ אֶת־עַבְדֹּ֔ו כֵּ֖ן יַעֲשֶׂ֣ה עַבְדֶּ֑ךָ וּמְפִיבֹ֗שֶׁת אֹכֵל֙ עַל־שֻׁלְחָנִ֔י כְּאַחַ֖ד מִבְּנֵ֥י הַמֶּֽלֶךְ׃
12 ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು.
וְלִמְפִיבֹ֥שֶׁת בֵּן־קָטָ֖ן וּשְׁמֹ֣ו מִיכָ֑א וְכֹל֙ מֹושַׁ֣ב בֵּית־צִיבָ֔א עֲבָדִ֖ים לִמְפִיבֹֽשֶׁת׃
13 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು.
וּמְפִיבֹ֗שֶׁת יֹשֵׁב֙ בִּיר֣וּשָׁלַ֔͏ִם כִּ֣י עַל־שֻׁלְחַ֥ן הַמֶּ֛לֶךְ תָּמִ֖יד ה֣וּא אֹכֵ֑ל וְה֥וּא פִּסֵּ֖חַ שְׁתֵּ֥י רַגְלָֽיו׃ פ

< ಸಮುವೇಲನು - ದ್ವಿತೀಯ ಭಾಗ 9 >