< ದಾನಿಯೇಲನು 5 >
1 ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.
Belshazzar, the king gave a great feast to his thousands lords, and drank wine before the thousand.
2 ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.
Belshazzar, while he tasted the wine, commanded to bring the golden and silver vessels which his father Nebuchadnezzar had taken out of the temple at Jerusalem; that the king and his princes, his wives and his concubines, might drink therein.
3 ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
Then they brought the golden vessels that were taken out of the temple of the house of God at Jerusalem; and the king and his princes, his wives and his concubines, drank in them.
4 ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.
They drank wine, and praised the gods of gold and of silver, of brass, of iron, of wood, and of stone.
5 ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
In the same hour came forth fingers of a man's hand, and wrote over against the chandelier upon the plaster of the wall of the king's palace; and the king saw the hand that wrote.
6 ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
Then the king's countenance was changed, and his thoughts troubled him, so that the joints of his loins were loosened, and his knees smote one against the other.
7 ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.
The king cried aloud to bring in the magicians, the Chaldaeans, and the astrologers. And the king spake and said to the wise men of Babylon, Whoever shall read this writing, and show me the interpretation thereof, shall be clothed with purple, and have a chain of gold about his neck, and shall rule as the third in the kingdom.
8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.
Then all the king's wise men came in; but they could not read the writing, nor make known to the king its signification.
9 ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.
Then was King Belshazzar in great consternation, and his countenance was changed, and his lords were amazed.
10 ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!
Then the queen, on account of this affair of the king and his lords, came into the banquet-house; and the queen spake and said, O king, live forever! Let not thy thoughts terrify thee, nor let thy countenance be changed.
11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
There is a man in thy kingdom in whom is the spirit of the holy gods; and in the days of thy father, light and understanding and wisdom, like the wisdom of the gods, were found in him; and the king Nebuchadnezzar, thy father, made him chief of the scribes, the magicians, the Chaldeans, and the astrologers, thy father, O king!
12 ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
forasmuch as an excellent spirit and knowledge and understanding to interpret dreams, and to explain hard sentences, and solve difficult questions were found in him, in Daniel, whom the king named Belteshazzar; now let Daniel be called, and he will show the interpretation.
13 ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
Then was Daniel brought in before the king. And the king spake and said to Daniel, Art thou that Daniel, of the captives of Judah, whom the king, my father, brought out of Judaea?
14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
I have heard concerning thee, that the spirit of the gods is in thee, and that light and understanding and excellent wisdom are found in thee.
15 ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
And now the wise men and the magicians have been brought in before me, that they might read this writing, and make known to me its signification; but they could not show the signification of the thing.
16 ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
But I have heard of thee that thou canst give interpretations, and solve difficult questions. Now if thou canst read the writing and make known to me its signification, thou shalt be clothed with purple, and have a chain of gold about thy neck, and shalt rule as the third in the kingdom.
17 ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.
Then answered Daniel and said before the king, Let thy gifts be to thyself, and give thy rewards to another: yet I will read the writing to the king, and make known to him the signification.
18 “ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.
O king, the Most High God gave to Nebuchadnezzar, thy father, a kingdom, and majesty, and glory, and honor.
19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.
And by reason of the majesty which he gave him, all people, nations, and languages trembled and feared before him; whom he would he slew, and whom he would he kept alive; whom he would he set up, and whom he would he put down.
20 ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.
But when his heart was lifted up, and his spirit hardened in pride, he was thrust down from his kingly throne, and his glory was taken from him.
21 ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.
And he was driven from the sons of men; and his heart became like the beasts, and his dwelling was with wild asses; he was fed with grass like oxen, and his body was wet with the dew of heaven; till he knew that the Most High God ruled in the kingdoms of men, and set up over them whomsoever he would.
22 “ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ
And thou, his son, O Belshazzar, hast not humbled thy heart, though thou knewest all this;
23 ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.
but hast lifted thyself up against the Lord of heaven; and the vessels of his house have been brought before thee, and thou, and thy lords, thy wives, and thy concubines have drunk wine in them; and thou hast praised the gods of silver and gold, of brass, iron, wood, and stone, which see not, nor hear, nor know; and the God in whose hand is thy breath, and whose are all thy ways, thou hast not honored.
24 ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.
Then was sent from him the hand, and this writing was written.
25 “ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.
And this is the writing which was written: Numbered, Numbered, Weighed, and To be Divided.
26 “ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.
And this is the interpretation of it. Numbered: God hath numbered thy kingdom, and made an end of it.
27 “ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.
Weighed: Thou art weighed in the balances, and found wanting.
28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.
Divided: Thy kingdom is divided, and given to the Medes and Persians.
29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.
Then Belshazzar commanded, and they clothed Daniel with purple, and put a chain of gold about his neck, and made a proclamation concerning him that he should be third ruler in the kingdom.
30 ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.
In the same night was Belshazzar, the king of the Chaldaeans, slain;
31 ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.
and Darius the Mede took the kingdom, being about sixty-two years old.