< ಅಪೊಸ್ತಲರ ಕೃತ್ಯಗಳ 28 >
1 ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.
Спасшись же, бывшие с Павлом узнали, что остров называется Мелит.
2 ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.
Иноплеменники оказали нам немалое человеколюбие, ибо они, по причине бывшего дождя и холода, разложили огонь и приняли всех нас.
3 ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.
Когда же Павел набрал множество хвороста и клал на огонь, тогда ехидна, выйдя от жара, повисла на руке его.
4 ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Иноплеменники, когда увидели висящую на руке его змею, говорили друг другу: верно этот человек - убийца, когда его, спасшегося от моря, суд Божий не оставляет жить.
5 ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.
Но он, стряхнув змею в огонь, не потерпел никакого вреда.
6 ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.
Они ожидали было, что у него будет воспаление или он внезапно упадет мертвым; но, ожидая долго и видя, что не случилось с ним никакой беды, переменили мысли и говорили, что он Бог.
7 ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.
Около того места были поместья начальника острова, именем Публия; он принял нас и три дня дружелюбно угощал.
8 ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.
Отец Публия лежал, страдая горячкою и болью в животе; Павел вошел к нему, помолился и, возложив на него руки свои, исцелил его.
9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.
После сего события и прочие на острове, имевшие болезни, приходили, и были исцеляемы,
10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.
и оказывали нам много почести, и при отъезде снабдили нужным.
11 ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು.
Через три месяца мы отплыли на Александрийском корабле, называемом Диоскуры, зимовавшем на том острове,
12 ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.
и, приплыв в Сиракузы, пробыли там три дня.
13 ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.
Оттуда отплыв, прибыли в Ригию; и как через день подул южный ветер, прибыли на второй день в Путеол,
14 ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.
где нашли братьев, и были упрошены пробыть у них семь дней, а потом пошли в Рим.
15 ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.
Тамошние братья, услышав о нас, вышли нам навстречу до Аппиевой площади и трех гостиниц. Увидев их, Павел возблагодарил Бога и ободрился.
16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.
Когда же пришли мы в Рим, то сотник передал узников военачальнику, а Павлу позволено жить особо с воином, стерегущим его.
17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.
Через три дня Павел созвал знатнейших из Иудеев и, когда они сошлись, говорил им: мужи братия! не сделав ничего против народа или отеческих обычаев, я в узах из Иерусалима предан в руки Римлян.
18 ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.
Они, судив меня, хотели освободить, потому что нет во мне никакой вины, достойной смерти;
19 ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.
но так как Иудеи противоречили, то я принужден был потребовать суда у кесаря, впрочем, не с тем, чтобы обвинить в чем-либо мой народ.
20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.
По этой причине я и призвал вас, чтобы увидеться и поговорить с вами, ибо за надежду Израилеву обложен я этими узами.
21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.
Они же сказали ему: мы ни писем не получали о тебе из Иудеи, ни из приходящих братьев никто не известил о тебе и не сказал чего-либо худого.
22 ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.
Впрочем, желательно нам слышать от тебя, как ты мыслишь; ибо известно нам, что об этом учении везде спорят.
23 ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.
И, назначив ему день, очень многие пришли к нему в гостиницу; и он от утра до вечера излагал им учение о Царствии Божием, приводя свидетельства и удостоверяя их о Иисусе из закона Моисеева и пророков.
24 ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.
Одни убеждались словами его, а другие не верили.
25 ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:
Будучи же не согласны между собою, они уходили, когда Павел сказал следующие слова: хорошо Дух Святый сказал отцам нашим через пророка Исаию:
26 “‘ಈ ಜನರ ಬಳಿಗೆ ಹೋಗಿ ಹೇಳು, “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”
“пойди к народу сему и скажи: слухом услышите, и не уразумеете, и очами смотреть будете, и не увидите.
27 ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, ಕಿವಿಗಳಿಂದ ಕೇಳಿಸಿಕೊಂಡು, ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.
Ибо огрубело сердце людей сих, и ушами с трудом слышат, и очи свои сомкнули, да не узрят очами, и не услышат ушами, и не уразумеют сердцем, и не обратятся, чтобы Я исцелил их”.
28 “ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.
Итак да будет вам известно, что спасение Божие послано язычникам: они и услышат.
29 ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.
Когда он сказал это, Иудеи ушли, много споря между собою.
30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.
И жил Павел целых два года на своем иждивении и принимал всех приходивших к нему,
31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.
проповедуя Царствие Божие и уча о Господе Иисусе Христе со всяким дерзновением невозбранно.