< ಧರ್ಮೋಪದೇಶಕಾಂಡ 8 >

1 ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.
כׇּל־הַמִּצְוָה אֲשֶׁר אָנֹכִי מְצַוְּךָ הַיּוֹם תִּשְׁמְרוּן לַעֲשׂוֹת לְמַעַן תִּֽחְיוּן וּרְבִיתֶם וּבָאתֶם וִֽירִשְׁתֶּם אֶת־הָאָרֶץ אֲשֶׁר־נִשְׁבַּע יְהֹוָה לַאֲבֹתֵיכֶֽם׃
2 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.
וְזָכַרְתָּ אֶת־כׇּל־הַדֶּרֶךְ אֲשֶׁר הוֹלִֽיכְךָ יְהֹוָה אֱלֹהֶיךָ זֶה אַרְבָּעִים שָׁנָה בַּמִּדְבָּר לְמַעַן עַנֹּֽתְךָ לְנַסֹּֽתְךָ לָדַעַת אֶת־אֲשֶׁר בִּֽלְבָבְךָ הֲתִשְׁמֹר מִצְוֺתָו אִם־לֹֽא׃
3 ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
וַֽיְעַנְּךָ וַיַּרְעִבֶךָ וַיַּאֲכִֽלְךָ אֶת־הַמָּן אֲשֶׁר לֹא־יָדַעְתָּ וְלֹא יָדְעוּן אֲבֹתֶיךָ לְמַעַן הוֹדִֽיעֲךָ כִּי לֹא עַל־הַלֶּחֶם לְבַדּוֹ יִחְיֶה הָֽאָדָם כִּי עַל־כׇּל־מוֹצָא פִֽי־יְהֹוָה יִחְיֶה הָאָדָֽם׃
4 ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.
שִׂמְלָתְךָ לֹא בָֽלְתָה מֵֽעָלֶיךָ וְרַגְלְךָ לֹא בָצֵקָה זֶה אַרְבָּעִים שָׁנָֽה׃
5 ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.
וְיָדַעְתָּ עִם־לְבָבֶךָ כִּי כַּאֲשֶׁר יְיַסֵּר אִישׁ אֶת־בְּנוֹ יְהֹוָה אֱלֹהֶיךָ מְיַסְּרֶֽךָּ׃
6 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಂಡು, ಅವರ ಮಾರ್ಗಗಳಲ್ಲಿ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
וְשָׁמַרְתָּ אֶת־מִצְוֺת יְהֹוָה אֱלֹהֶיךָ לָלֶכֶת בִּדְרָכָיו וּלְיִרְאָה אֹתֽוֹ׃
7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ.
כִּי יְהֹוָה אֱלֹהֶיךָ מְבִֽיאֲךָ אֶל־אֶרֶץ טוֹבָה אֶרֶץ נַחֲלֵי מָיִם עֲיָנֹת וּתְהֹמֹת יֹצְאִים בַּבִּקְעָה וּבָהָֽר׃
8 ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.
אֶרֶץ חִטָּה וּשְׂעֹרָה וְגֶפֶן וּתְאֵנָה וְרִמּוֹן אֶֽרֶץ־זֵית שֶׁמֶן וּדְבָֽשׁ׃
9 ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.
אֶרֶץ אֲשֶׁר לֹא בְמִסְכֵּנֻת תֹּֽאכַל־בָּהּ לֶחֶם לֹֽא־תֶחְסַר כֹּל בָּהּ אֶרֶץ אֲשֶׁר אֲבָנֶיהָ בַרְזֶל וּמֵהֲרָרֶיהָ תַּחְצֹב נְחֹֽשֶׁת׃
10 ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.
וְאָכַלְתָּ וְשָׂבָעְתָּ וּבֵֽרַכְתָּ אֶת־יְהֹוָה אֱלֹהֶיךָ עַל־הָאָרֶץ הַטֹּבָה אֲשֶׁר נָֽתַן־לָֽךְ׃
11 ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.
הִשָּׁמֶר לְךָ פֶּן־תִּשְׁכַּח אֶת־יְהֹוָה אֱלֹהֶיךָ לְבִלְתִּי שְׁמֹר מִצְוֺתָיו וּמִשְׁפָּטָיו וְחֻקֹּתָיו אֲשֶׁר אָנֹכִי מְצַוְּךָ הַיּֽוֹם׃
12 ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,
פֶּן־תֹּאכַל וְשָׂבָעְתָּ וּבָתִּים טֹבִים תִּבְנֶה וְיָשָֽׁבְתָּ׃
13 ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,
וּבְקָֽרְךָ וְצֹֽאנְךָ יִרְבְּיֻן וְכֶסֶף וְזָהָב יִרְבֶּה־לָּךְ וְכֹל אֲשֶׁר־לְךָ יִרְבֶּֽה׃
14 ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.
וְרָם לְבָבֶךָ וְשָֽׁכַחְתָּ אֶת־יְהֹוָה אֱלֹהֶיךָ הַמּוֹצִיאֲךָ מֵאֶרֶץ מִצְרַיִם מִבֵּית עֲבָדִֽים׃
15 ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.
הַמּוֹלִיכְךָ בַּמִּדְבָּר ׀ הַגָּדֹל וְהַנּוֹרָא נָחָשׁ ׀ שָׂרָף וְעַקְרָב וְצִמָּאוֹן אֲשֶׁר אֵֽין־מָיִם הַמּוֹצִיא לְךָ מַיִם מִצּוּר הַֽחַלָּמִֽישׁ׃
16 ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.
הַמַּֽאֲכִלְךָ מָן בַּמִּדְבָּר אֲשֶׁר לֹא־יָדְעוּן אֲבֹתֶיךָ לְמַעַן עַנֹּֽתְךָ וּלְמַעַן נַסֹּתֶךָ לְהֵיטִֽבְךָ בְּאַחֲרִיתֶֽךָ׃
17 ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.
וְאָמַרְתָּ בִּלְבָבֶךָ כֹּחִי וְעֹצֶם יָדִי עָשָׂה לִי אֶת־הַחַיִל הַזֶּֽה׃
18 ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.
וְזָֽכַרְתָּ אֶת־יְהֹוָה אֱלֹהֶיךָ כִּי הוּא הַנֹּתֵן לְךָ כֹּחַ לַעֲשׂוֹת חָיִל לְמַעַן הָקִים אֶת־בְּרִיתוֹ אֲשֶׁר־נִשְׁבַּע לַאֲבֹתֶיךָ כַּיּוֹם הַזֶּֽה׃
19 ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.
וְהָיָה אִם־שָׁכֹחַ תִּשְׁכַּח אֶת־יְהֹוָה אֱלֹהֶיךָ וְהָֽלַכְתָּ אַחֲרֵי אֱלֹהִים אֲחֵרִים וַעֲבַדְתָּם וְהִשְׁתַּחֲוִיתָ לָהֶם הַעִדֹתִי בָכֶם הַיּוֹם כִּי אָבֹד תֹּאבֵדֽוּן׃
20 ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.
כַּגּוֹיִם אֲשֶׁר יְהֹוָה מַאֲבִיד מִפְּנֵיכֶם כֵּן תֹּאבֵדוּן עֵקֶב לֹא תִשְׁמְעוּן בְּקוֹל יְהֹוָה אֱלֹהֵיכֶֽם׃

< ಧರ್ಮೋಪದೇಶಕಾಂಡ 8 >