< ಧರ್ಮೋಪದೇಶಕಾಂಡ 27 >
1 ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು.
모세가 이스라엘 장로들로 더불어 백성에게 명하여 가로되 `내가 오늘날 너희에게 명하는 이 명령을 너희는 다 지킬지니라'
2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,
너희가 요단을 건너 네 하나님 여호와께서 네게 주시는 땅에 들어가는 날에 큰 돌들을 세우고 석회를 바르라
3 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.
이미 건넌 후에 이 율법의 모든 말씀을 그 위에 기록하라 그리하면 네 하나님 여호와께서 네게 주시는 땅 곧 젖과 꿀이 흐르는 땅에 네가 들어가기를 네 열조의 하나님 여호와께서 네게 말씀하신 대로 하리니
4 ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.
너희가 요단을 건너거든 내가 오늘날 너희에게 명하는 이 돌들을 에발산에 세우고 그 위에 석회를 바를 것이며
5 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಬೇಕು. ಕಬ್ಬಿಣದ ಉಪಕರಣವನ್ನು ನೀವು ಕಲ್ಲುಗಳ ಮೇಲೆ ಉಪಯೋಗಿಸಬಾರದು.
또 거기서 네 하나님 여호와를 위하여 단 곧 돌단을 쌓되 그것에 철기를 대지 말지니라
6 ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠವನ್ನು ಹುಟ್ಟುಕಲ್ಲುಗಳಿಂದಲೇ ಕಟ್ಟಬೇಕು. ನೀವು ಅದರ ಮೇಲೆ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಬೇಕು.
너는 다듬지 않은 돌로 네 하나님 여호와의 단을 쌓고 그 위에 하나님 여호와께 번제를 드릴 것이며
7 ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.
또 화목제를 드리고 거기서 먹으며 네 하나님 여호와 앞에서 즐거워하라!
8 ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು.
너는 이 율법의 모든 말씀을 그 돌들 위에 명백히 기록할지니라!
9 ಆಗ ಮೋಶೆಯೂ ಯಾಜಕರಾದ ಲೇವಿಯರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ, “ಇಸ್ರಾಯೇಲರೇ, ಶಾಂತರಾಗಿದ್ದು ಕೇಳಿರಿ. ನೀವು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಜನಾಂಗವಾಗಿದ್ದೀರಿ.
모세가 레위 제사장들로 더불어 온 이스라엘에게 고하여 가로되 이스라엘아 잠잠히 들으라! 오늘날 네가 네 하나님 여호와의 백성이 되었으니
10 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು.
그런즉 네 하나님 여호와의 말씀을 복종하여 내가 오늘날 네게 명하는 그 명령과 규례를 행할지니라'
11 ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ:
모세가 당일에 백성에게 명하여 가로되
12 “ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು;
너희가 요단을 건넌 후에 시므온과 레위와 유다와 잇사갈과 요셉과 베냐민은 백성을 축복하기 위하여 그리심산에 서고
13 ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು.
르우벤과 갓과 아셀과 스불론과 단과 납달리는 저주하기 위하여 에발산에 서고
14 ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ,
레위 사람은 큰 소리로 이스라엘 모든 사람에게 말하여 이르기를
15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
장색의 손으로 조각하였거나 부어 만든 우상은 여호와께 가증하니 그것을 만들어 은밀히 세우는 자는 저주를 받을 것이라 할 것이요 모든 백성은 응답하여 아멘 할지니라
16 ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
그 부모를 경홀히 여기는 자는 저주를 받을 것이라 할 것이요 모든 백성은 아멘 할지니라
17 ಅವರು, “ತನ್ನ ನೆರೆಯವನ ಗಡಿ ಮೇರೆಯನ್ನು ಸರಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
그 이웃의 지계표를 옮기는 자는 저주를 받을 것이라 할 것이요 모든 백성은 아멘 할지니라
18 ಅವರು, “ಕಣ್ಣು ಕಾಣದವನನ್ನು ದಾರಿತಪ್ಪಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
소경으로 길을 잃게 하는 자는 저주를 받을 것이라 할 것이요 모든 백성은 아멘 할지니라
19 ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
객이나 고아나 과부의 송사를 억울케 하는 자는 저주를 받을 것이라 할 것이요 모든 백성은 아멘 할지니라
20 ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
계모와 구합하는 자는 그 아비의 하체를 드러내었으니 저주를 받을 것이라 할 것이요 모든 백성은 아멘 할지니라
21 ಅವರು, “ಪಶುಸಂಗಮ ಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
무릇 짐승과 교합하는 자는 저주를 받을 것이라 할 것이요 모든 백성은 아멘 할지니라
22 ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
그 자매 곧 그 아비의 딸이나 어미의 딸과 구합하는 자는 저주를 받을 것이라 할 것이요 모든 백성은 아멘 할지니라
23 ಅವರು, “ತನ್ನ ಅತ್ತೆಯ ಸಂಗಡ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
장모와 구합하는 자는 저주를 받을 것이라 할 것이요 모든 백성은 아멘 할지니라
24 ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
그 이웃을 암살하는 자는 저주를 받을 것이라 할 것이요 모든 백성은 아멘 할지니라
25 ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
무죄자를 죽이려고 뇌물을 받는 자는 저주를 받을 것이라 할 것이요 모든 백성은 아멘 할지니라
26 ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
이 율법의 모든 말씀을 실행치 아니하는 자는 저주를 받을 것이라 할 것이요 모든 백성은 아멘 할지니라