< ದಾನಿಯೇಲನು 3 >
1 ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
Цар Навуходоносор направи златен образ, шестдесет лакти висок и шест лакти широк, и го постави на полето Дура, във вавилонската област.
2 ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.
Тогава цар Навуходоносор прати да съберат сатрапите, наместниците, областните управители, съдиите, съкровищниците, съветниците, законоведците, и всичките началници на областите да дойдат на посвещението на образа, който цар Навуходоносор бе поставил.
3 ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.
Тогава сатрапите, наместниците, областните управители, съдиите, съкровищниците, съветниците, законоведците и всичките началници на областите се събраха на посвещението на образа, който цар Навуходоносор бе поставил; и застанаха пред образа, който Навуходоносор бе поставил.
4 ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ
Тогава глашатай викаше със силен глас: Вам се заповядва, племена, народи, и езици,
5 ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
щото когато чуете звука на тръбата, на свирката, на арфата, на китарата, на псалтира, на гайдата, и на всякакъв вид музика, да паднете та да се поклоните на златния образ, който Навуходоносор е поставил;
6 ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.
а който не падне да се поклони, в същия час ще бъде хвърлен всред пламенната огнена пещ.
7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
За това, когато всичките племена чуха звука на тръбата, на свирката, на арфата, на китарата, на псалтира, и на всякакъв вид музика, всичките племена, народи, и езици падаха и се кланяха на златния образ, който цар Навуходоносор бе поставил.
8 ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು
Тогава някои халдейци се приближиха при царя, та наклеветиха юдеите,
9 ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
като проговориха казвайки на цар Навуходоносора: Царю, да си жив до века!
10 ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.
Ти царю, си издал указ, щото всеки човек, който чуе звука на тръбата, на свирката, на арфата, на китарата, на псалтира, на гайдата, и на всякакъв вид музика, да падне и да се поклони на златния образ,
11 ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?
а който не падне и не се поклони да бъде хвърлен всред пламенната огнена пещ.
12 ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.
Има някои юдеи, които ти си поставил над работите на вавилонската област, Седрах, Мисах, и Авденаго, които човеци, царю, не те зачетоха; на боговете ти не служат, и на златния образ, който си поставил, не се кланят.
13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.
Тогава Навуходоносор с гняв и ярост заповяда да докарат Седраха, Мисаха и Авденаго. И докараха тия човеци пред царя.
14 ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?
Навуходоносор проговаряйки, рече им: Седрахе, Мисахе, и Авденаго, нарочно ли не служите на моя бог, и не се кланяте на златния образ, който поставих?
15 ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.
Сега, като чуете звука на тръбата, на свирката, на арфата, на китарата, на псалтира, на гайдата, и на всякакъв вид музика, ако сте готови да паднете и се поклоните на образа, който съм направил, добре; но ако не се поклоните, в същия час ще бъдете хвърлени всред пламенната огнена пещ; и кой е оня бог, който ще ви отърве от ръцете ми?
16 ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
Седрах, Мисах, и Авденаго рекоха в отговор на царя: Навуходоносоре, нам не ни трябва да ти отговаряме за това нещо.
17 ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.
Ако е така нашият Бог, Комуто ние служим, може да ни отърве от пламенната огнена пещ и от твоите ръце, царю, ще ни избави;
18 ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.
но ако не, пак да знаеш, царю, че на боговете ти няма да служим, и на златния образ, които си поставил, няма да се кланяме.
19 ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.
Тогава Навуходоносор се изпълни с ярост, и изгледът на лицето му се измени против Седраха, Мисаха и Авденаго, та проговаряйки, заповяда да нажежат пещта седем пъти повече, отколкото обикновено се нажежаваше.
20 ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
И на някои силни мъже от войската си заповяда да вържат Седраха, Мисаха и Авденаго, и да ги хвърлят в пламенната огнена пещ.
21 ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.
Тогава тия мъже бидоха вързани с шалварите си, хитоните си, мантиите си, и другите си дрехи, и бяха хвърлени всред пламенната огнена пещ.
22 ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.
А понеже царската заповед бе настойчива, и пещта се нажежи премного, огненият пламък уби ония мъже, които вдигнаха Седраха, Мисаха и Авденаго.
23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.
А тия трима мъже, Седрах, Мисах и Авденаго, паднаха вързани всред пламенната огнена пещ.
24 ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು.
Тогава цар Навуходоносор, ужасен, стана бърже, и като продума, рече на съветниците си: Не хвърлихме ли всред огъня трима мъже вързани? Те отговаряйки, рекоха на царя: Вярно е, царю.
25 ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.
В отговор той рече: Ето, виждам четирима мъже развързани, които ходят всред огъня, без да имат някаква повреда; и по изгледа си четвъртият прилича на син на боговете.
26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
Тогава Навуходоносор се приближи до устието на пламенната огнена пещ, и проговаряйки рече: Седрахе, Мисахе и Авденаго, слуги на всевишния Бог, излезте и дойдете тук. Тогава Седрах, Мисах и Авденаго излязоха изсред огъня.
27 ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.
И като се събраха сатрапите, наместниците, областните управители, и царските съветници, видяха, че огънят не бе имал сила върху телата на тия мъже, косъм от главата им не бе изгорял, и шалварите им не бяха се изменили, нито даже миризма от огън не бе преминала на тях.
28 ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.
Навуходоносор продумайки, рече: Благословен да бъде Бог Седрахов, Мисахов и Авденагов, който изпрати ангела си и избави слугите си, които, като уповаха на него, не послушаха думата на царя, но предадоха телата си, за да не служат, нито да се поклонят на друг бог, освен на своя си Бог.
29 ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.
За това, издавам указ, щото всеки човек, от които и да било люде, народ и език, който би казал зло против Бога на Седраха, Мисаха и Авденаго, да се разсече, и къщата му да се обърне на бунище; защото друг бог няма, който може да избави така.
30 ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.
Тогава царят повиши Седраха, Мисаха и Авденаго във вавилонската област.