< ಅಪೊಸ್ತಲರ ಕೃತ್ಯಗಳ 25 >

1 ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
Фест, прибыв в область, через три дня отправился из Кесарии в Иерусалим.
2 ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು.
Тогда первосвященник и знатнейшие из Иудеев явились к нему с жалобою на Павла и убеждали его,
3 ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.
прося, чтобы он сделал милость, вызвал его в Иерусалим; и злоумышляли убить его на дороге.
4 ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ.
Но Фест отвечал, что Павел содержится в Кесарии под стражею и что он сам скоро отправится туда.
5 ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು.
Итак, сказал он, которые из вас могут, пусть пойдут со мною, и если есть что-нибудь за этим человеком, пусть обвиняют его.
6 ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು.
Пробыв же у них не больше восьми или десяти дней, возвратился в Кесарию и на другой день, сев на судейское место, повелел привести Павла.
7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.
Когда он явился, стали кругом пришедшие из Иерусалима Иудеи, принося на Павла многие и тяжкие обвинения, которых не могли доказать.
8 ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.
Он же в оправдание свое сказал: я не сделал никакого преступления ни против закона Иудейского, ни против храма, ни против кесаря.
9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.
Фест, желая сделать угождение Иудеям, сказал в ответ Павлу: хочешь ли идти в Иерусалим, чтобы я там судил тебя в этом?
10 ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.
Павел сказал: я стою перед судом кесаревым, где мне и следует быть судиму. Иудеев я ничем не обидел, как и ты хорошо знаешь.
11 ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.
Ибо, если я неправ и сделал что-нибудь, достойное смерти, то не отрекаюсь умереть; а если ничего того нет, в чем сии обвиняют меня, то никто не может выдать меня им. Требую суда кесарева.
12 ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು.
Тогда Фест, поговорив с советом, отвечал: ты потребовал суда кесарева, к кесарю и отправишься.
13 ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.
Через несколько дней царь Агриппа и Вереника прибыли в Кесарию поздравить Феста.
14 ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.
И как они провели там много дней, то Фест предложил царю дело Павлово, говоря: здесь есть человек, оставленный Феликсом в узах,
15 ನಾನು ಯೆರೂಸಲೇಮಿಗೆ ಹೋದಾಗ ಮುಖ್ಯಯಾಜಕರೂ ಹಾಗೂ ಯೆಹೂದ್ಯರ ಹಿರಿಯರೂ ಅವನ ಮೇಲೆ ಆಪಾದನೆಗಳನ್ನು ತಂದು ಅವನಿಗೆ ವಿರೋಧವಾಗಿ ದಂಡನೆ ವಿಧಿಸಬೇಕೆಂದು ಕೇಳಿಕೊಂಡರು.
на которого, в бытность мою в Иерусалиме, с жалобою явились первосвященники и старейшины Иудейские, требуя осуждения его.
16 “ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.
Я отвечал им, что у Римлян нет обыкновения выдавать какого-нибудь человека на смерть, прежде нежели обвиняемый будет иметь обвинителей налицо и получит свободу защищаться против обвинения.
17 ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ.
Когда же они пришли сюда, то, без всякого отлагательства, на другой же день сел я на судейское место и повелел привести того человека.
18 ಅವನ ಮೇಲೆ ಆಪಾದನೆ ಹೊರಿಸುವವರು ಮಾತನಾಡಲು ಎದ್ದು ನಿಂತಾಗ, ನಾನು ಭಾವಿಸಿದ ಯಾವುದೇ ಅಪರಾಧವನ್ನು ಅವರು ಅವನ ಮೇಲೆ ಹೊರಿಸಲಿಲ್ಲ.
Обступив его, обвинители не представили ни одного из обвинений, какие я предполагал;
19 ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.
но они имели некоторые споры с ним об их Богопочитании и о каком-то Иисусе умершем, о Котором Павел утверждал, что Он жив.
20 ನಾನು ಅಂಥಾ ವಿಚಾರಗಳ ಬಗ್ಗೆ ಅವನು ಯೆರೂಸಲೇಮಿಗೆ ಹೋಗಿ ಈ ಆಪಾದನೆಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಮನಸ್ಸಿದೆಯೋ ಎಂದು ಅವನನ್ನು ಕೇಳಿದೆನು.
Затрудняясь в решении этого вопроса, я сказал: хочет ли он идти в Иерусалим и там быть судимым в этом?
21 ಆದರೆ ಪೌಲನು ತನ್ನ ಬೇಡಿಕೆಯನ್ನು ನೇರವಾಗಿ ಕೈಸರನ ಬಳಿಗೆ ಕಳುಹಿಸುವವರೆಗೆ ಅವನನ್ನು ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದ್ದೇನೆ,” ಎಂದು ಫೆಸ್ತನು ಹೇಳಿದನು.
Но как Павел потребовал, чтобы он оставлен был на рассмотрение Августово, то я велел содержать его под стражею до тех пор, как пошлю его к кесарю.
22 ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು.
Агриппа же сказал Фесту: хотел бы и я послушать этого человека. Завтра же, отвечал тот, услышишь его.
23 ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.
На другой день, когда Агриппа и Вереника пришли с великою пышностью и вошли в судебную палату с тысяченачальниками и знатнейшими гражданами, по приказанию Феста приведен был Павел.
24 ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ.
И сказал Фест: царь Агриппа и все присутствующие с нами мужи! вы видите того, против которого все множество Иудеев приступали ко мне в Иерусалиме и здесь и кричали, что ему не должно более жить.
25 ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.
Но я нашел, что он не сделал ничего, достойного смерти; и как он сам потребовал суда у Августа, то я решился послать его к нему.
26 ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.
Я не имею ничего верного написать о нем государю; посему привел его пред вас, и особенно пред тебя, царь Агриппа, дабы, по рассмотрении, было мне что написать.
27 ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.
Ибо, мне кажется, нерассудительно послать узника и не показать обвинений на него.

< ಅಪೊಸ್ತಲರ ಕೃತ್ಯಗಳ 25 >