< ಧರ್ಮೋಪದೇಶಕಾಂಡ 34 >

1 ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ
Na Mose firi Moab asase tata so foro kɔɔ Nebo Bepɔ so, sane foroo Pisga kokoɔ no wɔ Yeriko ntentenesoɔ. Na Awurade kyerɛɛ no asase no nyinaa, ɛfiri Gilead kɔsi Dan;
2 ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯೀಮ್, ಮನಸ್ಸೆಯ ದೇಶವನ್ನೂ, ಸಮುದ್ರದ ಕಟ್ಟಕಡೆಯವರೆಗಿರುವ ಸಮಸ್ತ ಯೆಹೂದ ದೇಶವನ್ನೂ,
Naftali nsase nyinaa; Efraim ne Manase nsase; Yuda nsase nyinaa kɔsi Ntam Po no ho;
3 ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು.
Negeb; ne nsase a ɛfiri Yeriko bɔnhwa no de kɔsi Soar.
4 ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.
Na Awurade ka kyerɛɛ Mose sɛ, “Yei ne asase a mekaa ntam hyɛɛ ho bɔ kyerɛɛ Abraham, Isak ne Yakob sɛ mede bɛma wɔn asefoɔ no. Afei, mama wo de wʼani ahunu, nanso wo nan rensi so.”
5 ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.
Enti Mose, Awurade ɔsomfoɔ wuu wɔ Moab asase so sɛdeɛ Awurade kaeɛ no.
6 ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.
Wɔsiee no wɔ bɔnhwa bi a ɛbɛn Bet-Peor nanso ɛbɛsi ɛnnɛ, obiara nnim beaeɛ ko pɔtee.
7 ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.
Mose dii mfirinhyia ɔha ne aduonu, na ɔwuiɛ nanso na nʼani hunu adeɛ yie na ne ho nso yɛ den.
8 ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.
Israelfoɔ suu no nnafua aduasa de wiee nʼayie wɔ Moab tata so.
9 ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.
Afei, Nun babarima Yosua nyaa nyansa honhom ɛfiri sɛ, Mose de ne nsa guu ne so. Enti, Israelfoɔ yɛɛ ɔsetie maa no na wɔyɛɛ biribiara sɛdeɛ Awurade hyɛɛ Mose no ara pɛ.
10 ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.
Mose akyi no, odiyifoɔ biara mmaeɛ a Awurade nim no animu ne animu.
11 ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು.
Awurade somaa Mose ma ɔkɔyɛɛ anwanwadeɛ ne nsɛnkyerɛnneɛ a ɛyɛ hu wɔ Misraim asase so de tiaa Farao, nʼasomfoɔ ne asase no nyinaa.
12 ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.
Na ɛnam Mose so na Awurade daa ne tumi kɛseɛ ne ahodwirie nneyɛɛ adi kyerɛɛ Israel nyinaa.

< ಧರ್ಮೋಪದೇಶಕಾಂಡ 34 >