< ಅಪೊಸ್ತಲರ ಕೃತ್ಯಗಳ 4 >

1 ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.
जब पतरस और यूहन्ना लोगों से यह कह रहे थे, तो याजक और मन्दिर के सरदार और सदूकी उन पर चढ़ आए।
2 ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.
वे बहुत क्रोधित हुए कि पतरस और यूहन्ना यीशु के विषय में सिखाते थे और उसके मरे हुओं में से जी उठने का प्रचार करते थे।
3 ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.
और उन्होंने उन्हें पकड़कर दूसरे दिन तक हवालात में रखा क्योंकि संध्या हो गई थी।
4 ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.
परन्तु वचन के सुननेवालों में से बहुतों ने विश्वास किया, और उनकी गिनती पाँच हजार पुरुषों के लगभग हो गई।
5 ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.
दूसरे दिन ऐसा हुआ कि उनके सरदार और पुरनिए और शास्त्री।
6 ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು.
और महायाजक हन्ना और कैफा और यूहन्ना और सिकन्दर और जितने महायाजक के घराने के थे, सब यरूशलेम में इकट्ठे हुए।
7 ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.
और पतरस और यूहन्ना को बीच में खड़ा करके पूछने लगे, “तुम ने यह काम किस सामर्थ्य से और किस नाम से किया है?”
8 ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ!
तब पतरस ने पवित्र आत्मा से परिपूर्ण होकर उनसे कहा,
9 ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.
“हे लोगों के सरदारों और प्राचीनों, इस दुर्बल मनुष्य के साथ जो भलाई की गई है, यदि आज हम से उसके विषय में पूछताछ की जाती है, कि वह कैसे अच्छा हुआ।
10 ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.
१०तो तुम सब और सारे इस्राएली लोग जान लें कि यीशु मसीह नासरी के नाम से जिसे तुम ने क्रूस पर चढ़ाया, और परमेश्वर ने मरे हुओं में से जिलाया, यह मनुष्य तुम्हारे सामने भला चंगा खड़ा है।
11 ಪವಿತ್ರ ವೇದದಲ್ಲಿ, “‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.
११यह वही पत्थर है जिसे तुम राजमिस्त्रियों ने तुच्छ जाना और वह कोने के सिरे का पत्थर हो गया।
12 ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.
१२और किसी दूसरे के द्वारा उद्धार नहीं; क्योंकि स्वर्ग के नीचे मनुष्यों में और कोई दूसरा नाम नहीं दिया गया, जिसके द्वारा हम उद्धार पा सके।”
13 ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.
१३जब उन्होंने पतरस और यूहन्ना का साहस देखा, और यह जाना कि ये अनपढ़ और साधारण मनुष्य हैं, तो अचम्भा किया; फिर उनको पहचाना, कि ये यीशु के साथ रहे हैं।
14 ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.
१४परन्तु उस मनुष्य को जो अच्छा हुआ था, उनके साथ खड़े देखकर, यहूदी उनके विरोध में कुछ न कह सके।
15 ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,
१५परन्तु उन्हें महासभा के बाहर जाने की आज्ञा देकर, वे आपस में विचार करने लगे,
16 “ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.
१६“हम इन मनुष्यों के साथ क्या करें? क्योंकि यरूशलेम के सब रहनेवालों पर प्रगट है, कि इनके द्वारा एक प्रसिद्ध चिन्ह दिखाया गया है; और हम उसका इन्कार नहीं कर सकते।
17 ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು.
१७परन्तु इसलिए कि यह बात लोगों में और अधिक फैल न जाए, हम उन्हें धमकाएँ, कि वे इस नाम से फिर किसी मनुष्य से बातें न करें।”
18 ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು.
१८तब पतरस और यूहन्ना को बुलाया और चेतावनी देकर यह कहा, “यीशु के नाम से कुछ भी न बोलना और न सिखाना।”
19 ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.
१९परन्तु पतरस और यूहन्ना ने उनको उत्तर दिया, “तुम ही न्याय करो, कि क्या यह परमेश्वर के निकट भला है, कि हम परमेश्वर की बात से बढ़कर तुम्हारी बात मानें?
20 ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.
२०क्योंकि यह तो हम से हो नहीं सकता, कि जो हमने देखा और सुना है, वह न कहें।”
21 ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.
२१तब उन्होंने उनको और धमकाकर छोड़ दिया, क्योंकि लोगों के कारण उन्हें दण्ड देने का कोई कारण नहीं मिला, इसलिए कि जो घटना हुई थी उसके कारण सब लोग परमेश्वर की बड़ाई करते थे।
22 ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.
२२क्योंकि वह मनुष्य, जिस पर यह चंगा करने का चिन्ह दिखाया गया था, चालीस वर्ष से अधिक आयु का था।
23 ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.
२३पतरस और यूहन्ना छूटकर अपने साथियों के पास आए, और जो कुछ प्रधान याजकों और प्राचीनों ने उनसे कहा था, उनको सुना दिया।
24 ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.
२४यह सुनकर, उन्होंने एक चित्त होकर ऊँचे शब्द से परमेश्वर से कहा, “हे प्रभु, तू वही है जिसने स्वर्ग और पृथ्वी और समुद्र और जो कुछ उनमें है बनाया।
25 ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?
२५तूने पवित्र आत्मा के द्वारा अपने सेवक हमारे पिता दाऊद के मुख से कहा, ‘अन्यजातियों ने हुल्लड़ क्यों मचाया? और देश-देश के लोगों ने क्यों व्यर्थ बातें सोची?
26 ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’
२६प्रभु और उसके अभिषिक्त के विरोध में पृथ्वी के राजा खड़े हुए, और हाकिम एक साथ इकट्ठे हो गए।’
27 ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.
२७“क्योंकि सचमुच तेरे पवित्र सेवक यीशु के विरोध में, जिसे तूने अभिषेक किया, हेरोदेस और पुन्तियुस पिलातुस भी अन्यजातियों और इस्राएलियों के साथ इस नगर में इकट्ठे हुए,
28 ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.
२८कि जो कुछ पहले से तेरी सामर्थ्य और मति से ठहरा था वही करें।
29 ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.
२९अब हे प्रभु, उनकी धमकियों को देख; और अपने दासों को यह वरदान दे कि तेरा वचन बड़े साहस से सुनाएँ।
30 ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”
३०और चंगा करने के लिये तू अपना हाथ बढ़ा कि चिन्ह और अद्भुत काम तेरे पवित्र सेवक यीशु के नाम से किए जाएँ।”
31 ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
३१जब वे प्रार्थना कर चुके, तो वह स्थान जहाँ वे इकट्ठे थे हिल गया, और वे सब पवित्र आत्मा से परिपूर्ण हो गए, और परमेश्वर का वचन साहस से सुनाते रहे।
32 ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.
३२और विश्वास करनेवालों की मण्डली एक चित्त और एक मन की थी, यहाँ तक कि कोई भी अपनी सम्पत्ति अपनी नहीं कहता था, परन्तु सब कुछ साझे का था।
33 ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.
३३और प्रेरित बड़ी सामर्थ्य से प्रभु यीशु के जी उठने की गवाही देते रहे और उन सब पर बड़ा अनुग्रह था।
34 ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,
३४और उनमें कोई भी दरिद्र न था, क्योंकि जिनके पास भूमि या घर थे, वे उनको बेच-बेचकर, बिकी हुई वस्तुओं का दाम लाते, और उसे प्रेरितों के पाँवों पर रखते थे।
35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.
३५और जैसी जिसे आवश्यकता होती थी, उसके अनुसार हर एक को बाँट दिया करते थे।
36 ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.
३६और यूसुफ नामक, साइप्रस का एक लेवी था जिसका नाम प्रेरितों ने बरनबास अर्थात् (शान्ति का पुत्र) रखा था।
37 ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
३७उसकी कुछ भूमि थी, जिसे उसने बेचा, और दाम के रुपये लाकर प्रेरितों के पाँवों पर रख दिए।

< ಅಪೊಸ್ತಲರ ಕೃತ್ಯಗಳ 4 >