< ಧರ್ಮೋಪದೇಶಕಾಂಡ 19 >

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.
כִּֽי־יַכְרִ֞ית יְהוָ֤ה אֱלֹהֶ֙יךָ֙ אֶת־הַגֹּויִ֔ם אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ אֶת־אַרְצָ֑ם וִֽירִשְׁתָּ֕ם וְיָשַׁבְתָּ֥ בְעָרֵיהֶ֖ם וּבְבָתֵּיהֶֽם׃
2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು.
שָׁלֹ֥ושׁ עָרִ֖ים תַּבְדִּ֣יל לָ֑ךְ בְּתֹ֣וךְ אַרְצְךָ֔ אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ לְרִשְׁתָּֽהּ׃
3 ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
תָּכִ֣ין לְךָ֮ הַדֶּרֶךְ֒ וְשִׁלַּשְׁתָּ֙ אֶת־גְּב֣וּל אַרְצְךָ֔ אֲשֶׁ֥ר יַנְחִֽילְךָ֖ יְהוָ֣ה אֱלֹהֶ֑יךָ וְהָיָ֕ה לָנ֥וּס שָׁ֖מָּה כָּל־רֹצֵֽחַ׃
4 ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.
וְזֶה֙ דְּבַ֣ר הָרֹצֵ֔חַ אֲשֶׁר־יָנ֥וּס שָׁ֖מָּה וָחָ֑י אֲשֶׁ֨ר יַכֶּ֤ה אֶת־רֵעֵ֙הוּ֙ בִּבְלִי־דַ֔עַת וְה֛וּא לֹא־שֹׂנֵ֥א לֹ֖ו מִתְּמֹ֥ל שִׁלְשֹֽׁם׃
5 ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
וַאֲשֶׁר֩ יָבֹ֨א אֶת־רֵעֵ֥הוּ בַיַּעַר֮ לַחְטֹ֣ב עֵצִים֒ וְנִדְּחָ֨ה יָדֹ֤ו בַגַּרְזֶן֙ לִכְרֹ֣ת הָעֵ֔ץ וְנָשַׁ֤ל הַבַּרְזֶל֙ מִן־הָעֵ֔ץ וּמָצָ֥א אֶת־רֵעֵ֖הוּ וָמֵ֑ת ה֗וּא יָנ֛וּס אֶל־אַחַ֥ת הֶעָרִים־הָאֵ֖לֶּה וָחָֽי׃
6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.
פֶּן־יִרְדֹּף֩ גֹּאֵ֨ל הַדָּ֜ם אַחֲרֵ֣י הָרֹצֵ֗חַ כִּי־יֵחַם֮ לְבָבֹו֒ וְהִשִּׂיגֹ֛ו כִּֽי־יִרְבֶּ֥ה הַדֶּ֖רֶךְ וְהִכָּ֣הוּ נָ֑פֶשׁ וְלֹו֙ אֵ֣ין מִשְׁפַּט־מָ֔וֶת כִּ֠י לֹ֣א שֹׂנֵ֥א ה֛וּא לֹ֖ו מִתְּמֹ֥ול שִׁלְשֹֽׁום׃
7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.
עַל־כֵּ֛ן אָנֹכִ֥י מְצַוְּךָ֖ לֵאמֹ֑ר שָׁלֹ֥שׁ עָרִ֖ים תַּבְדִּ֥יל לָֽךְ׃ ס
8 ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.
וְאִם־יַרְחִ֞יב יְהוָ֤ה אֱלֹהֶ֙יךָ֙ אֶת־גְּבֻ֣לְךָ֔ כַּאֲשֶׁ֥ר נִשְׁבַּ֖ע לַאֲבֹתֶ֑יךָ וְנָ֤תַן לְךָ֙ אֶת־כָּל־הָאָ֔רֶץ אֲשֶׁ֥ר דִּבֶּ֖ר לָתֵ֥ת לַאֲבֹתֶֽיךָ׃
9 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಕಾಪಾಡಿ ಕೈಗೊಳ್ಳಬೇಕು. ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ಯಾವಾಗಲೂ ನಡೆದರೆ ನೀವು ಈ ಮೂರು ಪಟ್ಟಣಗಳ ಜೊತೆಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
כִּֽי־תִשְׁמֹר֩ אֶת־כָּל־הַמִּצְוָ֨ה הַזֹּ֜את לַעֲשֹׂתָ֗הּ אֲשֶׁ֨ר אָנֹכִ֣י מְצַוְּךָ֮ הַיֹּום֒ לְאַהֲבָ֞ה אֶת־יְהוָ֧ה אֱלֹהֶ֛יךָ וְלָלֶ֥כֶת בִּדְרָכָ֖יו כָּל־הַיָּמִ֑ים וְיָסַפְתָּ֙ לְךָ֥ עֹוד֙ שָׁלֹ֣שׁ עָרִ֔ים עַ֖ל הַשָּׁלֹ֥שׁ הָאֵֽלֶּה׃
10 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.
וְלֹ֤א יִשָּׁפֵךְ֙ דָּ֣ם נָקִ֔י בְּקֶ֣רֶב אַרְצְךָ֔ אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ נַחֲלָ֑ה וְהָיָ֥ה עָלֶ֖יךָ דָּמִֽים׃ ס
11 ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,
וְכִֽי־יִהְיֶ֥ה אִישׁ֙ שֹׂנֵ֣א לְרֵעֵ֔הוּ וְאָ֤רַב לֹו֙ וְקָ֣ם עָלָ֔יו וְהִכָּ֥הוּ נֶ֖פֶשׁ וָמֵ֑ת וְנָ֕ס אֶל־אַחַ֖ת הֶעָרִ֥ים הָאֵֽל׃
12 ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.
וְשָֽׁלְחוּ֙ זִקְנֵ֣י עִירֹ֔ו וְלָקְח֥וּ אֹתֹ֖ו מִשָּׁ֑ם וְנָתְנ֣וּ אֹתֹ֗ו בְּיַ֛ד גֹּאֵ֥ל הַדָּ֖ם וָמֵֽת׃
13 ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.
לֹא־תָחֹ֥וס עֵֽינְךָ֖ עָלָ֑יו וּבִֽעַרְתָּ֧ דַֽם־הַנָּקִ֛י מִיִּשְׂרָאֵ֖ל וְטֹ֥וב לָֽךְ׃ ס
14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.
לֹ֤א תַסִּיג֙ גְּב֣וּל רֽ͏ֵעֲךָ֔ אֲשֶׁ֥ר גָּבְל֖וּ רִאשֹׁנִ֑ים בְּנַחֲלָֽתְךָ֙ אֲשֶׁ֣ר תִּנְחַ֔ל בָּאָ֕רֶץ אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ לְרִשְׁתָּֽהּ׃ ס
15 ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.
לֹֽא־יָקוּם֩ עֵ֨ד אֶחָ֜ד בְּאִ֗ישׁ לְכָל־עָוֹן֙ וּלְכָל־חַטָּ֔את בְּכָל־חֵ֖טְא אֲשֶׁ֣ר יֽ͏ֶחֱטָ֑א עַל־פִּ֣י ׀ שְׁנֵ֣י עֵדִ֗ים אֹ֛ו עַל־פִּ֥י שְׁלֹשָֽׁה־עֵדִ֖ים יָק֥וּם דָּבָֽר׃
16 ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ,
כִּֽי־יָק֥וּם עֵד־חָמָ֖ס בְּאִ֑ישׁ לַעֲנֹ֥ות בֹּ֖ו סָרָֽה׃
17 ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
וְעָמְד֧וּ שְׁנֵֽי־הָאֲנָשִׁ֛ים אֲשֶׁר־לָהֶ֥ם הָרִ֖יב לִפְנֵ֣י יְהוָ֑ה לִפְנֵ֤י הַכֹּֽהֲנִים֙ וְהַשֹּׁ֣פְטִ֔ים אֲשֶׁ֥ר יִהְי֖וּ בַּיָּמִ֥ים הָהֵֽם׃
18 ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,
וְדָרְשׁ֥וּ הַשֹּׁפְטִ֖ים הֵיטֵ֑ב וְהִנֵּ֤ה עֵֽד־שֶׁ֙קֶר֙ הָעֵ֔ד שֶׁ֖קֶר עָנָ֥ה בְאָחִֽיו׃
19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
וַעֲשִׂ֣יתֶם לֹ֔ו כַּאֲשֶׁ֥ר זָמַ֖ם לַעֲשֹׂ֣ות לְאָחִ֑יו וּבִֽעַרְתָּ֥ הָרָ֖ע מִקִּרְבֶּֽךָ׃
20 ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.
וְהַנִּשְׁאָרִ֖ים יִשְׁמְע֣וּ וְיִרָ֑אוּ וְלֹֽא־יֹסִ֨פוּ לַעֲשֹׂ֜ות עֹ֗וד כַּדָּבָ֥ר הָרָ֛ע הַזֶּ֖ה בְּקִרְבֶּֽךָ׃
21 ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.
וְלֹ֥א תָחֹ֖וס עֵינֶ֑ךָ נֶ֣פֶשׁ בְּנֶ֗פֶשׁ עַ֤יִן בְּעַ֙יִן֙ שֵׁ֣ן בְּשֵׁ֔ן יָ֥ד בְּיָ֖ד רֶ֥גֶל בְּרָֽגֶל׃ ס

< ಧರ್ಮೋಪದೇಶಕಾಂಡ 19 >