< ಅಪೊಸ್ತಲರ ಕೃತ್ಯಗಳ 1 >
1 ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.
थियोफ़िलॉस महोदय, मेरे पहले अभिलेख का विषय था मसीह येशु की शिक्षाएं और उनके द्वारा शुरू किए गए वे काम,
2 ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.
जो उन्होंने अपने चुने हुए प्रेरितों को पवित्र आत्मा के निर्देश में दिए गए आदेशों के बाद स्वर्ग में स्वीकार कर लिए जाने तक किए.
3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.
मसीह येशु इन प्रेरितों के सामने अपने प्राणों के अंत तक की यातना के बाद अनेक अटल सबूतों के साथ चालीस दिन स्वयं को जीवित प्रकट करते रहे तथा परमेश्वर के राज्य संबंधी विषयों का वर्णन करते रहे.
4 ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.
एक दिन मसीह येशु ने उन्हें इकट्ठा कर आज्ञा दी, “येरूशलेम उस समय तक न छोड़ना, जब तक मेरे पिता (परमेश्वर) द्वारा की गई प्रतिज्ञा, जिसका वर्णन मैं कर चुका हूं, पूरी न हो जाए.
5 ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.
योहन तो जल में बपतिस्मा देते थे किंतु शीघ्र ही तुमको पवित्र आत्मा में बपतिस्मा दिया जाएगा.”
6 ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.
इसलिये जब वे सब वहां उपस्थित थे, उन्होंने प्रभु से प्रश्न किया, “प्रभु, क्या आप अब इस समय इस्राएल राज्य की दोबारा स्थापना करेंगे?”
7 ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.
“पिता के अधिकार में तय तिथियों या युगों के पूरे ज्ञान की खोज करना तुम्हारा काम नहीं है,” मसीह येशु ने उन्हें उत्तर दिया,
8 ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.
“पवित्र आत्मा के तुम पर उतरने पर तुम्हें सामर्थ्य प्राप्त होगा और तुम येरूशलेम, सारे यहूदिया, शमरिया तथा पृथ्वी के दूर-दूर तक के क्षेत्रों में मेरे गवाह होगे.”
9 ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
इस वक्तव्य के पूरा होते ही प्रेरितों के देखते-देखते मसीह येशु स्वर्ग में स्वीकार कर लिए गए तथा एक बादल ने उन्हें उनकी दृष्टि से ओझल कर दिया.
10 ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,
जब वे आकाश में दृष्टि गड़ाए हुए मसीह येशु को स्वर्ग में जाते हुए देख रहे थे, एकाएक सफ़ेद वस्त्रों में दो व्यक्ति उनके पास प्रकट हो
11 “ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.
कहने लगे, “गलीली पुरुषों, आकाश की ओर ऐसे क्यों ताक रहे हो? यह येशु, जो देखते-देखते तुम्हारे मध्य से स्वर्ग में स्वीकार कर लिए गए हैं, ठीक इसी प्रकार दोबारा आएंगे, जिस प्रकार तुमने उन्हें स्वर्ग में स्वीकार होते हुए देखा है.”
12 ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.
तब वे उस पहाड़ी से, जिसे ज़ैतून पर्वत भी कहा जाता है, येरूशलेम लौट गए. यह स्थान येरूशलेम से लगभग एक किलोमीटर दूरी पर है.
13 ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.
नगर में पहुंचकर वे ऊपर के कमरे में इकट्ठा हो गए, जहां वे रह रहे थे. वहां पेतरॉस, योहन, याकोब, आन्द्रेयास, फ़िलिप्पॉस, थोमॉस, बारथोलोमेयॉस, मत्तियाह, हलफ़ेयॉस के पुत्र याकोब, शिमओन ज़ेलोतेस तथा याकोब के पुत्र यहूदाह उपस्थित थे.
14 ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.
ये सभी वहां नियमित रूप से सच्चाई के साथ एक मन होकर, मसीह येशु की माता मरियम, उनके भाइयों तथा अन्य स्त्रियों के साथ प्रार्थना के लिए इकट्ठा होने लगे.
15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:
तब एक दिन, जब लगभग एक सौ बीस विश्वासी इकट्ठा थे, पेतरॉस उनके बीच खड़े होकर कहने लगे,
16 “ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.
“प्रिय भाई बहिनो, मसीह येशु को पकड़वाने के लिए अगुआ यहूदाह, के विषय में दावीद के माध्यम से पवित्र आत्मा के द्वारा कहा गया पवित्र शास्त्र का वचन पूरा होना ज़रूरी था.
17 ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”
वह हममें से एक तथा सेवा के कार्य में सहभागी था.”
18 ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.
अधर्म की कमाई से उसने भूमि मोल ली. वहां वह सिर के बल ऐसा गिरा कि उसका पेट फट गया तथा उसकी सारी आंतें बाहर बिखर गईं.
19 ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.
सारे येरूशलेम में यह समाचार फैल गया. यही कारण है कि वह भूमि अब उन्हीं की भाषा में हकलदमा अर्थात् लहू-भूमि के नाम से बदनाम हो गई है.
20 ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’
“भजन में वर्णन है: “‘उसकी भूमि उजाड़ हो जाए; तथा उसमें कोई बसने न पाए,’ तथा यह भी, “‘कोई अन्य उसका पद ले ले.’
21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,
इसलिये यह ज़रूरी है कि एक ऐसे व्यक्ति को चुना जाए, जो प्रभु येशु मसीह के कार्यों के सारे समय का गवाह है.
22 ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.
मसीह येशु को योहन द्वारा बपतिस्मा दिए जाने से लेकर उनके स्वर्ग में स्वीकार किए जाने तक—यह व्यक्ति हमारे साथ मसीह येशु के पुनरुत्थान का गवाह बने.”
23 ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.
इसलिये दो नाम सुझाए गए: योसेफ़ जिसे बारसब्बास के नाम से जाना जाता है, जिसका उपनाम था युस्तस तथा दूसरा व्यक्ति मत्तियास.
24 ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,
तब उन्होंने यह प्रार्थना की, “हे मनों को जांचनेवाले प्रभु, हम पर यह साफ़ कीजिए कि इन दोनों में से आपने किसे चुना है
25 ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.
कि वह इस सेवा के कार्य और प्रेरितों की वह खाली जगह ले, जिससे मुक्त होकर यहूदाह अपने ठहराए हुए स्थान पर चला गया.”
26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.
तब उन्होंने चिट डालें और मत मत्तियास के पक्ष में पड़े, इसलिये वह ग्यारह प्रेरितों में सम्मिलित कर लिया गया.