< ಅಪೊಸ್ತಲರ ಕೃತ್ಯಗಳ 5 >
1 ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು.
Auch ein Mann, mit Namen Ananias, verkaufte im Einverständnis mit seiner Frau Saphira ein Grundstück.
2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.
Aber mit Wissen seiner Frau unterschlug er etwas von dem Kaufpreis und brachte nur einen Teil davon und legte ihn zu der Apostel Füßen nieder.
3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?
Doch Petrus sprach: "Ananias, warum hat der Satan dein Herz erfüllt, so daß du den Heiligen Geist belogen und einen Teil von dem Erlös deines Feldes zurückbehalten hast?
4 ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.
Konntest du das Land nicht als dein Eigentum behalten? Und als du es verkauft hattest, konntest du da nicht auch noch über den Erlös nach deinem Willen verfügen? Warum hast du dir denn eine solche Tat in deinem Herzen vorgenommen? Du hast nicht Menschen, sondern Gott belogen."
5 ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.
Beim Hören dieser Worte fiel Ananias tot zu Boden. Und großer Schrecken kam über alle Anwesenden.
6 ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.
Die jüngeren Gemeindeglieder aber erhoben sich, umwickelten den Leichnam mit leinenen Tüchern und trugen ihn hinaus zum Begräbnis.
7 ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು.
Nach ungefähr drei Stunden kam des Ananias Frau in die Versammlung, ohne daß sie wußte, was vorgefallen war.
8 ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು.
Petrus richtete sogleich das Wort an sie. "Sage mir", so fragte er, "ist dies der Kaufpreis eures Landes?" "Ja", versetzte sie, "das ist der Kaufpreis."
9 “ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.
"Warum", so fuhr nun Petrus fort, "seid ihr denn beide eins geworden, den Geist des Herrn herauszufordern? Die deinen Mann begraben haben, die kommen jetzt gerade zurück, um auch dich hinauszutragen."
10 ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.
Sofort fiel sie zu seinen Füßen nieder und gab den Geist auf. Die Jünglinge fanden sie bei ihrem Eintritt tot und trugen sie hinaus, um sie bei ihrem Mann zu begraben.
11 ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.
Dieser Vorfall erfüllte die ganze Gemeinde und alle, die davon hörten, mit großem Schrecken.
12 ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.
Im Volk geschahen damals viele Zeichen und Wunder durch die Hände der Apostel. Alle Gläubigen pflegten sich einmütig in der Halle Salomos zu versammeln.
13 ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.
Von den feindseligen Juden aber wagte keiner, sie zu beunruhigen. Die große Menge jedoch hielt hoch von ihnen.
14 ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.
Und immer mehr schlossen sich ihnen an, die an den Herrn gläubig wurden, ganze Scharen von Männern und Frauen.
15 ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.
Ja, es kam so weit, daß man die Kranken auf die Straße trug und sie dort auf Betten und Tragbahren niedersetzte, damit, wenn Petrus vorüberkäme, wenigstens sein Schatten auf den einen oder anderen fiele.
16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು.
Sogar aus den Städten rings um Jerusalem kamen die Leute in Scharen herbei: sie brachten Kranke und solche, die von unreinen Geistern gequält wurden. Und alle diese Leidenden wurden gesund.
17 ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.
Das brachte den Hohenpriester auf. Er und sein ganzer Anhang — die Partei der Sadduzäer — ließen neiderfüllt
18 ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.
die Apostel festnehmen und in das öffentliche Gefängnis werfen.
19 ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,
Ein Engel des Herrn aber öffnete nachts die Kerkertüren, führte sie hinaus und sprach zu ihnen:
20 “ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.
"Geht in den Tempel und verkündigt dort dem Volk öffentlich alle Worte dieser Lebensbotschaft!"
21 ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.
Diesem Befehl gehorsam gingen sie gegen Morgen in den Tempel und lehrten dort. Mittlerweile versammelten sich der Hohepriester und sein Anhang. Sie beriefen den Hohen Rat und alle Ältesten der Kinder Israels und sandten ins Gefängnis, um die Apostel vorzuführen.
22 ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,
Als aber die Diener hinkamen, fanden sie sie nicht im Gefängnis. Da kehrten sie zurück und meldeten:
23 “ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.
"Das Gefängnis fanden wir sorgfältig und fest verschlossen und die Wachen vor den Türen stehen; doch als wir öffneten, fanden wir niemand darin."
24 ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.
Als der Tempelhauptmann und die Hohenpriester diese Worte hörten, waren sie ganz bestürzt und fragten sich, was daraus werden solle.
25 ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.
Da kam einer mit der Meldung: "Die Männer, die ihr habt gefangensetzen lassen, die stehen schon wieder im Tempel und lehren das Volk!"
26 ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.
Nun ging der Hauptmann mit der Mannschaft hin und führte sie herbei, doch ohne Anwendung von Gewalt; denn sie fürchteten, das Volk könne sie sonst steinigen.
27 ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.
So brachten sie sie her und führten sie in den Sitzungssaal. Hier nahm sie der Hohepriester ins Verhör.
28 ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.
"Haben wir euch", so sprach er, "nicht aufs allerstrengste verboten, in jenem Namen zu lehren? Und doch habt ihr Jerusalem mit eurer Lehre erfüllt; ja ihr wollt dieses Menschen Blut über uns bringen."
29 ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!
Petrus aber und die anderen Apostel antworteten: "Man muß Gott mehr gehorchen als den Menschen.
30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.
Der Gott unserer Väter hat Jesus auferweckt, den ihr ans Kreuzesholz gehängt und hingemordet habt.
31 ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.
Den hat Gott durch seine rechte Hand zur Würde eines Herrschers und Befreiers erhoben, um Israel Sinnesänderung und Sündenvergebung zu schenken.
32 ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.
Dafür sind wir Zeugen und der Heilige Geist, den Gott allen gegeben hat, die ihm gehorchen."
33 ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.
Bei dieser Antwort wurden sie mit Wut erfüllt, und sie dachten schon daran, die Apostel zu töten.
34 ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.
Da erhob sich in der Versammlung ein Pharisäer, mit Namen Gamaliel, ein von dem ganzen Volk verehrter Gesetzeslehrer, und befahl, die Apostel für eine Weile hinauszuführen.
35 ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.
Dann sprach er zu den Männern des Hohen Rates: "Ihr Israeliten, überlegt euch wohl, wie ihr mit diesen Leuten verfahren wollt!
36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.
Einst hat sich Theudas erhoben. Der wollte eine Rolle spielen, und an vierhundert Männer sind ihm auch gefolgt. Aber er fand den Tod, und alle seine Anhänger wurden auseinandergetrieben und vernichtet.
37 ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.
Nach ihm trat zur Zeit der bekannten Schätzung der Galiläer Judas auf und zog viele Leute an sich. Auch der ist umgekommen, und alle seine Anhänger haben sich zerstreut.
38 ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.
Nun rate ich euch: Laßt diese Leute in Ruhe und bekümmert euch nicht um sie! Denn stammt dies Beginnen oder dieses Werk von Menschen, so geht es von selbst zugrunde.
39 ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.
Ist's aber wirklich aus Gott, so könnt ihr diese Leute nicht zum Schweigen bringen. Ja, ihr kommt noch in Gefahr, gegen Gott zu kämpfen."
40 ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.
Diesem Rat folgten sie. Sie riefen die Apostel wieder herein, ließen sie geißeln und verboten ihnen, im Namen Jesu zu reden. Dann durften die Apostel gehen.
41 ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.
Sie verließen aber den Hohen Rat voller Freude, weil sie gewürdigt worden waren, um des Namens willen Schmach zu leiden.
42 ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.
Im Tempel sowohl wie in häuslichen Versammlungen lehrten sie unaufhörlich Tag für Tag und verkündigten die Frohe Botschaft, daß Jesus der Messias sei.