< ಧರ್ಮೋಪದೇಶಕಾಂಡ 17 >
1 ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.
Mommfa anantwie anaa nnwan a wɔadi dɛm mmɔ afɔdeɛ mma Awurade, mo Onyankopɔn, ɛfiri sɛ, ɛyɛ nʼakyiwadeɛ.
2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.
Sɛ ɛba sɛ ɔbarima anaa ɔbaa a ɔka mo ho wɔ kuro baako bi a Awurade, mo Onyankopɔn, de rema mo no mu ayɛ bɔne wɔ Awurade, mo Onyankopɔn, anim, atia apam no
3 ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,
sɛ ɔresom anyame foforɔ anaa ɔresom owia, ɔsrane anaa ɔsoro atumfoɔ bi a mabra no, na
4 ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,
sɛ mote saa asɛm no a, monhwehwɛ mu yie. Sɛ ɛyɛ nokorɛ na wɔkɔ mu hunu sɛ ɛyɛ akyiwadeɛ na wayɛ wɔ Israel a,
5 ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.
momfa saa ɔbarima anaa ɔbaa no a wayɛ saa bɔne no mmra mo kuropɔn ɛpono ano na monsi no aboɔ nkum no.
6 ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
Adansefoɔ baanu anaa baasa ano asɛm so na ɛsɛ sɛ wɔgyina kum saa ɔbarima no. Nanso, ɛnsɛ sɛ wɔgyina ɔdanseni baako ano asɛm so kum obi.
7 ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Adansefoɔ no to ɔboɔ a ɛdi ɛkan a, nnipa a wɔwɔ hɔ no nyinaa nso bɛto wɔn deɛ de akum onipa no. Saa ɛkwan yi so na mobɛfa atu onipa bɔnefoɔ ase afiri mo mu.
8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.
Sɛ wɔde nsɛm bi ba mo asɛnniiɛ a ne die yɛ mo den sɛ mobɛbu ho atɛn, sɛ ɛyɛ awudie, asɛnnie, anaasɛ ntɔkwa a, momfa wɔn nkɔ baabi a Awurade, mo Onyankopɔn, bɛkyerɛ mo no.
9 ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.
Monkɔ asɔfoɔ a wɔyɛ Lewifoɔ ne ɔtemmufoɔ a ɔte adwa mu saa ɛberɛ no nkyɛn. Mommisa wɔn na wɔnkyerɛ mo atɛn a mommuo.
10 ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.
Monni gyinaeɛ a wɔbɛsi no so pɛpɛɛpɛ wɔ beaeɛ a Awurade, mo Onyankopɔn, bɛyi ama mo no hɔ. Monhwɛ yie na monni biribiara a wɔbɛkyerɛ mo sɛ monyɛ no so pɛpɛɛpɛ.
11 ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.
Monni mmara a wɔkyerɛ mo ne gyinaeɛ a wɔbɛsi ama mo no so pɛpɛɛpɛ. Monnnane deɛ wɔka kyerɛ mo no ani. Monnkɔ nifa anaa benkum.
12 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
Ɔbarima a ɔbɛbu ɔtemmufoɔ anaa ɔsɔfoɔ a ɔgyina hɔ resom Awurade mo Onyankopɔn animtia no, wɔnkum no. Ɛsɛ sɛ motɔre amumuyɛsɛm ase wɔ Israel.
13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು.
Nnipa nyinaa bɛte na wɔasuro na wɔremmu animtia bio.
14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.
Sɛ moduru asase a Awurade mo Onyankopɔn de rema mo no so na mofa tena so na moka sɛ. “Momma yɛnsi yɛn so ɔhene te sɛ aman a atwa yɛn ho ahyia no nyinaa a,”
15 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.
monhwɛ sɛ mobɛpa obi a Awurade mo Onyankopɔn bɛyi no asi mo so ɔhene. Ɛsɛ sɛ ɔyɛ mo nuanom no mu bi. Mommfa ɔhɔhoɔ a ɔnyɛ mo nua Israelni nsi mo so ɔhene.
16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.
Ɛnsɛ sɛ saa ɔhene no pɛ apɔnkɔ dodoɔ sɛ nʼagyapadeɛ anaasɛ ɔma nnipa sane kɔ Misraim kɔtɔ apɔnkɔ dodoɔ wɔ hɔ, ɛfiri sɛ, Awurade aka akyerɛ mo sɛ. “Ɛnsɛ sɛ mosane kɔ mo akyi bio.”
17 ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
Ɛnsɛ sɛ ɔware yerenom bebree anyɛ saa a, nʼakoma bɛfiri Awurade so. Ɛnsɛ sɛ ɔboaboa dwetɛ ne sika pii ano.
18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.
Sɛ ɔtena ahennwa no so sɛ ɔhene a, ɛsɛ sɛ ɔtwerɛ mmara nwoma no wɔ mmobɔeɛ so wɔ Lewifoɔ asɔfoɔ anim na ɔfa.
19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.
Mmerɛ dodoɔ a ɔte ase no, ɛsɛ sɛ ɔkora mmara a ɛwɔ ne nkyɛn no na ɔkenkan no daa sɛdeɛ ɛbɛyɛ a, ɔbɛdi mmara no so na wasuro Awurade ne Onyankopɔn.
20 ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.
Kenkan a ɔkenkan no daa no remma ɔnyɛ ahantan, nhoran ne ho nkyerɛ sɛ ɔsene ne manfoɔ no. Ɛbɛsi no kwan sɛ ɔbɛtwe ne ho kakra mpo afiri saa mmara yi ho. Yei bɛsi no gyinaeɛ sɛ ɔne nʼasefoɔ bɛdi adeɛ awoɔ ntoatoasoɔ bebree so wɔ Israel.