< ಧರ್ಮೋಪದೇಶಕಾಂಡ 2 >

1 ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.
Kisha tukageuka nyuma na kusafiri kuelekea jangwani kwa njia inayoelekea Bahari ya Shamu, kama Bwana alivyonielekeza. Kwa muda mrefu tulitembea kuzunguka vilima katika nchi ya Seiri.
2 ಆಮೇಲೆ ಯೆಹೋವ ದೇವರು ನನಗೆ,
Kisha Bwana akaniambia,
3 “ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.
“Umetembea kuzunguka hii nchi ya vilima kwa muda wa kutosha; sasa geukia kaskazini.
4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
Wape watu maagizo haya: ‘Mko karibu kupita katikati ya nchi ya ndugu zako ambao ni wazao wa Esau, ambao wanaishi Seiri. Watawaogopa, lakini mwe waangalifu.
5 ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.
Msiwachokoze kwa vita kwa maana sitawapa ninyi sehemu yoyote ya nchi yao, hata sehemu ya kutosha kuweka wayo wenu juu yake. Nimempa Esau nchi ya vilima ya Seiri kama yake mwenyewe.
6 ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’”
Mtawalipa fedha kwa chakula mtakachokula na maji mtakayokunywa.’”
7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.
Bwana Mungu wenu amewabariki kwa kazi yote ya mikono yenu. Amewalinda katika safari yenu katikati ya jangwa hili kubwa. Kwa miaka hii arobaini Bwana Mungu wenu amekuwa pamoja nanyi, na hamkupungukiwa na kitu chochote.
8 ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.
Basi tulipita kwa ndugu zetu wazao wa Esau ambao wanaishi Seiri. Tuligeuka kutoka njia ya Araba ambayo inatokea Elathi na Esion-Geberi, tukasafiri kufuata njia ya jangwa la Moabu.
9 ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.
Kisha Bwana akaniambia, “Usiwasumbue Wamoabu kwa vita, kwa kuwa sitawapa sehemu yoyote ya nchi yao. Nimetoa nchi ya Ari kwa wazao wa Loti kama milki yao.”
10 ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.
(Waemi walikuwa wakiishi huko hapo zamani, watu wenye nguvu na wengi, warefu kama Waanaki.
11 ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
Kama walivyokuwa Waanaki, hao pia walikuwa kama Warefai, lakini Wamoabu waliwaita Waemi.
12 ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.
Wahori waliishi Seiri, lakini wazao wa Esau waliwafukuza. Waliwaangamiza Wahori na kukaa mahali pao, kama Waisraeli walivyofanya katika nchi ambayo Bwana aliwapa kama milki yao.)
13 “ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
Bwana akasema, “Sasa ondokeni mvuke Bonde la Zeredi.” Hivyo tukavuka bonde.
14 ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.
Miaka thelathini na minane ilipita tangu wakati tulipoondoka Kadesh-Barnea mpaka tulipovuka Bonde la Zeredi. Kwa wakati huo kile kizazi chote cha wanaume kuanzia wale wawezao kwenda vitani kilikuwa kimekufa, kama Bwana alivyokuwa amewaapia.
15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.
Mkono wa Bwana uliwakabili hadi alipowaangamiza wote huko kambini.
16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,
Ikawa baada ya mtu wa mwisho kuanzia wale wawezao kwenda vitani kufa,
17 ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,
Bwana akaniambia,
18 “ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.
“Leo utapita katika nchi ya Moabu huko Ari.
19 ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.
Utakapokuja kwa Waamoni, msiwasumbue wala kuwachokoza kwa vita, kwa kuwa sitawapa ardhi yoyote iliyo ya Waamoni kuwa milki yenu. Nimeitoa kama milki ya wazao wa Loti.”
20 ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
(Hiyo pia ilidhaniwa kuwa nchi ya Warefai waliokuwa wakiishi huko, lakini Waamoni waliwaita Wazamzumi.
21 ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.
Walikuwa watu wenye nguvu na wengi, warefu kama Waanaki. Bwana akawaangamiza kutoka mbele ya Waamoni, ambao waliwafukuza na kukaa mahali pao.
22 ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.
Bwana alikuwa amefanya vivyo hivyo kwa wazao wa Esau, ambao waliishi Seiri, wakati alipowaangamiza Wahori watoke mbele yao. Waliwafukuza na wao wakaishi mahali pao mpaka leo.
23 ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.
Nao Waavi ambao waliishi katika vijiji mpaka Gaza, Wakaftori waliokuja kutoka Kaftori waliwaangamiza na kukaa mahali pao.)
24 “ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.
“Ondoka sasa na uvuke Bonde la Arnoni. Tazama, nimemweka mikononi mwako Sihoni Mwamori, mfalme wa Heshboni na nchi yake. Anza kuimiliki nchi hiyo na umwingize katika vita.
25 ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.
Siku hii ya leo nitaanza kuwatia hofu na woga mataifa yote chini ya mbingu wawaogope ninyi. Watakaposikia taarifa zenu, watatetemeka na kufadhaika kwa sababu yenu.”
26 ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,
Kutoka jangwa la Kedemothi nilituma wajumbe wenye maneno ya amani kwa Sihoni mfalme wa Heshboni kusema,
27 “ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.
“Turuhusu tupite katika nchi yako. Tutapita katika barabara kuu, hatutageuka kuume wala kushoto.
28 ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.
Tuuzie chakula tule na maji tunywe kwa thamani yake katika fedha. Turuhusu tu tupite kwa miguu,
29 ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.
kama wazao wa Esau ambao wanaishi Seiri na Wamoabu ambao wanaishi Ari walivyotufanyia, mpaka tuvuke Yordani kuingia nchi ambayo Bwana Mungu wetu anatupatia.”
30 ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.
Lakini Sihoni mfalme wa Heshboni alikataa kuturuhusu kupita. Kwa kuwa Bwana Mungu wako alikuwa ameifanya roho yake kuwa ngumu na moyo wake kuwa mkaidi ili amweke kwenye mikono yenu, kama alivyofanya sasa.
31 ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು.
Bwana akaniambia, “Tazama, nimeanza kuwapa Mfalme Sihoni na nchi yake kwako. Sasa anzeni kuishinda na kuimiliki nchi yake.”
32 ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.
Wakati Sihoni pamoja na jeshi lake lote walipokuja kukutana nasi katika vita huko Yahazi,
33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.
Bwana Mungu wetu alimweka mikononi mwetu, nasi tukamwangamiza pamoja na wanawe na jeshi lake lote.
34 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.
Kwa wakati ule tuliteka miji yake yote na kuiangamiza kabisa: wanaume, wanawake na watoto. Hatukumwacha yeyote.
35 ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.
Lakini mifugo na nyara tulizoziteka kutoka ile miji tulijichukulia wenyewe.
36 ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.
Kutoka Aroeri kwenye ukingo wa Bonde la Arnoni, kutoka mji ulio ndani ya bonde, hata mpaka Gileadi, hapakuwa na mji hata mmoja uliokuwa na nguvu kutushinda. Bwana Mungu wetu alitupa yote.
37 ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.
Lakini kulingana na amri ya Bwana Mungu wetu, hamkujiingiza katika nchi yoyote ya Waamoni, wala katika sehemu yoyote iliyo kandokando ya Mto Yaboki, wala katika miji iliyoko katika vilima.

< ಧರ್ಮೋಪದೇಶಕಾಂಡ 2 >