< ಆಮೋಸನು 1 >

1 ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.
דִּבְרֵי עָמוֹס אֲשֶׁר־הָיָה בַנֹּקְדִים מִתְּקוֹעַ אֲשֶׁר חָזָה עַל־יִשְׂרָאֵל בִּימֵי ׀ עֻזִּיָּה מֶלֶךְ־יְהוּדָה וּבִימֵי יָרׇבְעָם בֶּן־יוֹאָשׁ מֶלֶךְ יִשְׂרָאֵל שְׁנָתַיִם לִפְנֵי הָרָֽעַשׁ׃
2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”
וַיֹּאמַר ׀ יְהֹוָה מִצִּיּוֹן יִשְׁאָג וּמִירוּשָׁלַ͏ִם יִתֵּן קוֹלוֹ וְאָֽבְלוּ נְאוֹת הָרֹעִים וְיָבֵשׁ רֹאשׁ הַכַּרְמֶֽל׃
3 ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.
כֹּה אָמַר יְהֹוָה עַל־שְׁלֹשָׁה פִּשְׁעֵי דַמֶּשֶׂק וְעַל־אַרְבָּעָה לֹא אֲשִׁיבֶנּוּ עַל־דּוּשָׁם בַּחֲרֻצוֹת הַבַּרְזֶל אֶת־הַגִּלְעָֽד׃
4 ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.
וְשִׁלַּחְתִּי אֵשׁ בְּבֵית חֲזָאֵל וְאָכְלָה אַרְמְנוֹת בֶּן־הֲדָֽד׃
5 ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.
וְשָֽׁבַרְתִּי בְּרִיחַ דַּמֶּשֶׂק וְהִכְרַתִּי יוֹשֵׁב מִבִּקְעַת־אָוֶן וְתוֹמֵךְ שֵׁבֶט מִבֵּית עֶדֶן וְגָלוּ עַם־אֲרָם קִירָה אָמַר יְהֹוָֽה׃
6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.
כֹּה אָמַר יְהֹוָה עַל־שְׁלֹשָׁה פִּשְׁעֵי עַזָּה וְעַל־אַרְבָּעָה לֹא אֲשִׁיבֶנּוּ עַל־הַגְלוֹתָם גָּלוּת שְׁלֵמָה לְהַסְגִּיר לֶאֱדֽוֹם׃
7 ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.
וְשִׁלַּחְתִּי אֵשׁ בְּחוֹמַת עַזָּה וְאָכְלָה אַרְמְנֹתֶֽיהָ׃
8 ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
וְהִכְרַתִּי יוֹשֵׁב מֵֽאַשְׁדּוֹד וְתוֹמֵךְ שֵׁבֶט מֵֽאַשְׁקְלוֹן וַהֲשִׁיבוֹתִי יָדִי עַל־עֶקְרוֹן וְאָֽבְדוּ שְׁאֵרִית פְּלִשְׁתִּים אָמַר אֲדֹנָי יֱהֹוִֽה׃
9 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.
כֹּה אָמַר יְהֹוָה עַל־שְׁלֹשָׁה פִּשְׁעֵי־צֹר וְעַל־אַרְבָּעָה לֹא אֲשִׁיבֶנּוּ עַֽל־הַסְגִּירָם גָּלוּת שְׁלֵמָה לֶאֱדוֹם וְלֹא זָכְרוּ בְּרִית אַחִֽים׃
10 ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”
וְשִׁלַּחְתִּי אֵשׁ בְּחוֹמַת צֹר וְאָכְלָה אַרְמְנוֹתֶֽיהָ׃
11 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.
כֹּה אָמַר יְהֹוָה עַל־שְׁלֹשָׁה פִּשְׁעֵי אֱדוֹם וְעַל־אַרְבָּעָה לֹא אֲשִׁיבֶנּוּ עַל־רׇדְפוֹ בַחֶרֶב אָחִיו וְשִׁחֵת רַחֲמָיו וַיִּטְרֹף לָעַד אַפּוֹ וְעֶבְרָתוֹ שְׁמָרָהֿ נֶֽצַח׃
12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”
וְשִׁלַּחְתִּי אֵשׁ בְּתֵימָן וְאָכְלָה אַרְמְנוֹת בׇּצְרָֽה׃
13 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.
כֹּה אָמַר יְהֹוָה עַל־שְׁלֹשָׁה פִּשְׁעֵי בְנֵֽי־עַמּוֹן וְעַל־אַרְבָּעָה לֹא אֲשִׁיבֶנּוּ עַל־בִּקְעָם הָרוֹת הַגִּלְעָד לְמַעַן הַרְחִיב אֶת־גְּבוּלָֽם׃
14 ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.
וְהִצַּתִּי אֵשׁ בְּחוֹמַת רַבָּה וְאָכְלָה אַרְמְנוֹתֶיהָ בִּתְרוּעָה בְּיוֹם מִלְחָמָה בְּסַעַר בְּיוֹם סוּפָֽה׃
15 ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.
וְהָלַךְ מַלְכָּם בַּגּוֹלָה הוּא וְשָׂרָיו יַחְדָּו אָמַר יְהֹוָֽה׃

< ಆಮೋಸನು 1 >