< ಅಪೊಸ್ತಲರ ಕೃತ್ಯಗಳ 26 >
1 ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:
Агриппа сказал Павлу: позволяется тебе говорить за себя. Тогда Павел, простерши руку, стал говорить в свою защиту:
2 “ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.
царь Агриппа! почитаю себя счастливым, что сегодня могу защищаться перед тобою во всем, в чем обвиняют меня Иудеи,
3 ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.
тем более, что ты знаешь все обычаи и спорные мнения Иудеев. Посему прошу тебя выслушать меня великодушно.
4 “ನಾನು ಬಾಲಕನಾಗಿದ್ದಾಗಿನಿಂದ, ನನ್ನ ಪಟ್ಟಣದಲ್ಲಿಯೂ ಅನಂತರ ಯೆರೂಸಲೇಮಿನಲ್ಲಿಯೂ ನಾನು ಜೀವನ ಮಾಡಿದ ರೀತಿಯನ್ನು ಯೆಹೂದ್ಯರೆಲ್ಲರೂ ಬಲ್ಲವರಾಗಿದ್ದಾರೆ.
Жизнь мою от юности моей, которую сначала проводил я среди народа моего в Иерусалиме, знают все Иудеи;
5 ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.
они издавна знают обо мне, если захотят свидетельствовать, что я жил фарисеем по строжайшему в нашем вероисповедании учению.
6 ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.
И ныне я стою перед судом за надежду на обетование, данное от Бога нашим отцам,
7 ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.
которого исполнение надеются увидеть наши двенадцать колен, усердно служа Богу день и ночь. За сию-то надежду, царь Агриппа, обвиняют меня Иудеи.
8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?
Что же? Неужели вы невероятным почитаете, что Бог воскрешает мертвых?
9 “ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.
Правда, и я думал, что мне должно много действовать против имени Иисуса Назорея.
10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.
Это я и делал в Иерусалиме: получив власть от первосвященников, я многих святых заключал в темницы, и, когда убивали их, я подавал на то голос;
11 ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.
и по всем синагогам я многократно мучил их, и принуждал хулить Иисуса, и, в чрезмерной против них ярости, преследовал даже и в чужих городах.
12 “ಹೀಗೆ ನಾನು ಮುಖ್ಯಯಾಜಕರ ಅಧಿಕಾರ, ಅಪ್ಪಣೆಗಳೊಂದಿಗೆ ದಮಸ್ಕಕ್ಕೆ ಪ್ರಯಾಣ ಹೋಗುತ್ತಿದ್ದೆನು.
Для сего, идя в Дамаск со властью и поручением от первосвященников,
13 ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.
среди дня на дороге я увидел, государь, с неба свет, превосходящий солнечное сияние, осиявший меня и шедших со мною.
14 ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.
Все мы упали на землю, и я услышал голос, говоривший мне на еврейском языке: Савл, Савл! что ты гонишь Меня? Трудно тебе идти против рожна.
15 “ಆಗ ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ಕರ್ತದೇವರು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.
Я сказал: кто Ты, Господи? Он сказал: “Я Иисус, Которого ты гонишь.
16 ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.
Но встань и стань на ноги твои; ибо Я для того и явился тебе, чтобы поставить тебя служителем и свидетелем того, что ты видел и что Я открою тебе,
17 ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು.
избавляя тебя от народа Иудейского и от язычников, к которым Я теперь посылаю тебя
18 ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.
открыть глаза им, чтобы они обратились от тьмы к свету и от власти сатаны к Богу и верою в Меня получили прощение грехов и жребий с освященными”.
19 “ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
Поэтому, царь Агриппа, я не воспротивился небесному видению,
20 ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.
но сперва жителям Дамаска и Иерусалима, потом всей земле Иудейской и язычникам проповедывал, чтобы они покаялись и обратились к Богу, делая дела, достойные покаяния.
21 ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.
За это схватили меня Иудеи в храме и покушались растерзать.
22 ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.
Но, получив помощь от Бога, я до сего дня стою, свидетельствуя малому и великому, ничего не говоря, кроме того, о чем пророки и Моисей говорили, что это будет,
23 ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.
то есть что Христос имел пострадать и, восстав первый из мертвых, возвестить свет народу Иудейскому и язычникам.
24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.
Когда он так защищался, Фест громким голосом сказал: безумствуешь ты, Павел! большая ученость доводит тебя до сумасшествия.
25 ಆದರೆ ಪೌಲನು, “ಬಹು ಗೌರವವುಳ್ಳ ಫೆಸ್ತರೇ, ನಾನು ಹುಚ್ಚನಲ್ಲ, ಆದರೆ ನಾನು ಸತ್ಯವನ್ನೇ ಸ್ವಸ್ಥಬುದ್ಧಿಯಿಂದ ಮಾತನಾಡುತ್ತಿರುವೆನು.
Нет, достопочтенный Фест, сказал он, я не безумствую, но говорю слова истины и здравого смысла.
26 ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.
Ибо знает об этом царь, перед которым и говорю смело. Я отнюдь не верю, чтобы от него было что-нибудь из сего скрыто; ибо это не в углу происходило.
27 ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು.
Веришь ли, царь Агриппа, пророкам? Знаю, что веришь.
28 ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.
Агриппа сказал Павлу: ты немного не убеждаешь меня сделаться Христианином.
29 ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.
Павел сказал: молил бы я Бога, чтобы, мало ли, много ли, не только ты, но и все, слушающие меня сегодня, сделались такими, как я, кроме этих уз.
30 ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು.
Когда он сказал это, царь и правитель, Вереника и сидевшие с ними встали;
31 ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.
и, отойдя в сторону, говорили между собою, что этот человек ничего, достойного смерти или уз, не делает.
32 ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.
И сказал Агриппа Фесту: можно было бы освободить этого человека, если бы он не потребовал суда у кесаря. Посему и решился правитель послать его к кесарю.