< ಅಪೊಸ್ತಲರ ಕೃತ್ಯಗಳ 7 >
1 ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು.
Una katuma ka dandang ma gu ka dundure kani.
2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,
Istifanus ma gu a henu nan a ka co kunnanime aco uni nonzo ma kem aco aru Ibrahim anyumu a Misopotamiya otuba ticukum u hara.
3 ‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.
Ma gu imme ceki ma nyanga ma we me nan nanu henu uwe me, hana a manyangamage sa indi bezi we.
4 “ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.
Monno ma ceki manyanga mu kaldiya ma cukuno u haran, ba abim me sa a co me ma wi, Asere a e imme a nyimo a manyanga mageme sa inci kin.
5 ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.
Ma nyari unga umeme nyania hira a indai barki ukalum, ko a hira sa madi inki ubuna. se ma inki tize, u zatu u kem u vana u ibrahim dati.
6 ಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು.
Asere ma boo me a nime barki wadi chukuno a ma nyanga ma soh nan a na a hira me wadi wu wa ziti ti we esoh inaze.
7 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.
''In di hungu ko titui ta nu age sa wadi wu we a ni rere me,'' ingi asere, Inna dumo me wadi eh wa wu zim niru a banna me.
8 ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.
Ma kuri ma nya Ibrahim in inko u tize tini gbari Ibrahim ma yoh Ishayu ma gbari me rono u witotari Ishaya ma yoh Yakubu, Yakubu aco a nu kirau i.
9 “ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,
A cokoro wa wu ni eru ni Yususu wa ziki me u masar, Asere magi nan me.
10 ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.
Ma suso me a nyimo anirereme, ma nya me mu henu nan nu rusa utize a hira a Firauna Ugomo u masar, Firauna ma nya me ucanti u masar nan na kura ameme vat.
11 “ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.
An no a ribe ikomo ukene a manyanga mu masar vat nan kanana nan nu zito kang, a kaco aru wa diri imumare.
12 ಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
Serki sa Yakubu ma kunna imare ira anyimo umasar, matumi akaco aru me.
13 ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.
Ukure me Yusufu ma suri wa iri me, firauna ma gurna nan na henu a Yusufu me.
14 ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.
Yusufu ma tumi a henu ameme waka buka Yakubu a co ameme ma e u masar, vat nan ni henu wa biki eso sunare nan nu cibi.
15 ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.
Yakubu ma ha umasar monno ma wi nan aka co arume.
16 ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.
Aziki we u hana ushekem a nyimo a mu cau sa Ibrahim ma kpi a zurfa a tarin ta hana a hamor ushekem me.
17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.
U ganiya sa u u gwinci ka utize wa eh mamu, sa Asere ma buki Ibrahim, anume wa uh wa kinki u masar me.
18 ಆಗ, ‘ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.’
Ure Ugomo ma hiri in na dumo, sa da ma rusi Yusufu ba.
19 ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.
Me mani ma cangi anu acu me, ma nya we titene wa veti a hana awe me barki wa hama.
20 “ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು.
U ganiya sa a yo Musa ma rizi memerun aje Asere inta me tipieu ti taru a nyimo a kura a co ameme.
21 ಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು.
Sa a vete me a matara uco u Firauna ma wuzi ni wari ni me gu usam ume.
22 ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.
Musa ma manza tu katuma anu u mesar tize time me nan katuma ka me ka zi memerun.
23 “ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು.
Serke sa mabiki ti we a ino anazi, iri ba ime ya be zi me ma ka ira ahenu ameme ahana a Israilawa.
24 ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.
Sa ma iri azi un nutira ure u Istrailawa, Musa ma benki me, ma garza men ma dusa mahu unu ugino me.
25 ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.
Ma gusi agu ahenu me wadi iri tari ta Asere tini tidi benkiwe, da wa hemba.
26 ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.
Rono ukure me ma biki a hana ameme wa zi in nukara ma ha ma gu in we, “A nu a dandang shi a henu wani, nya nini izi innu matara a cece ashi me?
27 “ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?
Unu ukwabi me matuburko musa me, ma gu “Aveni ma nya we tigomo tiru?
28 ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು.
Udi hem? gu sa wa hu u masara me ninjo me?
29 ಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು.
Musa ma sumi sa ma kunna ani me ma cukuno gu ugenu a manyanga mu midia, monno ma yo a huna ruma ware.
30 “ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.
Tiwe ti aino a aki, umalaika ma ha a hira a musa a nyimo a nijaa upana u Sinai, a nyimo a nilem ni ura.
31 ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು.
Sa Musa ma iri ura, ma kunna bi yau, sa ma hana mamu, monno ma kunna ni gbiran na Asere, na gu.
32 ‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.
Mi mani Asere a kaco wa co aweme, aco a Ibrahim nan Ishaku, nan Yakubu, nipum ni Musa na tuba ukirsa, ma kari aje amemen.
33 “ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ.
Asere agu imme, kara makwatak me, a hira a gemesa uturin a zo me imma dini ba.
34 ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.
Ma mu ira utito a nu amme a nyimo umasar, ma kunna aso ashi me, mi be ma ringi in burishi, ayeni ana me, in di tumi shi u masar.
35 “‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.
Musa ugeme sa ya gidi me sa we gu, Aveni ma nya we tigomo aru? me mani Asere ma tumi me atari ti malaika sa ma kem me a nyimo ani jaa.
36 ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.
Musa ma suso we a nyimo u masar, sa ma wuzi timumu ti dandang a nyimo umasar nan ni win nivu, nan a nyimo a nijaa a ti we ti nu a ino a nazi.
37 “‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.
Musa sa irusa me mani magu in na Israilawa Asere adi nya shi udura anyimo ashime nan na henu a shi, udura gimi.
38 ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.
Me mani sa mara a nyimo a ni gurna a ni jaa nan malaika sa ma buki metize a nipana ni sinai me mani sa mazi nan aka co aru me, me mani ma kabi tize ti urai ma nya dura.
39 “ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.
Me mani unu me sa aka co aru wa nyaru u kunma utize ti meme wa idi me ahira awe me, nan a nyimo iriba iwemme wa kuri u masar.
40 ಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’ ಎಂದರು.
A nyimo uganiya uginome wa gu in haruna bara duru mu Asere sa wadi canti duru, Musa ugeme sa ma suso duru umasar, tita duru imum me sa ya kenme ba.
41 ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.
Wonno wa ba barka ku maruka atiye me wa nya madodo imumare, wa kunna urunta kang.
42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.
Senke Asere a ceki we wa wuzi anu akura Asere kadtuma gu sa a nyetike a nyimo a matakarda ma adura kAsere, ya wekimi iname ya iro anyimo atiwe a ino a nazi a rujaa, a kura a Israilawa?
43 ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.
Yakabi a hira ni gurna ni molek nan Asere a Refan, nan na imum sa ya barka barki ni ru, indi ziki shi in aki u Babila.
44 “ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.
Aka co arume wa zi inni rusa Asere a nyimo a nijaa, gu udungurka me umusa ma barka gu sa ma ira.
45 ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.
A hira a nigurna nan kaco arume wa gamirka wa riben a manyanga a tari ti Joshua imum ya hiri sa wa ribe wa meki ti tihira sa Asere ma gidi we, aje a kaco aru me, Anime ani har uganiya u Dauda.
46 ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.
Sa ma hem ahira Asere, ma ikki barki makem Asere a Yakubu a hira.
47 ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
Senke sulemanu ma barka Asere a kura.
48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:
Unu udandang ma da ciki a nyumo a tikura sa abara in tari ba, gu ubukamwa na kadura me.
49 “‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?
Aza me a hira ti cukum tum tini, adizi me a hira upatala tibuna tum, aye akura ani udi barka mini? ubo wa Asere, nani abani indi venke?
50 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ.
Da tari tum me tini ta wuzi ba?
51 “ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!
Shi anu sa ida kunna tize ba, da agwara muriba mushi nan titui, ko uya uganiya ya nyari ukana bibe ba Asere, i wuza gu aka co ashi me.
52 ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.
Uya unu dura mani sa da aka co ashi wa yomo me ba, wa hu anu dura sa wa emaje unu ulau, shi be ya cikuno anu uhaza anu.
53 ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು.
Shi me sa ya kabi udungurka Asere me sa malaiku wa inko, shi be yaga shi ucanti me.
54 ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು.
Sa anu adandang wa kunna timumume ya dari iriba iwe me, wa chari Istifanus in na nyo.
55 ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.
Sarki ma macika in bibe biriri, ma inki aje Asesere ma iri ni nonzo na Asere, ma iri Yesu maturi a tari tinare ta Asere.
56 “ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.
Istifanus magu, ira, ma ira a poko Asesere me vana Asere ma turi a tari tinare ta Asere.
57 ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.
Senki anu adangdang me wa wu uhanu in nigbirang we impi titui tu we me, wa rizi a me.
58 ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.
Wa kari me anyimo a nipin me wa tizi me in napo, anu hiri me, wa nati tirunga adizi a tibuna ti shawulu me.
59 ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.
Sa wazi innu tiza u Istifanus, ma ri aje innu tisa Asere, ma gusi, “Ugomo Asere kaba bine bimme”.
60 ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.
Ma tunguno a dizi ma yeze nigbirang inni kara, Asere, kati ucanti ucara tize a nice ni we me ba, sa ma mari ubo anime, monno ma wi.