< ಆಮೋಸನು 6 >
1 ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!
Woe to those who are at ease in Zion, and to those who are secure in the mountain of Samaria, the notable men of the chief of the nations, to whom the house of Israel come!
2 ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
Pass ye to Calneh, and see, and from there go ye to Hamath the great, then go down to Gath of the Philistines. Are they better than these kingdoms? Or is their border greater than your border?
3 ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ.
Ye who put far away the evil day, and cause the seat of violence to come near,
4 ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.
who lie upon beds of ivory, and stretch themselves upon their couches, and eat the lambs out of the flock, and the calves out of the midst of the stall,
5 ವೀಣೆಯ ಸ್ವರಕ್ಕೆ ಹಾಡುತ್ತೀರಿ, ದಾವೀದನ ಹಾಗೆ ನಿಮಗೆ ನೀವೇ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತೀರಿ.
who sing idle songs to the sound of the viol, who invent for themselves instruments of music, like David,
6 ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.
who drink wine in bowls, and anoint themselves with the chief oils, but they are not grieved for the affliction of Joseph.
7 ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ, ಭೋಗ ಮಾಡುವವರ ಹರ್ಷ ಧ್ವನಿಯು ಗತಿಸಿ ಹೋಗುವುದು.
Therefore they shall now go captive with the first who go captive, and the revelry of those who stretched themselves shall pass away.
8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.
The lord Jehovah has sworn by himself, says Jehovah, the God of hosts: I abhor the excellency of Jacob, and hate his palaces, therefore I will deliver up the city with all that is therein.
9 ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ, ಅವರು ಸಾಯುವರು.
And it shall come to pass, if there remain ten men in one house, that they shall die.
10 ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”
And when a man's uncle shall take him up, even he who burns him, to bring out the bones out of the house, and shall say to him who is in the innermost parts of the house, Is there yet any with thee? and he shall say, No, then he shall say, Hold thy peace, for we may not make mention of the name of Jehovah.
11 ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
For, behold, Jehovah commands, and the great house shall be smitten with breaches, and the little house with clefts.
12 ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.
Shall horses run upon the rock? Will a man plow there with oxen? That ye have turned justice into gall, and the fruit of righteousness into wormwood,
13 ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ, ನೀವು ಹೆಚ್ಚಳ ಪಡುವುದು ಶೂನ್ಯವಾಗಿರುವುದರಲ್ಲಿಯೇ? “ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿಲ್ಲವೇ?” ಅಂದುಕೊಳ್ಳುತ್ತೀರಿ.
ye who rejoice in a thing of nothing, who say, Have we not taken to us horns by our own strength?
14 ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.
For, behold, I will raise up against you a nation, O house of Israel, says Jehovah, the God of hosts, and they shall afflict you from the entrance of Hamath to the brook of the Arabah.