< ಧರ್ಮೋಪದೇಶಕಾಂಡ 1 >

1 ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.
אֵ֣לֶּה הַדְּבָרִ֗ים אֲשֶׁ֨ר דִּבֶּ֤ר מֹשֶׁה֙ אֶל־כָּל־יִשְׂרָאֵ֔ל בְּעֵ֖בֶר הַיַּרְדֵּ֑ן בַּמִּדְבָּ֡ר בָּֽעֲרָבָה֩ מ֨וֹל ס֜וּף בֵּֽין־פָּארָ֧ן וּבֵֽין־תֹּ֛פֶל וְלָבָ֥ן וַחֲצֵרֹ֖ת וְדִ֥י זָהָֽב׃
2 ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.
אַחַ֨ד עָשָׂ֥ר יוֹם֙ מֵֽחֹרֵ֔ב דֶּ֖רֶךְ הַר־שֵׂעִ֑יר עַ֖ד קָדֵ֥שׁ בַּרְנֵֽעַ׃
3 ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.
וַיְהִי֙ בְּאַרְבָּעִ֣ים שָׁנָ֔ה בְּעַשְׁתֵּֽי־עָשָׂ֥ר חֹ֖דֶשׁ בְּאֶחָ֣ד לַחֹ֑דֶשׁ דִּבֶּ֤ר מֹשֶׁה֙ אֶל־בְּנֵ֣י יִשְׂרָאֵ֔ל כְּ֠כֹל אֲשֶׁ֨ר צִוָּ֧ה יְהוָ֛ה אֹת֖וֹ אֲלֵהֶֽם׃
4 ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.
אַחֲרֵ֣י הַכֹּת֗וֹ אֵ֚ת סִיחֹן֙ מֶ֣לֶךְ הָֽאֱמֹרִ֔י אֲשֶׁ֥ר יוֹשֵׁ֖ב בְּחֶשְׁבּ֑וֹן וְאֵ֗ת ע֚וֹג מֶ֣לֶךְ הַבָּשָׁ֔ן אֲשֶׁר־יוֹשֵׁ֥ב בְּעַשְׁתָּרֹ֖ת בְּאֶדְרֶֽעִי׃
5 ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ನಿಯಮವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:
בְּעֵ֥בֶר הַיַּרְדֵּ֖ן בְּאֶ֣רֶץ מוֹאָ֑ב הוֹאִ֣יל מֹשֶׁ֔ה בֵּאֵ֛ר אֶת־הַתּוֹרָ֥ה הַזֹּ֖את לֵאמֹֽר׃
6 ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು,
יְהוָ֧ה אֱלֹהֵ֛ינוּ דִּבֶּ֥ר אֵלֵ֖ינוּ בְּחֹרֵ֣ב לֵאמֹ֑ר רַב־לָכֶ֥ם שֶׁ֖בֶת בָּהָ֥ר הַזֶּֽה׃
7 ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
פְּנ֣וּ ׀ וּסְע֣וּ לָכֶ֗ם וּבֹ֨אוּ הַ֥ר הָֽאֱמֹרִי֮ וְאֶל־כָּל־שְׁכֵנָיו֒ בָּעֲרָבָ֥ה בָהָ֛ר וּבַשְּׁפֵלָ֥ה וּבַנֶּ֖גֶב וּבְח֣וֹף הַיָּ֑ם אֶ֤רֶץ הַֽכְּנַעֲנִי֙ וְהַלְּבָנ֔וֹן עַד־הַנָּהָ֥ר הַגָּדֹ֖ל נְהַר־פְּרָֽת׃
8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.
רְאֵ֛ה נָתַ֥תִּי לִפְנֵיכֶ֖ם אֶת־הָאָ֑רֶץ בֹּ֚אוּ וּרְשׁ֣וּ אֶת־הָאָ֔רֶץ אֲשֶׁ֣ר נִשְׁבַּ֣ע יְ֠הוָה לַאֲבֹ֨תֵיכֶ֜ם לְאַבְרָהָ֨ם לְיִצְחָ֤ק וּֽלְיַעֲקֹב֙ לָתֵ֣ת לָהֶ֔ם וּלְזַרְעָ֖ם אַחֲרֵיהֶֽם׃
9 ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.
וָאֹמַ֣ר אֲלֵכֶ֔ם בָּעֵ֥ת הַהִ֖וא לֵאמֹ֑ר לֹא־אוּכַ֥ל לְבַדִּ֖י שְׂאֵ֥ת אֶתְכֶֽם׃
10 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
יְהוָ֥ה אֱלֹהֵיכֶ֖ם הִרְבָּ֣ה אֶתְכֶ֑ם וְהִנְּכֶ֣ם הַיּ֔וֹם כְּכוֹכְבֵ֥י הַשָּׁמַ֖יִם לָרֹֽב׃
11 ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.
יְהוָ֞ה אֱלֹהֵ֣י אֲבֽוֹתֵכֶ֗ם יֹסֵ֧ף עֲלֵיכֶ֛ם כָּכֶ֖ם אֶ֣לֶף פְּעָמִ֑ים וִיבָרֵ֣ךְ אֶתְכֶ֔ם כַּאֲשֶׁ֖ר דִּבֶּ֥ר לָכֶֽם׃
12 ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?
אֵיכָ֥ה אֶשָּׂ֖א לְבַדִּ֑י טָרְחֲכֶ֥ם וּמַֽשַּׂאֲכֶ֖ם וְרִֽיבְכֶֽם׃
13 ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು.
הָב֣וּ לָ֠כֶם אֲנָשִׁ֨ים חֲכָמִ֧ים וּנְבֹנִ֛ים וִידֻעִ֖ים לְשִׁבְטֵיכֶ֑ם וַאֲשִׂימֵ֖ם בְּרָאשֵׁיכֶֽם׃
14 ಅದಕ್ಕೆ ನೀವು ನನಗೆ ಉತ್ತರವಾಗಿ, “ನೀನು ಹೇಳಿದ ಮಾತು ಮಾಡುವುದಕ್ಕೆ ಒಳ್ಳೆಯದು,” ಎಂದಿರಿ.
וַֽתַּעֲנ֖וּ אֹתִ֑י וַתֹּ֣אמְר֔וּ טֽוֹב־הַדָּבָ֥ר אֲשֶׁר־דִּבַּ֖רְתָּ לַעֲשֽׂוֹת׃
15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.
וָאֶקַּ֞ח אֶת־רָאשֵׁ֣י שִׁבְטֵיכֶ֗ם אֲנָשִׁ֤ים חֲכָמִים֙ וִֽידֻעִ֔ים וָאֶתֵּ֥ן אֹתָ֛ם רָאשִׁ֖ים עֲלֵיכֶ֑ם שָׂרֵ֨י אֲלָפִ֜ים וְשָׂרֵ֣י מֵא֗וֹת וְשָׂרֵ֤י חֲמִשִּׁים֙ וְשָׂרֵ֣י עֲשָׂרֹ֔ת וְשֹׁטְרִ֖ים לְשִׁבְטֵיכֶֽם׃
16 ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, “ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.
וָאֲצַוֶּה֙ אֶת־שֹׁ֣פְטֵיכֶ֔ם בָּעֵ֥ת הַהִ֖וא לֵאמֹ֑ר שָׁמֹ֤עַ בֵּין־אֲחֵיכֶם֙ וּשְׁפַטְתֶּ֣ם צֶ֔דֶק בֵּֽין־אִ֥ישׁ וּבֵין־אָחִ֖יו וּבֵ֥ין גֵּרֽוֹ׃
17 ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.
לֹֽא־תַכִּ֨ירוּ פָנִ֜ים בַּמִּשְׁפָּ֗ט כַּקָּטֹ֤ן כַּגָּדֹל֙ תִּשְׁמָע֔וּן לֹ֤א תָג֙וּרוּ֙ מִפְּנֵי־אִ֔ישׁ כִּ֥י הַמִּשְׁפָּ֖ט לֵאלֹהִ֣ים ה֑וּא וְהַדָּבָר֙ אֲשֶׁ֣ר יִקְשֶׁ֣ה מִכֶּ֔ם תַּקְרִב֥וּן אֵלַ֖י וּשְׁמַעְתִּֽיו׃
18 ಹೀಗೆ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ಆ ಕಾಲದಲ್ಲಿ ನಿಮಗೆ ಆಜ್ಞಾಪಿಸಿದೆನು.
וָאֲצַוֶּ֥ה אֶתְכֶ֖ם בָּעֵ֣ת הַהִ֑וא אֵ֥ת כָּל־הַדְּבָרִ֖ים אֲשֶׁ֥ר תַּעֲשֽׂוּן׃
19 ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.
וַנִּסַּ֣ע מֵחֹרֵ֗ב וַנֵּ֡לֶךְ אֵ֣ת כָּל־הַמִּדְבָּ֣ר הַגָּדוֹל֩ וְהַנּוֹרָ֨א הַה֜וּא אֲשֶׁ֣ר רְאִיתֶ֗ם דֶּ֚רֶךְ הַ֣ר הָֽאֱמֹרִ֔י כַּאֲשֶׁ֥ר צִוָּ֛ה יְהוָ֥ה אֱלֹהֵ֖ינוּ אֹתָ֑נוּ וַנָּבֹ֕א עַ֖ד קָדֵ֥שׁ בַּרְנֵֽעַ׃
20 ಆಗ ನಾನು ನಿಮಗೆ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ಅಮೋರಿಯರ ಮಲೆನಾಡಿಗೆ ಹತ್ತಿರ ಬಂದಿದ್ದೀರಿ.
וָאֹמַ֖ר אֲלֵכֶ֑ם בָּאתֶם֙ עַד־הַ֣ר הָאֱמֹרִ֔י אֲשֶׁר־יְהוָ֥ה אֱלֹהֵ֖ינוּ נֹתֵ֥ן לָֽנוּ׃
21 ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.
רְ֠אֵה נָתַ֨ן יְהוָ֧ה אֱלֹהֶ֛יךָ לְפָנֶ֖יךָ אֶת־הָאָ֑רֶץ עֲלֵ֣ה רֵ֗שׁ כַּאֲשֶׁר֩ דִּבֶּ֨ר יְהוָ֜ה אֱלֹהֵ֤י אֲבֹתֶ֙יךָ֙ לָ֔ךְ אַל־תִּירָ֖א וְאַל־תֵּחָֽת׃
22 ಆಗ ನೀವೆಲ್ಲರು ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸೋಣ. ಅವರು ನಮಗೆ ದೇಶವನ್ನು ಸಂಚರಿಸಿ ನೋಡಿ, ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತರಲಿ,” ಎಂದು ಹೇಳಿದಿರಿ.
וַתִּקְרְב֣וּן אֵלַי֮ כֻּלְּכֶם֒ וַתֹּאמְר֗וּ נִשְׁלְחָ֤ה אֲנָשִׁים֙ לְפָנֵ֔ינוּ וְיַחְפְּרוּ־לָ֖נוּ אֶת־הָאָ֑רֶץ וְיָשִׁ֤בוּ אֹתָ֙נוּ֙ דָּבָ֔ר אֶת־הַדֶּ֙רֶךְ֙ אֲשֶׁ֣ר נַעֲלֶה־בָּ֔הּ וְאֵת֙ הֶֽעָרִ֔ים אֲשֶׁ֥ר נָבֹ֖א אֲלֵיהֶֽן׃
23 ಆ ಮಾತು ನನಗೆ ಒಳ್ಳೆಯದೆಂದು ತೋಚಿತು. ನಾನು ನಿಮ್ಮಲ್ಲಿ ಗೋತ್ರಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.
וַיִּיטַ֥ב בְּעֵינַ֖י הַדָּבָ֑ר וָאֶקַּ֤ח מִכֶּם֙ שְׁנֵ֣ים עָשָׂ֣ר אֲנָשִׁ֔ים אִ֥ישׁ אֶחָ֖ד לַשָּֽׁבֶט׃
24 ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ,
וַיִּפְנוּ֙ וַיַּעֲל֣וּ הָהָ֔רָה וַיָּבֹ֖אוּ עַד־נַ֣חַל אֶשְׁכֹּ֑ל וַֽיְרַגְּל֖וּ אֹתָֽהּ׃
25 ಆ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತೆಗೆದುಕೊಂಡು, ನಮ್ಮ ಬಳಿಗೆ ತಂದು ತೋರಿಸಿ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶವು ಒಳ್ಳೆಯದು,” ಎಂದು ವರದಿಮಾಡಿದರು.
וַיִּקְח֤וּ בְיָדָם֙ מִפְּרִ֣י הָאָ֔רֶץ וַיּוֹרִ֖דוּ אֵלֵ֑ינוּ וַיָּשִׁ֨בוּ אֹתָ֤נוּ דָבָר֙ וַיֹּ֣אמְר֔וּ טוֹבָ֣ה הָאָ֔רֶץ אֲשֶׁר־יְהוָ֥ה אֱלֹהֵ֖ינוּ נֹתֵ֥ן לָֽנוּ׃
26 ಆದರೆ ನೀವು ಮೇಲೆ ಹತ್ತಿ ಹೋಗುವುದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದಿರಿ.
וְלֹ֥א אֲבִיתֶ֖ם לַעֲלֹ֑ת וַתַּמְר֕וּ אֶת־פִּ֥י יְהוָ֖ה אֱלֹהֵיכֶֽם׃
27 ನೀವು ನಿಮ್ಮ ಗುಡಾರಗಳಲ್ಲಿ ಗೊಣಗುಟ್ಟಿ, “ಯೆಹೋವ ದೇವರು ನಮ್ಮನ್ನು ಹಗೆ ಮಾಡಿದ್ದರಿಂದ, ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ, ನಮ್ಮನ್ನು ನಾಶಮಾಡುವುದಕ್ಕೆ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದಾರೆ.
וַתֵּרָגְנ֤וּ בְאָהֳלֵיכֶם֙ וַתֹּ֣אמְר֔וּ בְּשִׂנְאַ֤ת יְהוָה֙ אֹתָ֔נוּ הוֹצִיאָ֖נוּ מֵאֶ֣רֶץ מִצְרָ֑יִם לָתֵ֥ת אֹתָ֛נוּ בְּיַ֥ד הָאֱמֹרִ֖י לְהַשְׁמִידֵֽנוּ׃
28 ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.
אָנָ֣ה ׀ אֲנַ֣חְנוּ עֹלִ֗ים אַחֵינוּ֩ הֵמַ֨סּוּ אֶת־לְבָבֵ֜נוּ לֵאמֹ֗ר עַ֣ם גָּד֤וֹל וָרָם֙ מִמֶּ֔נּוּ עָרִ֛ים גְּדֹלֹ֥ת וּבְצוּרֹ֖ת בַּשָּׁמָ֑יִם וְגַם־בְּנֵ֥י עֲנָקִ֖ים רָאִ֥ינוּ שָֽׁם׃
29 ಆಗ ನಾನು ನಿಮಗೆ, “ಅಂಜಬೇಡಿರಿ, ಅವರಿಗೆ ಭಯಪಡಬೇಡಿರಿ.
וָאֹמַ֖ר אֲלֵכֶ֑ם לֹא־תַֽעַרְצ֥וּן וְֽלֹא־תִֽירְא֖וּן מֵהֶֽם׃
30 ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.
יְהוָ֤ה אֱלֹֽהֵיכֶם֙ הַהֹלֵ֣ךְ לִפְנֵיכֶ֔ם ה֖וּא יִלָּחֵ֣ם לָכֶ֑ם כְּ֠כֹל אֲשֶׁ֨ר עָשָׂ֧ה אִתְּכֶ֛ם בְּמִצְרַ֖יִם לְעֵינֵיכֶֽם׃
31 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಹೊರುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊತ್ತು ತಂದರಲ್ಲವೇ?” ಎಂದು ನಿಮಗೆ ಹೇಳಿದೆನು.
וּבַמִּדְבָּר֙ אֲשֶׁ֣ר רָאִ֔יתָ אֲשֶׁ֤ר נְשָׂאֲךָ֙ יְהוָ֣ה אֱלֹהֶ֔יךָ כַּאֲשֶׁ֥ר יִשָׂא־אִ֖ישׁ אֶת־בְּנ֑וֹ בְּכָל־הַדֶּ֙רֶךְ֙ אֲשֶׁ֣ר הֲלַכְתֶּ֔ם עַד־בֹּאֲכֶ֖ם עַד־הַמָּק֥וֹם הַזֶּֽה׃
32 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ.
וּבַדָּבָ֖ר הַזֶּ֑ה אֵֽינְכֶם֙ מַאֲמִינִ֔ם בַּיהוָ֖ה אֱלֹהֵיכֶֽם׃
33 ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.
הַהֹלֵ֨ךְ לִפְנֵיכֶ֜ם בַּדֶּ֗רֶךְ לָת֥וּר לָכֶ֛ם מָק֖וֹם לַֽחֲנֹֽתְכֶ֑ם בָּאֵ֣שׁ ׀ לַ֗יְלָה לַרְאֹֽתְכֶם֙ בַּדֶּ֙רֶךְ֙ אֲשֶׁ֣ר תֵּֽלְכוּ־בָ֔הּ וּבֶעָנָ֖ן יוֹמָֽם׃
34 ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ, ಬೇಸರಗೊಂಡು, ಪ್ರಮಾಣಮಾಡಿ,
וַיִּשְׁמַ֥ע יְהוָ֖ה אֶת־ק֣וֹל דִּבְרֵיכֶ֑ם וַיִּקְצֹ֖ף וַיִּשָּׁבַ֥ע לֵאמֹֽר׃
35 “ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ.
אִם־יִרְאֶ֥ה אִישׁ֙ בָּאֲנָשִׁ֣ים הָאֵ֔לֶּה הַדּ֥וֹר הָרָ֖ע הַזֶּ֑ה אֵ֚ת הָאָ֣רֶץ הַטּוֹבָ֔ה אֲשֶׁ֣ר נִשְׁבַּ֔עְתִּי לָתֵ֖ת לַאֲבֹתֵיכֶֽם׃
36 ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು.
זֽוּלָתִ֞י כָּלֵ֤ב בֶּן־יְפֻנֶּה֙ ה֣וּא יִרְאֶ֔נָּה וְלֽוֹ־אֶתֵּ֧ן אֶת־הָאָ֛רֶץ אֲשֶׁ֥ר דָּֽרַךְ־בָּ֖הּ וּלְבָנָ֑יו יַ֕עַן אֲשֶׁ֥ר מִלֵּ֖א אַחֲרֵ֥י יְהוָֽה׃
37 ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.
גַּם־בִּי֙ הִתְאַנַּ֣ף יְהוָ֔ה בִּגְלַלְכֶ֖ם לֵאמֹ֑ר גַּם־אַתָּ֖ה לֹא־תָבֹ֥א שָֽׁם׃
38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.
יְהוֹשֻׁ֤עַ בִּן נוּן֙ הָעֹמֵ֣ד לְפָנֶ֔יךָ ה֖וּא יָ֣בֹא שָׁ֑מָּה אֹת֣וֹ חַזֵּ֔ק כִּי־ה֖וּא יַנְחִלֶ֥נָּה אֶת־יִשְׂרָאֵֽל׃
39 ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
וְטַפְּכֶם֩ אֲשֶׁ֨ר אֲמַרְתֶּ֜ם לָבַ֣ז יִהְיֶ֗ה וּ֠בְנֵיכֶם אֲשֶׁ֨ר לֹא־יָדְע֤וּ הַיּוֹם֙ ט֣וֹב וָרָ֔ע הֵ֖מָּה יָבֹ֣אוּ שָׁ֑מָּה וְלָהֶ֣ם אֶתְּנֶ֔נָּה וְהֵ֖ם יִירָשֽׁוּהָּ׃
40 ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರ ಮಾರ್ಗವಾಗಿ ಮರುಭೂಮಿಗೆ ಹೊರಟು ಹೋಗಿರಿ,” ಎಂದು ಹೇಳಿದರು.
וְאַתֶּ֖ם פְּנ֣וּ לָכֶ֑ם וּסְע֥וּ הַמִּדְבָּ֖רָה דֶּ֥רֶךְ יַם־סֽוּף׃
41 ಆಗ ನೀವು ಉತ್ತರಕೊಟ್ಟು ನನಗೆ, “ಯೆಹೋವ ದೇವರಿಗೆ ಪಾಪಮಾಡಿದ್ದೇವೆ. ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ನಾವು ಬೆಟ್ಟವನ್ನು ಹತ್ತಿ ಯುದ್ಧ ಮಾಡುತ್ತೇವೆ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಮೇಲೆ ಬೆಟ್ಟಕ್ಕೆ ಹೊರಟುಹೋಗುವುದು ಸಣ್ಣ ಕೆಲಸ,” ಎಂದು ಹೇಳಿದಿರಿ.
וַֽתַּעֲנ֣וּ ׀ וַתֹּאמְר֣וּ אֵלַ֗י חָטָאנוּ֮ לַֽיהוָה֒ אֲנַ֤חְנוּ נַעֲלֶה֙ וְנִלְחַ֔מְנוּ כְּכֹ֥ל אֲשֶׁר־צִוָּ֖נוּ יְהוָ֣ה אֱלֹהֵ֑ינוּ וַֽתַּחְגְּר֗וּ אִ֚ישׁ אֶת־כְּלֵ֣י מִלְחַמְתּ֔וֹ וַתָּהִ֖ינוּ לַעֲלֹ֥ת הָהָֽרָה׃
42 ಆದರೆ ಯೆಹೋವ ದೇವರು ನನಗೆ, “‘ಏರಿ ಹೋಗಬೇಡಿರಿ, ಯುದ್ಧಮಾಡಬೇಡಿರಿ. ಏಕೆಂದರೆ ನಾನು ನಿಮ್ಮ ಮಧ್ಯದಲ್ಲಿ ಇಲ್ಲ. ನೀವು ನಿಮ್ಮ ಶತ್ರುಗಳಿಂದ ಸೋಲನ್ನು ಅನುಭವಿಸುವಿರಿ,’ ಎಂದು ಅವರಿಗೆ ಹೇಳು,” ಎಂದರು.
וַיֹּ֨אמֶר יְהוָ֜ה אֵלַ֗י אֱמֹ֤ר לָהֶם֙ לֹ֤א תַֽעֲלוּ֙ וְלֹא־תִלָּ֣חֲמ֔וּ כִּ֥י אֵינֶ֖נִּי בְּקִרְבְּכֶ֑ם וְלֹא֙ תִּנָּֽגְפ֔וּ לִפְנֵ֖י אֹיְבֵיכֶֽם׃
43 ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.
וָאֲדַבֵּ֥ר אֲלֵיכֶ֖ם וְלֹ֣א שְׁמַעְתֶּ֑ם וַתַּמְרוּ֙ אֶת־פִּ֣י יְהוָ֔ה וַתָּזִ֖דוּ וַתַּעֲל֥וּ הָהָֽרָה׃
44 ಆಗ ಆ ಬೆಟ್ಟದಲ್ಲಿ ವಾಸಮಾಡುತ್ತಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು, ಜೇನುಹುಳಗಳು ಮುತ್ತಿದಂತೆ ನಿಮ್ಮ ಬೆನ್ನು ಹತ್ತಿ, ಸೇಯೀರಿನಲ್ಲಿ ಹೊರ್ಮಾದವರೆಗೂ ನಿಮ್ಮನ್ನು ಸಂಹಾರ ಮಾಡಿದರು.
וַיֵּצֵ֨א הָאֱמֹרִ֜י הַיֹּשֵׁ֨ב בָּהָ֤ר הַהוּא֙ לִקְרַאתְכֶ֔ם וַיִּרְדְּפ֣וּ אֶתְכֶ֔ם כַּאֲשֶׁ֥ר תַּעֲשֶׂ֖ינָה הַדְּבֹרִ֑ים וַֽיַּכְּת֥וּ אֶתְכֶ֛ם בְּשֵׂעִ֖יר עַד־חָרְמָֽה׃
45 ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ.
וַתָּשֻׁ֥בוּ וַתִּבְכּ֖וּ לִפְנֵ֣י יְהוָ֑ה וְלֹֽא־שָׁמַ֤ע יְהוָה֙ בְּקֹ֣לְכֶ֔ם וְלֹ֥א הֶאֱזִ֖ין אֲלֵיכֶֽם׃
46 ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ.
וַתֵּשְׁב֥וּ בְקָדֵ֖שׁ יָמִ֣ים רַבִּ֑ים כַּיָּמִ֖ים אֲשֶׁ֥ר יְשַׁבְתֶּֽם׃

< ಧರ್ಮೋಪದೇಶಕಾಂಡ 1 >